ತಿಂಗಳ ಮೊದಲೇ ಬಂದ ಗಣಪ!


Team Udayavani, Aug 5, 2018, 4:17 PM IST

5-agust-16.jpg

ಬೆಳಗಾವಿ: ಗಣೇಶೋತ್ಸವಕ್ಕೆ ಇನ್ನೂ 39 ದಿನಗಳು ಬಾಕಿ ಇರುವಾಗಲೇ ಬೆಳಗಾವಿ ನಗರದ ಗಣೇಶ ಯುವಕ ಮಂಡಳದವರು ಶ್ರೀ ಗಣೇಶನನ್ನು ಪ್ರತಿಷ್ಠಾಪಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ನಗರದ ಮಹಾದ್ವಾರ ರಸ್ತೆಯ ಮರಾಠಾ ಗಲ್ಲಿ ಮೂರನೇ ಕ್ರಾಸ್‌ ನ ಯುವಕ ಮಂಡಳದವರು ವಾದ್ಯ ಮೇಳದೊಂದಿಗೆ ಶನಿವಾರ ಗಣೇಶ ಮೂರ್ತಿಯ ಮೆರವಣಿಗೆ ನಡೆಸಿ ಪ್ರತಿಷ್ಠಾಪಿಸಿದ್ದಾರೆ. ಸುಮಾರು ಮೂರು ಗಂಟೆಗಳ ಕಾಲ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

39 ದಿನಗಳ ಮೊದಲೇ ಬೆಳಗಾವಿಯಲ್ಲಿ ಗಣೇಶ ಪ್ರತಿಷ್ಠಾಪನೆ ಆಗುತ್ತಿರುವುದು ನಾಗರಿಕರಲ್ಲಿ ಕುತೂಹಲ ಹಾಗೂ ಅಚ್ಚರಿ ಮೂಡಿಸಿದೆ. ಮಹಾದ್ವಾರ ರಸ್ತೆಯ ಮರಾಠಾ ಗಲ್ಲಿ ಗಣೇಶ ಮಂಡಳ ಈ ಬಾರಿ 11 ನೇ ವಸಂತಕ್ಕೆ ಕಾಲಿಟ್ಟಿದೆ. ಹೀಗಾಗಿ ಇನ್ಫಿನಿಟಿ ಪ್ರೋಡಕ್ಷನ್‌ ಗ್ರುಪ್‌ದಿಂದ ಈ ಬಾರಿ ಗಣೇಶನ ವಿಡಿಯೋ ಚಿತ್ರೀಕರಣ ಮಾಡಲಿದೆ. ಈ ವಿಡಿಯೋ ತಯಾರಿಸಲು ಆಗಸ್ಟ್‌ 15ರ ವರೆಗೆ ಕಾಲಾವಕಾಶ ನೀಡಲಾಗಿದೆ. ಈ ಅವಧಿಯೊಳಗೆ ವಿಡಿಯೋ ಎಡಿಟಿಂಗ್‌ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ 39 ದಿನಗಳ ಮುಂಚೆಯೇ ಗಣೇಶನನ್ನು ಪ್ರತಿಷ್ಠಾಪಿಸಲಾಗಿದೆ. 

ಆ. 5ರಿಂದ ಚಿತ್ರೀಕರಣ ಆರಂಭವಾಗಲಿದ್ದು, ಅದರಂತೆ ಮಂಟಪದಲ್ಲಿಯೇ ಗಣೇಶ ಮೂರ್ತಿಯನ್ನು ಇಡಲಾಗಿದೆ. ವಿಡಿಯೋ ಚಿತ್ರೀಕರಣ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ಅಲ್ಲಿಂದ ತೆಗೆದು ಸೆ.13ರಂದು ಗಣೇಶೋತ್ಸವ ದಿನ ಗಣೇಶ ಮೂರ್ತಿಯನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಪುನಃ ಪ್ರತಿಷ್ಠಾಪನೆ ಮಾಡುವ ಬಗ್ಗೆ ಮಂಡಳದವರು ನಿರ್ಧರಿಸಿದ್ದಾರೆ. ಬಾಪಟ ಗಲ್ಲಿಯ ಮೂರ್ತಿಕಾರ ಸಂಜಯ ಕಿಲ್ಲೇಕರ ಮೂರ್ತಿ ತಯಾರಿಸಿದ್ದಾರೆ. ಶನಿವಾರ ಮೂರ್ತಿಯ ಮೆರವಣಿಗೆ ಸಮಾದೇವಿ ಗಲ್ಲಿ, ಯಂದೇಖೂಟ, ಕಾಲೇಜು ರಸ್ತೆ, ಧರ್ಮವೀರ ಸಂಬಾಜಿ ವೃತ್ತ, ಟಿಳಕ ಚೌಕ ಮೂಲಕ ಮುಜಾವರ ಗಲ್ಲಿ, ಪಾಟೀಲ ಗಲ್ಲಿ, ಶನಿಮಂದಿರ, ಕಪಿಲೇಶ್ವರ ರೇಲ್ವೆ ಮೇಲ್ಸೇತುವೆ ಮಾರ್ಗದಿಂದ ಮಹಾದ್ವಾರ ರಸ್ತೆಯ ಮರಾಠಾ ಗಲ್ಲಿವರೆಗೆ ಮೆರವಣಿಗೆ ನಡೆಸಲಾಯಿತು. ಈ ಮುನ್ನ ಗಣೇಶನಿಗೆ ಪೂಜೆ ಸಲ್ಲಿಸಲಾಯಿತು.

ಮಂಡಳದ ಅಧ್ಯಕ್ಷ ನರೇಂದ್ರ ಜಾಧವ, ಕಾರ್ಯಕರ್ತರಾದ ಸಂದೀಪ ಭಾತಖಾಂಡೆ, ವಿವೇಕ ಪಾಟೀಲ, ರಾಜು ಭಾತಖಾಂಡೆ, ಅಶೋಕ ಖವರೆ, ದೌಲತ್‌ ಜಾಧವ, ವೃಷಬ್‌ ಚಿಖಲಕರ, ಕೃಷ್ಣಾ ಪ್ರಧಾನ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಲಾಭ ಗಳಿಸಿದ ಷೇರು ಯಾವುದು…

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಮೇ.27ರಂದು ಲಾಭ ಗಳಿಸಿದ ಷೇರು ಯಾವುದು…

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ

ಮೊದಲ ಹಿಂದಿ ಲೇಖಕಿ: ಗೀತಾಂಜಲಿ ಶ್ರೀಯ “ಟೂಮ್ ಆಫ್ ಸ್ಯಾಂಡ್” ಕಾದಂಬರಿಗೆ ಬೂಕರ್ ಪ್ರಶಸ್ತಿ

ಮೊದಲ ಹಿಂದಿ ಲೇಖಕಿ: ಗೀತಾಂಜಲಿ ಶ್ರೀಯ “ಟೂಮ್ ಆಫ್ ಸ್ಯಾಂಡ್” ಕಾದಂಬರಿಗೆ ಬೂಕರ್ ಪ್ರಶಸ್ತಿ

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

ಮೊಮ್ಮಗಳಿಗೆ ಲೈಂಗಿಕ ಕಿರುಕುಳ; ಸೊಸೆ ಆರೋಪ- ಗುಂಡು ಹೊಡೆದುಕೊಂಡು ಮಾಜಿ ಸಚಿವ ಆತ್ಮಹತ್ಯೆ

ವಿಧಾನ ಪರಿಷತ್ ಚುನಾವಣೆ: ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ವಿಧಾನ ಪರಿಷತ್ ಚುನಾವಣೆ: ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

19car

ನದಿಯಲ್ಲಿ ಬಿಎಂಡಬ್ಲ್ಯೂ ಕಾರು ಮುಳುಗಿಸಿದ ಮಾಲೀಕ: ವಿಚಾರಣೆಯಲ್ಲಿ ಅಚ್ಚರಿ ಮಾಹಿತಿ ಬಯಲು

RR-RCB

ರಾಯಲ್ ಕದನ: ಇಲ್ಲಿದೆ ಬೆಂಗಳೂರು-ರಾಜಸ್ಥಾನ ನಡುವಿನ ಸ್ವಾರಸ್ಯಕರ ಅಂಶಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

ದಾಖಲೆ ಮತಗಳಿಂದ ಹೊರಟ್ಟಿ ಗೆಲುವು: ಜೋಶಿ

4

ನ್ಯಾಯದಾನಕ್ಕೆ ವಕೀಲರ ಸಹಕಾರ ಮುಖ್ಯ

3

ವೀರಶೈವ-ಲಿಂಗಾಯತ ಎರಡೆಂಬ ಭಾವ ಬೇಡ

2

ಜೀವನ ಯೋಗ್ಯ ನಿವೃತ್ತಿ ವೇತನಕ್ಕೆ ಆಗ್ರಹ

1

ಚಿಕನ್‌ ಅಂಗಡಿ ತ್ಯಾಜ್ಯಕ್ಕೆ ಸಾಕುಪ್ರಾಣಿ ಆಹಾರ ರೂಪ

MUST WATCH

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

ಹೊಸ ಸೇರ್ಪಡೆ

25

ಸಂಚಾರ ನಿಯಮ ಉಲ್ಲಂಘನೆ-ದಂಡ ವಸೂಲಿ

25

ಅಪನಂಬಿಕೆ-ಅತಿ ಕಾಳಜಿಯಿಂದ ಸ್ಕಿಜೋಫ್ರೇನಿಯಾ

pdo

ಬಡ್ತಿಗೆ ಒತ್ತಾಯಿಸಿ ಪಿಡಿಒಗಳಿಂದ ಮನವಿ ಸಲ್ಲಿಕೆ

24

ದೌರ್ಜನ್ಯ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಲಾಭ ಗಳಿಸಿದ ಷೇರು ಯಾವುದು…

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಮೇ.27ರಂದು ಲಾಭ ಗಳಿಸಿದ ಷೇರು ಯಾವುದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.