ಮನೆಯಲ್ಲೇ ನಕಲಿ ನೋಟು ಮುದ್ರಿಸಿ ಚಲಾಯಿಸುತ್ತಿದ್ದ ಭೂಪ !
Team Udayavani, Aug 17, 2021, 1:19 PM IST
ಹುಬ್ಬಳ್ಳಿ: ರೈಲ್ವೆ ನಿಲ್ದಾಣ ಬಳಿ ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದಾಗ ರೈಲ್ವೆ ಠಾಣೆ ಪೊಲೀಸರಿಗೆ ರವಿವಾರ ಸಿಕ್ಕಿಬಿದ್ದಿದ್ದವನು ನೋಟುಗಳನ್ನು ತನ್ನ ಮನೆಯಲ್ಲಿಯೇ ಮುದ್ರಿಸುತ್ತಿದ್ದ ಎಂದು ತಿಳಿದು ಬಂದಿದೆ.
ಪೊಲೀಸರಿಗೆ ಸಿಕ್ಕಿ ಬಿದ್ದಿರುವ ವಾಹನ ಚಾಲಕ, ಕುಂದಗೋಳ ತಾಲೂಕು ಮಳಲಿ ಗ್ರಾಮದ ಹರೀಶ ಎಂ. ಭೋವಿ ತನ್ನ ಮನೆಯಲ್ಲಿಯೆ ಕಂಪ್ಯೂಟರ್ ಮತ್ತು ಮುದ್ರಣ ಯಂತ್ರ ಇಟ್ಟುಕೊಂಡು ನೋಟುಗಳನ್ನು ಮುದ್ರಿಸುತ್ತಿದ್ದ. ಇವನಿಗೆ ಹರಿಹರ ತಾಲೂಕು ಮಲೆಬೆನ್ನೂರಿನ ಇನ್ನೊಬ್ಬ ಸಾಥ್ ಕೊಡುತ್ತಿದ್ದ ಎನ್ನಲಾಗಿದೆ.
ಬಂಧಿತನಿಂದ ಪೊಲೀಸರು ರವಿವಾರ 500ರೂ. ಮುಖಬೆಲೆಯ ಒಟ್ಟು 210 ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದರು. ಸೋಮವಾರ ಆತನ ಮನೆ ಮೇಲೆ ದಾಳಿ ಮಾಡಿ, ನೋಟುಗಳನ್ನು ಮುದ್ರಿಸುತ್ತಿದ್ದ ಯಂತ್ರ ಹಾಗೂ 1.20 ಲಕ್ಷ ರೂ. ಮೌಲ್ಯದ ಒಟ್ಟು 213 ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸರು ಬಂಧಿತನಿಂದ ಇದುವರೆಗೆ ಒಟ್ಟು 2.25 ಲಕ್ಷ ರೂ. ಮೌಲ್ಯದ 423 ನಕಲಿ ನೋಟುಗಳು ಹಾಗೂ ಯಂತ್ರ ವಶಪಡಿಸಿಕೊಂಡಿದ್ದಾರೆ. ಬಂಧಿತನು ಎಷ್ಟು ನೋಟುಗಳನ್ನು ಮುದ್ರಿಸಿದ್ದ, ಅವುಗಳನ್ನು ಎಲ್ಲೆಲ್ಲಿ ಚಲಾವಣೆ ಮಾಡಿದ್ದ, ಯಾವ್ಯಾವ ಪ್ರದೇಶದ ಜನರಿಗೆ ಅವುಗಳನ್ನು ಹಂಚಿಕೆ ಮಾಡಿದ್ದ. ನಕಲಿ ನೋಟು ದಂಧೆಯಲ್ಲಿ ಇನ್ನೂ ಎಷ್ಟು ಜನ ಭಾಗಿಯಾಗಿದ್ದಾರೆ ಎಂಬ ಮಾಹಿತಿಯನ್ನು ರೈಲ್ವೆ ಠಾಣೆ ಪೊಲೀಸರು ಕಲೆ ಹಾಕುತ್ತಿದ್ದಾರೆ. ತಲೆಮರೆಸಿಕೊಂಡಿರುವವರ ಪತ್ತೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ