ಮಧ್ಯಂತರ ಚುನಾವಣೆ ಬದಲು ಉಪ ಸಮರ ಗೆಲ್ಲಿಸಿ: ಲಿಂಬಾವಳಿ

Team Udayavani, May 15, 2019, 10:29 AM IST

ಹುಬ್ಬಳ್ಳಿ: ರಾಜ್ಯದಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ತಪ್ಪಿಸುವ ನಿಟ್ಟಿನಲ್ಲಿ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಮ್ಮಿಶ್ರ ಸರ್ಕಾರ ಆರಂಭದಿಂದಲೂ ಗೊಂದಲದಲ್ಲೇ ನಡೆಯುತ್ತಿದೆ. ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರ ಹೇಳಿಕೆಗಳೇ ನಿರೂಪಿಸುತ್ತಿವೆ. ಸರ್ಕಾರದಿಂದ ಹೊರಬರಲು ಹಲವು ಕಾಂಗ್ರೆಸ್‌ ಶಾಸಕರು ಕಾಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳು ನಡೆಯುವ ಸಾಧ್ಯತೆ ದಟ್ಟವಾಗಿದೆ. ರಾಜೀನಾಮೆ ನೀಡುವವರ ಸಂಖ್ಯೆ ಹೆಚ್ಚಾಗಿ ಕಾಂಗ್ರೆಸ್‌-ಜೆಡಿಎಸ್‌ ಶಾಸಕರ ಸಂಖ್ಯೆ 104ಕ್ಕಿಂತ ಕಡಿಮೆಯಾದರೆ ಖಂಡಿತವಾಗಿಯೂ ನಾವು ಸರ್ಕಾರ ರಚನೆ ಮಾಡುತ್ತೇವೆ ಎಂದರು.

ಡಿ.ಕೆ.ಶಿವಕುಮಾರ ಅವರಿಗೆ ಹಣ ಖರ್ಚು ಮಾಡಿ ಚುನಾವಣೆ ಗೆದ್ದು ಬರುವುದು ಮಾತ್ರ ಗೊತ್ತಿದೆ. ನ್ಯಾಯಯುತವಾಗಿ ಚುನಾವಣೆ ಮಾಡುವುದು ಗೊತ್ತಿಲ್ಲ. ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ಆರೋಪ ಮಾಡುವ ಸಚಿವರು, ಮೊದಲು ಕೇಂದ್ರ ನೀಡಿದ ಅನುದಾನವನ್ನು ಸಮರ್ಪಕವಾಗಿ ಖರ್ಚು ಮಾಡಲಿ ಎಂದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ