ಮಾತೃಭಾಷೆಯಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ

Team Udayavani, Feb 24, 2020, 11:40 AM IST

huballi-tdy-2

ಧಾರವಾಡ: ಮಾತೃಭಾಷೆಯಲ್ಲಿ ಅಧ್ಯಯನ ಮಾಡಿದ ಸಾಕಷ್ಟು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಕಲಾಭವನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆದ ಬೆಳಗಾವಿ ವಿಭಾಗದ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಶಿಕ್ಷಕರು, ಪಾಲಕರು ಕಲಿಸುವ ಸಂಸ್ಕಾರ ವಿದ್ಯಾರ್ಥಿಗಳ ಬದುಕಿನ ಮೇಲೆ ಪರಿಣಾಮ ಬೀರುತ್ತದೆ. ಜತೆಗೆ ಸುತ್ತಲಿನ ಪರಿಸರವೂ ಮಕ್ಕಳ ಬೆಳವಣಿಗೆ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿ ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ನೀಡಬೇಕು. ಆಗ ಮಾತ್ರ ಸಮಾಜಕ್ಕೆ ಮತ್ತು ಕುಟುಂಬಕ್ಕೆ ಒಳ್ಳೆಯ ಹೆಸರು ತರುತ್ತಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್‌. ನಾಗಾಭರಣ ಮಾತನಾಡಿ, ಗುರುವಿಗೆ ವಂದಿಸಿ ಶಿಕ್ಷಣ ಪಡೆಯುವುದು ಮುಖ್ಯ. ಆದರೆ, ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕ ವಂದಿಸಿ ಬುದ್ಧಿ ಹೇಳುವಂತಾಗಿದೆ. ಇದರಿಂದ ಉನ್ನತ ಸಾಧನೆ ಮಾಡುವುದು ಕಷ್ಟ. ವ್ಯಕ್ತಿಗೆ ವೃತ್ತಿಗಿಂತ ಪ್ರವೃತ್ತಿ ಶ್ರೇಷ್ಠವಾಗಿರಬೇಕು. ಬದುಕಿನಲ್ಲಿ ವೃತ್ತಿಗೆ ಅಂತ್ಯವಿದ್ದು, ಪ್ರವೃತ್ತಿಗೆ ಕೊನೆ ಇಲ್ಲ. ಹೀಗಾಗಿ ಜೀವನದಲ್ಲಿ ಯಾವುದಾದರೊಂದು ಪ್ರವೃತ್ತಿ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಕನ್ನಡ ಭಾಷೆಗೆ ಎಲ್ಲ ರಂಗಗಳಲ್ಲಿ ಪ್ರಾಧ್ಯಾನತೆ ದೊರೆಯಬೇಕು. ಅದಕ್ಕಾಗಿ ಪ್ರಾಧಿಕಾರ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಫೆ.29 ಹಾಗೂ ಮಾ.1ರಂದು ವಿಜ್ಞಾನ ಕನ್ನಡ ಸಮ್ಮೇಳನ ಆಯೋಜಿಸಲಾಗಿದೆ ಎಂದರು. ಪ್ರಾಧಿಕಾರ ಸದಸ್ಯೆ ಡಾ| ವಿಜಯಲಕ್ಷ್ಮೀ ಬಾಳೆಕುಂದ್ರಿ ಮಾತನಾಡಿ, ಯಾವುದೇ ಹುದ್ದೆಯಲ್ಲಿದ್ದರೂ ಕನ್ನಡ ಮರೆಯಬಾರದು. ವ್ಯಕ್ತಿತ್ವ ವಿಕಾಸಕ್ಕೆ ಮಾತೃಭಾಷೆ ಪ್ರಮುಖವಾಗಿದೆ. ಆದ್ದರಿಂದ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದನ್ನು ಕಲಿಯಬೇಕು ಎಂದರು.

ಶಿಕ್ಷಣ ಇಲಾಖೆ ಅಪರ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ, ಸಾಹಿತಿ ಶಂಕರ ಹಲಗತ್ತಿ, ಪ್ರಾಧಿಕಾರ ಸದಸ್ಯ ಸುರೇಶ ಬಡಿಗೇರ, ಡಿಡಿಪಿಐ ಎಂ.ಎಲ್‌. ಹಂಚಾಟೆ, ವಿಜ್ಞಾನಿ ಪ್ರೊ| ಎಸ್‌.ಎನ್‌. ಶಿವಪ್ರಸಾದ, ಅರವಿಂದ ಪಾಟೀಲ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಡಾ| ಕುಮಾರ ನಾಯ್ಕ ಇದ್ದರು. ಡಾ| ಕೆ. ಮುರಳೀಧರ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಪ್ರತಿಭಾ ನಿರೂಪಿಸಿದರು. ಮಂಜುಳಾ ಯಲಿಗಾರ ವಂದಿಸಿದರು.

ಧಾರವಾಡದ ಭಾಷೆ, ಸಂಸ್ಕೃತಿ ಮಾದರಿಯಾಗಿದೆ. ಇಲ್ಲಿಯ ಭಾಷೆಯಲ್ಲಿ ನಾಲ್ಕು ಚಿತ್ರಗಳನ್ನು ನಿರ್ಮಿಸಿದ್ದೇನೆ . ಅದರಲ್ಲಿ ಮೂರು ಚಿತ್ರಗಳಿಗೆ ರಾಷ್ಟ್ರೀಯ ಪ್ರಶಸ್ತಿ ದೊರಕಿರುವುದು ಸಂತಸವನ್ನು ತಂದಿದೆ.  –ಟಿ.ಎಸ್‌.ನಾಗಾಭರಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ 

ಟಾಪ್ ನ್ಯೂಸ್

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.