ಕಣ್ಣೀರು ತರಿಸಿದ ಉಳ್ಳಾಗಡ್ಡಿ


Team Udayavani, Nov 5, 2019, 10:37 AM IST

huballi-tdy-3

ಹುಬ್ಬಳ್ಳಿ: ಇಲ್ಲಿನ ಅಮರಗೋಳದ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಉಳ್ಳಾಗಡ್ಡಿ ದರ ಏಕಾಏಕಿ ಕುಸಿದಿದ್ದನ್ನು ಖಂಡಿಸಿ ರೈತರು ಹುಬ್ಬಳ್ಳಿ-ಧಾರವಾಡ ರಸ್ತೆ ಒಂದು ಗಂಟೆ ಬಂದ್‌ ಮಾಡಿದ ಘಟನೆ ಸೋಮವಾರ ನಡೆಯಿತು.

ಬೆಳಗ್ಗೆ 11 ಗಂಟೆಗೆ ಟೆಂಡರ್‌ ಆರಂಭವಾಗುತ್ತಿದ್ದಂತೆಯೇ ಉಳ್ಳಾಗಡ್ಡಿ ದರ ಕ್ವಿಂಟಲ್‌ಗೆ 1500ರೂ.ದಿಂದ 2000ರೂ. ವರೆಗೆ ನಿಗದಿಯಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೈತರು, ಶನಿವಾರದ ದರ ನೀಡಬೇಕೆಂದು ಒತ್ತಾಯಿಸಿದರು. ವ್ಯಾಪಾರಸ್ಥರಿಂದ ಸ್ಪಂದನೆ ದೊರೆಯದಿದ್ದಾಗ, ರೈತರು ರಸ್ತೆ ತಡೆಗೆ ಮುಂದಾದರು.

ಸುಮಾರು 70-80 ರೈತರು ಹು-ಧಾ ರಸ್ತೆಯ ಮಧ್ಯೆ ಕಲ್ಲುಗಳನ್ನಿಟ್ಟು ರಸ್ತೆ ಬಂದ್‌ ಮಾಡಿದರು. ಪರ್ಯಾಯ ಮಾರ್ಗದಲ್ಲಿ ಸಂಚಾರ ಕಲ್ಪಿಸಲಾಗಿತ್ತು. ಬಿಆರ್‌ಟಿಎಸ್‌ ಬಸ್‌ಗಳಿಗೆ ಸಂಚಾರಕ್ಕೆ ಅವಕಾಶ ಇಲ್ಲದೆ ಸಾಲುಗಟ್ಟಿ ನಿಂತಿದ್ದವು. ಪೊಲೀಸರು ಆಗಮಿಸಿ ರೈತರ ಮನವೊಲಿಕೆಗೆ ಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಎಪಿಎಂಸಿ ಅಧ್ಯಕ್ಷರು ಬರಬೇಕೆಂದು ರೈತರು ಪಟ್ಟು ಹಿಡಿದರು. ಎಪಿಎಂಸಿ ಅಧ್ಯಕ್ಷ ಜಗನ್ನಾಥಗೌಡ ಸಿದ್ದನಗೌಡರ ಆಗಮಿಸಿ, ರೈತರು ಹಾಗೂ ವ್ಯಾಪಾರಸ್ಥರ ಸಭೆ ಕರೆಯುವುದಾಗಿ ಭರವಸೆ ನೀಡಿದ್ದರಿಂದ ರೈತರು ರಸ್ತೆ ತಡೆ ಹಿಂತೆ‌ಗೆದುಕೊಂಡರು.

ಗೊಂದಲ: ತಮ್ಮ ಬೇಡಿಕೆಗಳಿಗೆ ಆಗ್ರಹಿಸಿ ಹಮಾಲಿ ಕಾರ್ಮಿಕರು ಇದೇ ವೇಳೆ ಧರಣಿಗೆ ಮುಂದಾಗಿದ್ದರಿಂದ ಗೊಂದಲ ಸೃಷ್ಟಿಯಾಯಿತು. ವ್ಯಾಪಾರಸ್ಥರು ಉದ್ದೇಶಪೂರ್ವಕವಾಗಿ ಹಮಾಲಿ ಕಾರ್ಮಿಕರ ಮೂಲಕ ಹೋರಾಟ ಮಾಡಿಸುತ್ತಿದ್ದಾರೆಂದು ರೈತರು ಆರೋಪಿಸಿದರು. ಈ ವೇಳೆ ರೈತರು-ಹಮಾಲರಮಧ್ಯ ಮಾತಿನ ಚಕಮಕಿ ನಡೆಯಿತು. ವ್ಯಾಪಾರಸ್ಥರು ಹಮಾಲರಿಗೆ ಬೆಂಬಲ ನೀಡಿದ್ದು ರೈತರ ಆಕ್ರೋಶ ಇನ್ನಷ್ಟು ಹೆಚ್ಚುವಂತೆ ಮಾಡಿತು.

ಅಸಮಾಧಾನ ಸ್ಫೋಟ: ಎಪಿಎಂಸಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಭಾಗಗಳಿಂದ ರೈತರು ಇಲ್ಲಿನ ಎಪಿಎಂಸಿಗೆ ಈರುಳ್ಳಿ ಮಾರಾಟಕ್ಕೆ ಬಂದಿದ್ದಾರೆ. ಶನಿವಾರ ಉತ್ತಮ ಗುಣಮಟ್ಟದ ಈರುಳ್ಳಿ ಕ್ವಿಂಟಲ್‌ಗೆ 5000ರೂ.ವರೆಗೂ ಮಾರಾಟವಾಗಿದೆ. ಆದರೆ ಸೋಮವಾರ ಆವಕ ಹೆಚ್ಚಾಗಿದೆ ಎಂದು ವ್ಯಾಪಾರಸ್ಥರು ಏಕಾಏಕಿ ದರ ಇಳಿಸಿದ್ದಾರೆ. ಅತಿವೃಷ್ಟಿಯಿಂದಾಗಿ ರೈತರು ಆತಂಕದಲ್ಲಿದ್ದಾರೆ. ಉಳ್ಳಾಗಡ್ಡಿಗೆ ಕ್ವಿಂಟಲ್‌ಗೆ 1500ರಿಂದ 2000ರೂ.ವರೆಗೆ ದರ ನಿಗದಿ ಮಾಡಿದರೆ ನಾವು ರೈತರು ಬದುಕುವುದು ಹೇಗೆ? ಎಂಬುದು ರೈತರ ಪ್ರಶ್ನೆಯಾಗಿತ್ತು. ಎಪಿಎಂಸಿ ಅಧ್ಯಕ್ಷ ಜಗನ್ನಾಥಗೌಡ ಸಿದ್ದನಗೌಡರ, ರೈತರ ಹಿತ ಕಾಪಾಡುವುದು ಎಪಿಎಂಸಿ ಕರ್ತವ್ಯ.

ಟೆಂಡರ್‌ ಪ್ರಕ್ರಿಯೆಗೆ ಸಹಕರಿಸುವಂತೆ ರೈತರಿಗೆ ಮನವಿ ಮಾಡಿದರಲ್ಲದೆ, ಉತ್ತಮ ಗುಣಮಟ್ಟದ ಉಳ್ಳಾಗಡ್ಡಿಗೆ ಒಳ್ಳೆಯ ದರ ನೀಡಿ ಎಂದು ವ್ಯಾಪಾರಸ್ಥರಿಗೆ ತಿಳಿಸಿದರು. ನಂತರ ಟೆಂಡರ್‌ ಆರಂಭಗೊಂಡಿತು. ಉತ್ತಮ ಗುಣಮಟ್ಟದ ಉಳ್ಳಾಗಡ್ಡಿಗೆ ಪ್ರತಿ ಕ್ವಿಂಟಲ್‌ಗೆ 4000ರೂ. ವರೆಗೂ ದರ ಲಭಿಸಿತು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.