ಚತುಷ್ಪಥ ಅವಾಂತರ; ಗುತ್ತಿಗೆದಾರ ತರಾಟೆಗೆ

ಆಮೆಗತಿಯಲ್ಲಿ ನಡೆದ ಕಾಮಗಾರಿ ವಾಹನ ಸಂಚಾರಕ್ಕೆ ಪರದಾಟ ಶಾಸಕರೆದುರು ಅಹವಾಲು

Team Udayavani, Jun 26, 2019, 2:11 PM IST

hubali-tdy-4..

ಕಲಘಟಗಿ: ಚತುಷ್ಪಥ ಕಾಮಗಾರಿಯಿಂದ ಎಪಿಎಂಸಿ ಮುಖ್ಯ ರಸ್ತೆಯಲ್ಲಿ ಉಂಟಾಗಿರುವ ಕೆಲ ಅನಾನುಕೂಲತೆಗಳ ಕುರಿತು ಗುತ್ತಿಗೆದಾರ ಬಸವರಾಜ ಅವರೊಂದಿಗೆ ಶಾಸಕ ಸಿ.ಎಂ. ನಿಂಬಣ್ಣವರ ಹಾಗೂ ಸಮಿತಿ ಅಧ್ಯಕ್ಷ ರಜನಿಕಾಂತ ಬಿಜವಾಡ ಚರ್ಚಿಸಿದರು.

ಕಲಘಟಗಿ: ಪಟ್ಟಣದಲ್ಲಿ ಆಮೆಗತಿಯ ಚತುಷ್ಪಥ ಕಾಮಗಾರಿಯಿಂದಾಗಿ ಎಪಿಎಂಸಿ ವಹಿವಾಟಿಗೆ ನಷ್ಟ ಉಂಟಾಗುತ್ತಿದೆ. ಮಾರುಕಟ್ಟೆ ಪ್ರವೇಶಿಸುವ ಇಕ್ಕೆಲಗಳ ರಸ್ತೆಯನ್ನು ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರದಲ್ಲಿ ಮಾಡಿ ಮುಗಿಸುವಂತೆ ಗುತ್ತಿಗೆದಾರ ಬಸವರಾಜ ಅವರಿಗೆ ಶಾಸಕ ಸಿ.ಎಂ. ನಿಂಬಣ್ಣವರ ಸೂಚಿಸಿದರು.

ಪಪಂ ವ್ಯಾಪ್ತಿಯಲ್ಲಿ ಚತುಷ್ಪಥ ಕಾಮಗಾರಿ ನಿಧಾನವಾಗಿದೆ ಹಾಗೂ ಅವೈಜ್ಞಾನಿಕವಾಗಿದೆ ಎಂಬ ಎಪಿಎಂಸಿ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರ ಆರೋಪದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಿ ಅವರು ಮಾತನಾಡಿದರು.

ಅಹವಾಲು ತೋಡಿಕೊಂಡ ಜನರು: ರಸ್ತೆ ಕಾಮಗಾರಿಯಿಂದಾಗಿ ಎಪಿಎಂಸಿ ಆವರಣ ಗೋಡೆಯನ್ನೂ ಹಾಳು ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಪ್ರಾಂಗಣದ ಎರಡೂ ಮುಖ್ಯರಸ್ತೆ ಅಭಿವೃದ್ಧಿ ಪಡಿಸದೇ ವಾಹನ ಸಂಚಾರಕ್ಕೆ ಅನಾನುಕೂಲ ಉಂಟು ಮಾಡಲಾಗಿದೆ. ಇದರಿಂದಾಗಿ ಪ್ರಾಂಗಣದಲ್ಲಿ ಬಹುತೇಕ ವಹಿವಾಟುಗಳು ಸ್ಥಗಿತಗೊಂಡಂತಾಗಿದೆ. ವಾರದ ಸಂತೆಯ ಮಂಗಳವಾರವಂತೂ ರೈತರ ಸಮಸ್ಯೆ ಹೇಳತೀರದಾಗಿದೆ.

ದೊಡ್ಡ ವಾಹನಗಳ ಸಂಚಾರ ಸಮಸ್ಯೆ ಅರಿವಿದ್ದರೂ ಗುತ್ತಿಗೆದಾರರು ಬೇಕಾಬಿಟ್ಟಿ ನಿರ್ಮಾಣ ಮಾಡಿ ಕೈ ತೊಳೆದುಕೊಂಡಿದ್ದಾರೆ. ಇಷ್ಟೆಲ್ಲ ಅವಾಂತರಗಳಿದ್ದರೂ ಗುತ್ತಿಗೆದಾರರಾಗಲಿ ಸಂಬಂಧಿಸಿದ ಅಧಿಕಾರಿಗಳು ಕ್ಯಾರೇ ಎನ್ನದೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಟ್ಟಣದಾದ್ಯಂತ ಕಾಮಗಾರಿಯುದ್ದಕ್ಕೂ ಅನಾಥಪ್ರಜ್ಞೆ ಕಾಡುತ್ತಿದೆ ಎಂದು ಸ್ಥಳದಲ್ಲಿದ್ದ ಹಲವರು ಆರೋಪಗಳ ಸುರಿಮಳೆ ಮಾಡಿದರು.

ಅಹವಾಲು ಆಲಿಸಿದ ಶಾಸಕ ನಿಂಬಣ್ಣವರ ಪ್ರತಿಕ್ರಿಯಿಸಿ, ಕಾಮಗಾರಿ ಆರಂಭಗೊಂಡು ವರ್ಷಗಳೇ ಗತಿಸಿವೆ. ಇದುವರೆಗೂ ಸಾರ್ವಜನಿಕರಿಗೆ ತೊಂದರೆ ತಪ್ಪಿಲ್ಲ ಎಂದಾದಲ್ಲಿ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ. ತಕ್ಷಣ ಎಪಿಎಂಸಿ ಆವರಣಕ್ಕೆ ಬಂದು ಹೋಗುವ ರಸ್ತೆಯನ್ನು ವೈಜ್ಞಾನಿಕವಾಗಿ ಗುಣಮಟ್ಟದಿಂದ ನಿರ್ಮಿಸಿ ರೈತ ವರ್ಗದ ಹಿತ ಕಾಪಾಡಬೇಕು. ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾಮಗಾರಿಯನ್ನು ತ್ವರಿತವಾಗಿ ಗುಣಮಟ್ಟದಿಂದ ಮಾಡಿ ಮುಗಿಸಬೇಕು ಎಂದು ಗುತ್ತಿಗೆದಾರರಿಗೆ ತಿಳಿಸಿದರು.

ಎಪಿಎಂಸಿ ಆವರಣದಲ್ಲಿ ಬಂದು ಹೋಗಲು ಹಾಗೂ ವಾಹನಗಳ ಸಂಚಾರಕ್ಕೆ ಸಹಾಯಕವಾಗುವಂತೆ ತಕ್ಷಣ ಮೊಹರಂ ಮಣ್ಣನ್ನು ಹಾಕಿ ಸುಗಮ ಮಾಡಿಕೊಡಲಾಗುವುದು. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲತೆ ಆಗದಂತೆ ಕಾಮಗಾರಿಯುದ್ದಕ್ಕೂ ಕ್ರಮ ಜರುಗಿಸುವುದಾಗಿ ಗುತ್ತಿಗೆದಾರ ಬಸವರಾಜ ತಿಳಿಸಿದರು.

ಎಪಿಎಂಸಿ ಅಧ್ಯಕ್ಷ ರಜನಿಕಾಂತ ಬಿಜವಾಡ, ಮಾರುತಿ ಹಂಚಿನಮನಿ, ಕಾಂಗ್ರೆಸ್‌ ತಾಲೂಕಾಧ್ಯಕ್ಷ ಮಂಜುನಾಥಗೌಡ ಮುರಳ್ಳಿ, ಬಾಬು ಅಂಚಟಗೇರಿ ಸೇರಿದಂತೆ ಎಪಿಎಂಸಿ ಸದಸ್ಯರು, ಅಧಿಕಾರಿಗಳು, ಪಪಂ ಸದಸ್ಯರು, ಬಿಜೆಪಿ ಪದಾಧಿಕಾರಿಗಳು, ವ್ಯಾಪಾರಸ್ಥರು, ರೈತ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.