ಪಠ್ಯೇತರ ಚಟುವಟಿಕೆ ಅಗತ್ಯ

Team Udayavani, Dec 22, 2019, 11:15 AM IST

huballi-tdy-4

ಹುಬ್ಬಳ್ಳಿ: ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳು ಅವಶ್ಯವಾಗಿದ್ದು, ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸಂಗೀತ-ವಿವಿಧ ಕ್ರೀಡೆಗಳು ಮುಖ್ಯವಾಗಿವೆ ಎಂದು ಎಸ್‌ಡಿಎಂ ವೈದ್ಯ ಕಾಲೇಜು ಮತ್ತು ಆಸ್ಪತ್ರೆ ರೋಗಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಆದಿತ್ಯ ಅಗ್ನಿಹೋತ್ರಿ ಹೇಳಿದರು.

ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ ಆಯೋಜಿಸಿದ್ದ ದಾಕ್ಷಾಯಣಿ ಕಲ್ಯಾಣಶೆಟ್ಟರ ಪಬ್ಲಿಕ್‌ ಸ್ಕೂಲ್‌ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಠ್ಯೇತರ ಚಟುವಟಿಕೆಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಲಿವೆ. ದಾಕ್ಷಾಯಣಿ ಕಲ್ಯಾಣಶೆಟ್ಟರ ಪಬ್ಲಿಕ್‌ ಸ್ಕೂಲ್‌ನಲ್ಲಿ ಸಂಗೀತ, ಈಜು, ಕರಾಟೆ, ತಬಲಾ, ಬ್ಯಾಡ್ಮಿಂಟನ್‌ ಹೀಗೆ ವಿವಿಧ ತರಬೇತಿಯನ್ನು ಮಕ್ಕಳಿಗೆ ನೀಡುತ್ತಿರುವುದು ಶ್ಲಾಘನಿಯ ಎಂದರು. ಮಕ್ಕಳು ಕಲಿಕೆಯಲ್ಲಿ ಸಹಪಾಠಿಗಳೊಂದಿಗೆ ಬೆರೆತು ಕಲಿಯುವುದು, ಶಿಕ್ಷಕರ ಬೋಧನೆಯೊಂದಿಗೆ ಕಲಿಯುವುದು ಜತೆಗೆ ತನ್ನ ಸ್ನೇಹಿತರು, ಶಿಕ್ಷಕರು, ಪಾಲಕರು, ಸಂಬಂಧಿಕರೊಂದಿಗೆ ಹೇಗೆ ವರ್ತಿಸಬೇಕು ಎಂಬುದರ ಮನನ ಅತ್ಯವಶ್ಯವಾಗಿದೆ ಎಂದು ಹೇಳಿದರು.

ಜೆ.ಕೆ. ಸ್ಕೂಲ್‌, ದಾಕ್ಷಾಯಣಿ ಕಲ್ಯಾಣಶೆಟ್ಟರ ಪಬ್ಲಿಕ್‌ ಸ್ಕೂಲ್‌ ಆಡಳಿತ ಮಂಡಳಿ ಅಧ್ಯಕ್ಷ ಜಗದೀಶ ಕಲ್ಯಾಣಶೆಟ್ಟರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮೆಟ್ರೋ ನಗರಗಳಲ್ಲಿನ ಪ್ರತಿಷ್ಠಿತ ಶಾಲೆಗಳು ನೀಡುವಂತಹ ಗುಣಮಟ್ಟದ ಶಿಕ್ಷಣದ ಜತೆಗೆ, ಹೆಚ್ಚಿನ ಸೌಲಭ್ಯಗಳನ್ನು ಮಕ್ಕಳಿಗೆ ನೀಡಲಾಗುತ್ತಿದೆ. ಸುಮಾರು 4 ಸಾವಿರ ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸೌಲಭ್ಯಗಳನ್ನು ನೀಡಲಾಗುವುದು ಎಂದರು. ಶಿಕ್ಷಕರ ಶ್ರಮ ಹಾಗೂ ಪಾಲಕರ ಸಹಕಾರದಿಂದ ಇಂತಹ ಸಾಧನೆ-ಸೌಲಭ್ಯಗಳು ಸಾಧ್ಯವಾಗುತ್ತಿವೆ. ಶಾಲಾ ವಾರ್ಷಿಕೋತ್ಸವದಲ್ಲಿ ಬಾಲಿವುಡ್‌ ಚಿತ್ರಗಳ ಹಾಡುಗಳನ್ನು ಹಾಕಿ ಮಕ್ಕಳನ್ನು ಕುಣಿಸುವ ಬದಲು ಭಾರತೀಯ ಸಂಸ್ಕೃತಿ, ಪರಂಪರೆಗೆ ಪೂರಕ ಹಾಗೂ ಇತಿಹಾಸ ನೆನಪಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಮಕ್ಕಳಲ್ಲಿಯೂ ದೇಶಪ್ರೇಮ, ಸಂಸ್ಕೃತಿ-ಪರಂಪರೆ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದರು.

ದಾಕ್ಷಾಯಣಿ ಕಲ್ಯಾಣಶೆಟ್ಟರ ಪಬ್ಲಿಕ್‌ ಶಾಲೆ ಉಪಾಧ್ಯಕ್ಷೆ ಸವಿತಾ ಕಲ್ಯಾಣ ಶೆಟ್ಟರ, ಪ್ರಾಂಶುಪಾಲ ವಿ. ಇಂದಿರಾ ಇನ್ನಿತರರು ಇದ್ದರು. ಕಳೆದ ವರ್ಷ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಹಾಗೂ ಈ ವರ್ಷದ ಅತ್ಯುತ್ತಮ ವಿದ್ಯಾರ್ಥಿಗಳಿಬ್ಬರಿಗೆ ಪ್ರಶಸ್ತಿ ನೀಡಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.