ಸಂಸದರ ಕಚೇರಿಗೆ ರೈತರ ಮುತ್ತಿಗೆ


Team Udayavani, Jul 17, 2017, 12:37 PM IST

hub4.jpg

ಹುಬ್ಬಳ್ಳಿ: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ರೈತರು ಸಂಸದ ಪ್ರಹ್ಲಾದ ಜೋಶಿ ಅವರ ಕಚೇರಿಗೆ ರವಿವಾರ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ರೈತ ಸೇನಾ ಉಪಾಧ್ಯಕ್ಷ ಶಂಕರಣ್ಣ ಅಂಬಲಿ, ರೈತ ಮುಖಂಡರಾದ ಶಂಕರಗೌಡ ಪಾಟೀಲ, ಗುರು ರಾಯನಗೌಡ್ರ ನೇತೃತ್ವದಲ್ಲಿ ಸಂಸದರ ಇಲ್ಲಿನ ಚಿಟಗುಪ್ಪಿ ಆಸ್ಪತ್ರೆ ಬಳಿಯ ಕಚೇರಿಗೆ ಮುತ್ತಿಗೆ ಹಾಕಿದ ರೈತ ಹೋರಾಟಗಾರರು, ಕಳೆದ 2 ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಈ ಭಾಗದ ಜನಪ್ರತಿನಿಧಿಗಳು ನಿರ್ಲಕ್ಷ ತೋರುತ್ತ ಬರುತ್ತಿದ್ದಾರೆ. 

ಮಹದಾಯಿ ಯೋಜನೆ ಜಾರಿಗಾಗಿಯೇ ವೀರೇಶ ಸೊಬರದಮಠ ಅವರು ಸನ್ಯಾಸ ದೀಕ್ಷೆ ಸ್ವೀಕರಿಸಿದರೂ ಸರಕಾರಗಳು, ಜನಪ್ರತಿನಿಧಿಗಳು ಕಣ್ಣು ತೆರೆಯುತ್ತಿಲ್ಲ. ಇವರ ಧೋರಣೆಯಿಂದಾಗಿ ಸೊಬರದಮಠ ಇಂದಿನಿಂದ (ಜು.16) ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು. 

ಒಂದು ವೇಳೆ ಉಪವಾಸ ಸತ್ಯಾಗ್ರಹ ಸಂದರ್ಭದಲ್ಲಿ ನಾನು ಮೃತಪಟ್ಟರೆ ಮಹದಾಯಿ ನದಿ ದಂಡೆಯ ಮೇಲೆ ನನ್ನ ಅಂತ್ಯಸಂಸ್ಕಾರ ಮಾಡಿ. ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸಬೇಡಿ. ಯೋಜನೆ ಜಾರಿಯಾಗುವವರೆಗೂ ಮುಂದುವರಿಸಿ ಎಂದು ಕರೆಕೊಟ್ಟಿದ್ದಾರೆ. 

ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು. ಆ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಸಂಸದ ಜೋಶಿ ಅವರನ್ನು ಭೇಟಿ ಮಾಡಿ, ಕೂಡಲೇ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಸಮಸ್ಯೆ ಇತ್ಯರ್ಥ ಪಡಿಸುವಂತೆ ಕೋರಲಾಗುತ್ತಿದೆ. ಅವರು ನಮ್ಮನ್ನು ಭೇಟಿಯಾಗಲೇ ಬೇಕು ಎಂದು ಪಟ್ಟುಹಿಡಿದರು. 

ರೈತರ ಪಟ್ಟು: ಸ್ಥಳದಲ್ಲಿದ್ದ ಪೊಲೀಸ್‌ ಆಯುಕ್ತ ಪಿ.ಎಚ್‌. ರಾಣೆ, ಡಿಸಿಪಿ ರೇಣುಕಾ ಸುಕುಮಾರ, ಎಸಿಪಿ ದಾವೂದಖಾನ್‌ ಅವರು, ಸಂಸದರು ದೆಹಲಿಗೆ ತೆರಳಿದ್ದಾರೆ. ನಿಮ್ಮ ಮನವಿಯನ್ನು ನೀಡಿ, ಅವರಿಗೆ ಸಲ್ಲಿಸಲಾಗುವುದು ಎಂದರು. ಸಂಸದರು ಇಲ್ಲದಿದ್ದರೂ ಪರವಾಗಿಲ್ಲ ಬಿಜೆಪಿಯಲ್ಲಿನ ಅವರ ಆಪ್ತ ಮುಖಂಡರನ್ನಾದರೂ ಇಲ್ಲವೆ ಜಿಲ್ಲಾ ಪ್ರಭಾರಿ ಮಹೇಶ ಟೆಂಗಿನಕಾಯಿ ಅವರನ್ನು ಸ್ಥಳಕ್ಕೆ ಕರೆಯಿಸಿ ಎಂದು ರೈತ ಹೋರಾಟಗಾರರು ಪಟ್ಟುಹಿಡಿದರು. 

ಉಪವಾಸ ಸತ್ಯಾಗ್ರಹದ ವೇಳೆ ಸೊಬರದಮಠ ಅವರು ಅಸುನೀಗಿದರೆ ಮುಂದೆ ಸಂಭವಿಸಬಹುದಾದ ಅನಾಹುತಗಳಿಗೆ ಈ ಭಾಗದ ಜನಪ್ರತಿನಿಧಿಗಳೇ ಹೊಣೆಗಾರರಾಗುತ್ತಾರೆ. ಆದ್ದರಿಂದ ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ, ಸಂಸದ ಜೋಶಿ ಅವರು ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಕೂಡಲೇ ಯೋಜನೆ ಜಾರಿಗೊಳಿಸಲು ಸರ್ವಪ್ರಯತ್ನ ಮಾಡಲಾಗುವುದೆಂದು ಭರವಸೆ ಕೊಟ್ಟು ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಮನವರಿಕೆ ಮಾಡಬೇಕು. 

ಅನಾಹುತ ಸಂಭವಿಸುವ ಮೊದಲು ನಾವೆಲ್ಲ ಸೊಬರದಮಠ ಅವರನ್ನು ಉಳಿಸಿಕೊಳ್ಳಬೇಕಾಗಿದೆ. ಈ ವಿಷಯದಲ್ಲಿ ಪಕ್ಷಭೇದ ಮರೆತು ಎಲ್ಲ ಜನಪ್ರತಿನಿಧಿಗಳು ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿ ಎಂದು ಒತ್ತಾಯಿಸಿದರು. ಪ್ರಧಾನಿ ಒಳ್ಳೆಯರಿದ್ದಾರೆ. ಆದರೆ ಅವರಿಗೆ ಈ ಭಾಗದ ಸಂಸದರು ಮಹದಾಯಿ ವಿಷಯವಾಗಿ ಸರಿಯಾಗಿ ಮನವರಿಕೆ ಮಾಡಿಲ್ಲ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು. ಮಹದಾಯಿ ಸಮಸ್ಯೆ ಈಡೇರಿಸಿದರೆ ಪ್ರಧಾನಿ ಅವರನ್ನು ಪೂಜಿಸಲಾಗುವುದು ಎಂದರು. 

ಬೆಂಬಲ-ಸಹಕಾರದ ಭರವಸೆ: ಸ್ಥಳಕ್ಕಾಗಮಿಸಿದ ಮಹೇಶ ಟೆಂಗಿನಕಾಯಿ ಮಾತನಾಡಿ, ಜಗದೀಶ ಶೆಟ್ಟರ ಹಾಗೂ ಜೋಶಿ ಅವರಿಗೆ ನಿಮ್ಮ ಹೋರಾಟದ ಬಗ್ಗೆ ಮನವರಿಕೆ ಮಾಡಲಾಗುವುದು. ನೀವು ಹೋರಾಟ ಮಾಡುತ್ತಿರುವುದು ರೈತರಿಗಾಗಿ ಮಾತ್ರವಲ್ಲ ಎಲ್ಲರಿಗೂ ಅನ್ವಯಿಸುತ್ತದೆ. ನಿಮ್ಮ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ, ಸಹಕಾರ ನೀಡಲಾಗುವುದು ಎಂದು ಹೇಳಿದರು. 

ನಂತರ ರೈತ ಹೋರಾಟಗಾರರು ಪ್ರತಿಭಟನೆ ಹಿಂಪಡೆದರು. ಪ್ರಹ್ಲಾದ ಮುದರಡ್ಡಿ, ಪ್ರವೀಣ ಬಂಡಿವಾಡ, ಅಶೋಕ ನೀರಲಗಿ,  ಗುರಪ್ಪ ಚವರಡ್ಡಿ, ಲಚ್ಚವ್ವ ಜ್ಯೋತಣ್ಣವರ, ಅನಸಮ್ಮ ಶಿಂಧೆ, ರತ್ನವ್ವ ಸವಳಬಾವಿ, ಗಂಗವ್ವ ಹಡಪದ ಸೇರಿದಂತೆ ಕಿರೇಸೂರ, ಬ್ಯಾಹಟ್ಟಿ, ಹೆಬಸೂರ, ಕುಸುಗಲ್ಲ ಹಾಗೂ ನರಗುಂದ ಭಾಗದ ರೈತರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.