ಮಳೆಗೆ ಕುಸಿದು ಬಿದ್ದ  ಶಾಲಾ ಕೊಠಡಿ


Team Udayavani, Jun 24, 2018, 3:46 PM IST

24-june-20.jpg

ಬಾದಾಮಿ: ಶುಕ್ರವಾರ ರಾತ್ರಿ ಬಿದ್ದ ಮಳೆಗೆ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ಕಟ್ಟಡ ಕುಸಿದು ಬಿದ್ದಿದೆ. ಇಂತಹ ಶಿಥಿಲಾವಸ್ಥೆಯ ಕಟ್ಟಡದಲ್ಲಿ ಮಕ್ಕಳು ಭಯದ ವಾತಾವರಣದಲ್ಲಿ ಕಲಿಯುತ್ತಿದ್ದಾರೆ.

ತಾಲೂಕು ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು 1965ರಲ್ಲಿ ಅಂದಿನ ಶಾಸಕರಾಗಿದ್ದ ದಿಂ.ಕೆ.ಎಂ.ಪಟ್ಟಣಶೆಟ್ಟಿಯವರು ಶಂಕುಸ್ಥಾಪನೆ ನೆರವೇರಿಸಿದ್ದರು. ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಈ ಶಾಲೆಯಲ್ಲಿ 1 ರಿಂದ 7 ನೇ ತರಗತಿಯವರೆಗೆ ಶಿಕ್ಷಣ ನೀಡುತ್ತಿದ್ದು, ಒಟ್ಟು 185 ಮಕ್ಕಳು ಅಧ್ಯಯನ ಮಾಡುತ್ತಿದ್ದಾರೆ. ಒಟ್ಟು 8 ಜನ ಶಿಕ್ಷಕರಿದ್ದಾರೆ. ತರಗತಿಗೆ ತಕ್ಕಂತೆ ಈ ಶಾಲೆಗೆ 7 ಕೊಠಡಿಗಳು ಬೇಕಾಗಿದ್ದು, ಈಗ 4 ಕೊಠಡಿಗಳಿವೆ. ಇದರಲ್ಲಿ 3 ಹಂಚಿನ ಕಟ್ಟಡ ಸುಸ್ಥಿತಿಯಲ್ಲಿವೆ. ಈಗ ಒಂದು ಕೊಠಡಿ ಶಿಥಿಲಾವಸ್ಥೆಯಿಂದ ಕುಸಿದು ಬಿದ್ದಿದೆ.

ಬಯಲಲ್ಲಿಯೇ ಪಾಠ: ಶಾಲೆಯಲ್ಲಿ ಅಗತ್ಯ ತಕ್ಕಂತೆ ಶಾಲಾ ಕೊಠಡಿಗಳು ಇಲ್ಲದ ಕಾರಣ ಮಕ್ಕಳು ಶಾಲೆಯ ಹೊರಗೆ ಬಯಲಿನಲ್ಲಿ ಪಾಠ ಅಧ್ಯಯನ ಮಾಡುತ್ತಿದ್ದಾರೆ. ಮಕ್ಕಳ ಸಂಖ್ಯೆ ಮತ್ತು ತರಗತಿಗೊಂದರಂತೆ ಶಾಲಾ ಕೊಠಡಿಗಳು ಇಲ್ಲದ ಕಾರಣ ಕೊಠಡಿ ಕೊರತೆ ಇರುವುದರಿಂದ ಪಾಠ ಮಾಡಲು ತೊಂದರೆಯಾಗಿದೆ.

ಗುಣಮಟ್ಟದ ಶಿಕ್ಷಣ: ಶಾಲೆಯಲ್ಲಿ 8 ಜನ ಶಿಕ್ಷಕರು ಪಾಠ ಮಾಡುತಿದ್ದು, ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಚೆಸ್‌ನಲ್ಲಿ ಈ ಶಾಲೆಯ ಮಹಾಲಕ್ಷ್ಮೀ ಕೋರನ್ನವರ, ಶೈಲಾ ನಂದಿಕೇಶ್ವರ ಸೇರಿದಂತೆ ಇತರ ಮಕ್ಕಳು ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ, ಬಹುಮಾನ ಪಡೆದಿದ್ದಾರೆ. ವಾಲಿಬಾಲ್‌, ಕಬಡ್ಡಿ, ಖೋಖೋ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ನೂತನ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯನವರು ಕಳೆದ ಜೂ.11 ರಂದು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಶಾಲೆಯಲ್ಲಿ ಮೂಲ ಸೌಕರ್ಯಗಳಾದ ನೀರು, ಶೌಚಾಲಯ, ಆಟದ ಮೈದಾನ, ಕೊಠಡಿಗಳಲ್ಲಿ ಶಾಲಾ ಶಿಕ್ಷಕರೇ ಸ್ವಂತ ಹಣದಿಂದ ಪೈಪ್‌ಲೈನ್‌ ಅಳವಡಿಸಿ ನೀರಿನ ಸೌಕರ್ಯ ಮಾಡಿಕೊಂಡಿದ್ದಾರೆ. ಶಾಲೆಯಲ್ಲಿ ಶೌಚಾಲಯ ಇಲ್ಲದಾಗಿದೆ. ನೂತನ ಶೌಚಾಲಯ ನಿರ್ಮಾಣಕ್ಕಾಗಿ ಸರಕಾರದಿಂದ ಕಳೆದ ವರ್ಷವೇ ರೂ.1,75,000 ಮಂಜೂರಾಗಿದೆ. ಆದರೆ ಇದುವರೆಗೂ ಶೌಚಾಲಯ ನಿರ್ಮಿಸಿಲ್ಲ. ಇದರಿಂದ ಮಕ್ಕಳು ತೊಂದರೆ ಪಡುವಂತಾಗಿದೆ. ಆಟದ ಮೈದಾನ ಮತ್ತು ಕೊಠಡಿಗಳು ಇಲ್ಲದ ಕಾರಣ ಮಕ್ಕಳ ಕಲಿಕೆಗೆ ಬಹಳಷ್ಟು ತೊಂದರೆಯಾಗಿದೆ ಎಂದು ಪಾಲಕರು ಆತಂಕ ವ್ಯಕ್ತಪಡಿಸಿದ್ದಾರೆ.

ಜನಪ್ರತಿನಿಧಿಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ತುರ್ತು ಗಮನಹರಿಸಿ ಅಗತ್ಯ ಶಾಲಾ ಕೊಠಡಿಗಳನ್ನು ನಿರ್ಮಿಸುವುದರ ಜೊತೆಗೆ ಹಾಲಿ ಇರುವ ಕೊಠಡಿ ದುರಸ್ತಿ ಮಾಡಿಸಬೇಕು ಎಂದು ಪಾಲಕರು, ಎಸ್‌ಡಿಎಂಸಿ ಸದಸ್ಯರು, ಗ್ರಾಮಸ್ಥರು ಆಗ್ರಹಿಸಿದ್ದಾರೆ .

ಶಾಸಕ ಸಿದ್ದರಾಮಯ್ಯನವರು ಊರಿಗೆ ಭೇಟಿ ನೀಡಿದಾಗ ಶಾಲೆಗೆ ಅಗತ್ಯ ಕೊಠಡಿ ನಿರ್ಮಿಸಬೇಕು ಎಂದು ಮನವಿ
ಸಲ್ಲಿಸಲಾಗಿದೆ. ಈ ಕುರಿತು ಇಲಾಖೆಯ ಮೇಲಾಧಿಕಾರಿಗಳಿಗೂ ಸಹ ಬೇಡಿಕೆ ಸಲ್ಲಿಸಲಾಗಿದೆ.
 ಬಿ.ಎಂ.ರೂಢಗಿ, ಶಾಲಾ ಮುಖ್ಯಶಿಕ್ಷಕಿ.

ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ತಕ್ಕಂತೆ ಶಾಲಾ ಕೊಠಡಿಗಳು ಇಲ್ಲದಾಗಿದೆ. ಇದರಿಂದ ಶಿಕ್ಷಣಕ್ಕೆ ತೊಂದರೆಯಾಗಿದೆ. ಕೂಡಲೇ ಸಂಬಂಧಿಸಿದವರು ಗಮನಹರಿಸಿ ಶೌಚಾಲಯ ಮತ್ತು ಅಗತ್ಯ ಶಾಲಾ ಕೊಠಡಿ ನಿರ್ಮಿಸಬೇಕು.
ಮಕ್ಕಳ ಪಾಲಕರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.