ಮುಗಿದ ಮುಷ್ಕರ; ರಸ್ತೆಗಿಳಿದ ಸರ್ಕಾರಿ ಬಸ್‌

ಸಂಸ್ಥೆ ವ್ಯಾಪ್ತಿಯಲ್ಲಿ ನಿನ್ನೆ 2,847 ಬಸ್‌ಗಳ ಸಂಚಾರ |ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಸಾರಿಗೆ ವ್ಯವಸ್ಥೆಗೆ ಕ್ರಮ

Team Udayavani, Apr 22, 2021, 8:05 PM IST

vgfuytuy

ಹುಬ್ಬಳ್ಳಿ: ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎನ್ನುವ ಹೈಕೋರ್ಟ್‌ ಸೂಚನೆ ಹಾಗೂ ಸಾರಿಗೆ ನೌಕರರು ಮುಷ್ಕರ ಹಿಂಪಡೆದ ಬೆನ್ನಲ್ಲೆ ವಾಯವ್ಯ ಸಾರಿಗೆ ಸಂಸ್ಥೆಯ ಬಸ್ಸುಗಳ ಕಾರ್ಯಾಚರಣೆ ಸಹಜ ಸ್ಥಿತಿಗೆ ಬಂದಿದ್ದು, ಸಂಸ್ಥೆ ವ್ಯಾಪ್ತಿಯಲ್ಲಿ ಬುಧವಾರ 2,847 (ಶೇ.87.36) ಬಸ್‌ಗಳು ಸಂಚಾರ ಮಾಡಿವೆ.

ವಾಯವ್ಯ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಹದಿನಾಲ್ಕು ದಿನಗಳ ನಂತರ ಮೊದಲ ಬಾರಿಗೆ ರಾತ್ರಿ 8ಗಂಟೆ ಹೊತ್ತಿಗೆ 3259 ಬಸ್‌ಗಳ ಪೈಕಿ 2847 ಬಸ್‌ಗಳ ಕಾರ್ಯಾಚರಣೆ ಮಾಡಿದ್ದು, 412 ಅನುಸೂಚಿಗಳು ರದ್ದಾಗಿವೆ. ಕಳೆದ 15 ದಿನಗಳ ಮುಷ್ಕರದಿಂದ ವಾಯವ್ಯ ಸಾರಿಗೆ ಸಂಸ್ಥೆಯ 9 ವಿಭಾಗಗಳಿಗೆ 65.30 ಕೋಟಿ ರೂ. ಸಾರಿಗೆ ಆದಾಯ ನಷ್ಟವಾಗಿದೆ.

ಯಾವ ವಿಭಾಗದಲ್ಲಿ ಎಷ್ಟು?: ಹುಬ್ಬಳ್ಳಿ ಗ್ರಾ 310 (305), ಧಾರವಾಡ 299 (345) ಬೆಳಗಾವಿ 421 (510), ಚಿಕ್ಕೋಡಿ 269 (373), ಬಾಗಲಕೋಟೆ 421 (414), ಗದಗ 390 (385), ಹಾವೇರಿ 283 (356), ಉತ್ತರ ಕನ್ನಡ 238 (299), ಹು-ಧಾ ನಗರ 216 (272) ಬಸ್‌ಗಳು ಸಂಚಾರ ಮಾಡಿವೆ. ಹುಬ್ಬಳ್ಳಿ, ಬಾಗಲಕೋಟೆ ಹಾಗೂ ಗದಗ ವಿಭಾಗಗಳಲ್ಲಿ ಅನುಸೂಚಿಗಳಿಗೆ ಹೆಚ್ಚುವರಿಯಾಗಿ ಕಾರ್ಯಾಚರಣೆ ಮಾಡಲಾಗಿದೆ. ಸಾರಿಗೆ ಸಂಸ್ಥೆಗಳ ಪಾರಮ್ಯ: ಕಳೆದ ಹದಿನಾಲ್ಕು ದಿನಗಳಿಂದ ಇಲ್ಲಿನ ಹಳೇ ಬಸ್‌ ನಿಲ್ದಾಣದಲ್ಲಿ ಖಾಸಗಿ ವಾಹನಗಳ ತುಂಬಿದ್ದವು.

ಖಾಸಗಿ ವಾಹನಗಳ ಸಾರಿಗೆ ಸೌಲಭ್ಯ ಕೆಲ ಮಾರ್ಗಗಳಿಗೆ ಮಾತ್ರ ಸೀಮಿತವಾಗಿತ್ತು. ಬುಧವಾರ ಮಾತ್ರ ಇಡೀ ಬಸ್‌ ನಿಲ್ದಾಣ ತುಂಬೆಲ್ಲಾ ಸಾರಿಗೆ ಸಂಸ್ಥೆ ಬಸ್‌ಗಳು ಪಾರಮ್ಯ ಕಂಡು ಬಂದಿತು. ಸಾರಿಗೆ ಸಂಸ್ಥೆಯ ನೂರಾರು ಬಸ್‌ಗಳ ಕಾರ್ಯಚರಣೆ ಹೆಚ್ಚಾದಂತೆಲ್ಲ ಬಹುತೇಕ ಖಾಸಗಿ ವಾಹನಗಳು ನಿಲ್ದಾಣದಿಂದ ಹೊರ ನಡೆದವು. ಕೆಲ ಖಾಸಗಿ ವಾಹನಗಳ ಏಜೆಂಟ್‌ರಗಳು, ನಿಮ್ಮ ಸಂಸ್ಥೆಯ 2 ಬಸ್‌ಗಳು ಹೋದ ನಂತರ ನಮ್ಮದೊಂದು ವಾಹನ ಬಿಡಿ. ನಾಳೆಯಿಂದ ಇತ್ತ ಕಡೆ ಬರುವುದಿಲ್ಲ ಎಂದು ಸಾರಿಗೆ ಸಂಸ್ಥೆ ಅಧಿ ಕಾರಿಗಳು, ಸಿಬ್ಬಂದಿಯನ್ನು ಕೇಳುತ್ತಿರುವುದು ಕಂಡು ಬಂದಿತು. ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆಯೂ ಏರುಮುಖವಾಗುತ್ತಿರುವುದು ಕಂಡು ಬಂದಿತು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.