ಖಾಸಗಿ ಶಾಲೆ 32 ವಿದ್ಯಾರ್ಥಿಗಳು ಸರ್ಕಾರಿ ಶಾಲೆಯತ್ತ

ಪಾಲಕರ ಮನ ಮೆಚ್ಚಿಸಿದ ಮನಗುಂಡಿ ಶಾಲೆ ,ಶಿಕ್ಷಕರು-ಎಸ್‌ಡಿಎಂಸಿ ಪರಿಶ್ರಮಕ್ಕೆ ಸಂದ ಫಲ

Team Udayavani, Dec 3, 2020, 1:51 PM IST

ಖಾಸಗಿ ಶಾಲೆ 32 ವಿದ್ಯಾರ್ಥಿಗಳು ಸರ್ಕಾರಿ ಶಾಲೆಯತ್ತ

ಧಾರವಾಡ: ಶಹರದ ಖಾಸಗಿ ಶಾಲೆಗಳಿಗೆ ತೆರಳುತ್ತಿದ್ದ ಗ್ರಾಮದ ಮಕ್ಕಳನ್ನು ತನ್ನತ್ತ ಸೆಳೆಯುವಲ್ಲಿ ತಾಲೂಕಿನ ಮನಗುಂಡಿಯ ಶತಮಾನ ಕಂಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಶಸ್ವಿಯಾಗಿದೆ.

ಕೆಸರುಗದ್ದೆಯಂತಾದ ಆವರಣ, ಶಿಥಿಲಾವಸ್ಥೆಯಲ್ಲಿದ್ದ ನಲಿ-ಕಲಿ ಕೊಠಡಿಗಳು ಹೊಸ ರೂಪ ಪಡೆದುಕೊಂಡಿದ್ದು, ಧಾರವಾಡದತ್ತ ಆಂಗ್ಲ ಮಾಧ್ಯಮಕ್ಕೆ ಮುಖ ಮಾಡಿದ್ದ ಮಕ್ಕಳು ಮರಳಿ ಗ್ರಾಮದ ಶಾಲೆಯ ಕನ್ನಡ ಮಾಧ್ಯಮಕ್ಕೆ ಮರಳಿದ್ದಾರೆ.

ಮಕ್ಕಳನ್ನು ಆಕರ್ಷಿಸಲು ವಿಶಿಷ್ಟ ಹೆಜ್ಜೆ ಇಟ್ಟಿರುವ ಶಾಲೆ ಆಡಳಿತ ಮಂಡಳಿ, ರೈಲು ಬೋಗಿಯಂತೆ ಕಾಣುವ ವಿನ್ಯಾಸವನ್ನು ಕೊಠಡಿಗಳ ಹೊರಾಂಗಣಕ್ಕೆ ರೂಪಿಸಿ ಗಮನ ಸೆಳೆದಿದೆ. ಗೋಡೆಗಳಿಗೆ ರೈಲು ಬೋಗಿಗಳಂತೆ ನೀಲಿ ಬಣ್ಣ ಬಳಿಯಲಾಗಿದೆ. ಕೊಠಡಿಯ ಬಾಗಿಲಲ್ಲಿ ನಿಂತು ಇಣುಕಿದರೆ ರೈಲು ಬೋಗಿಯಿಂದ ಇಣುಕಿದಂತೆಯೇ ಕಾಣುತ್ತದೆ. ನಲಿ-ಕಲಿ ವಿಭಾಗದ ಐದು ಕೊಠಡಿಗಳಿಗೆ ರೈಲಿನಂತೆ ವಿನ್ಯಾಸ ಮಾಡಲಾಗಿದೆ.

ಹಳೇ ವಿದ್ಯಾರ್ಥಿಗಳ ಸಹಕಾರ: ಹಳೇ ವಿದ್ಯಾರ್ಥಿಗಳ ಸಹಕಾರದೊಂದಿಗೆ 15 ಸಾವಿರ ವೆಚ್ಚದಲ್ಲಿ ಕೊಠಡಿಗಳಿಗೆರೈಲಿನ ರೂಪ ನೀಡಲಾಗಿದೆ. ಶಾಲೆ ದುರಸ್ತಿ ಕಾರ್ಯದೊಂದಿಗೆ ಈ ಕಾರ್ಯವನ್ನೂ ಮಾಡಲಾಗಿದೆ.ಕೆಸರಿನ ಗದ್ದೆಯಾಗಿದ್ದ ಶಾಲೆ ಆವರಣವನ್ನು ಸುಸಜ್ಜಿತ ಮಾಡಲಾಗಿದೆ. ಶಾಲೆಯ ಪೂರಕ ಚಟುವಟಿಕೆಗೆಬೇಕಾದ ವಸ್ತುಗಳನ್ನು ಹಳೆಯ ವಿದ್ಯಾರ್ಥಿಗಳು ಹಾಗೂ ದಾನಿಗಳ ಮೂಲಕ ಪಡೆದಿದ್ದಾರೆ. ಶಾಲೆಯಲ್ಲಿ ಒಟ್ಟು 402 ವಿದ್ಯಾರ್ಥಿಗಳಿದ್ದು, ನಲಿ-ಕಲಿ ವಿಭಾಗದಲ್ಲಿ 186 ವಿದ್ಯಾರ್ಥಿಗಳಿದ್ದಾರೆ. ಶಾಲೆಯ ಸಮಗ್ರ ಅಭಿವೃದ್ಧಿಗೆ ಶಿಕ್ಷಕರು, ಎಸ್‌ಡಿಎಂಸಿ, ಪಾಲಕರು, ಸ್ಥಳೀಯ ಶಿಕ್ಷಣ ಪ್ರೇಮಿಗಳು ಕೈಜೋಡಿಸಿದ್ದಾರೆ.

ಇದನ್ನೂ ಓದಿ : ಸಚಿವರಾಗುವ ಆಸೆ ಆಕಾಂಕ್ಷೆ ಎಲ್ಲರಿಗೂ ಇರುತ್ತೆ, ಆದರೆ.. ವಿಶ್ವನಾಥ್ ಗೆ ಸವದಿ ಕಿವಿಮಾತು

ಮಕ್ಕಳಿಗೆ ಬೇಕಾದ ಸೌಲಭ್ಯ ಕಲ್ಪಿಸಿ ಅವರನ್ನು ಕಲಿಕೆಯಲ್ಲಿ ತೊಡಗಿಸಬೇಕೆಂಬಉದ್ದೇಶದಿಂದ ಈ ವಿನೂತನ ಪ್ರಯೋಗ ಮಾಡಿದ್ದು, ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿದೆ. ಇದರಿಂದ ಶಾಲೆಯ ಸಮಗ್ರ ಪಗತಿಯೊಂದಿಗೆ ಮಕ್ಕಳದಾಖಲಾತಿಯೂ ಹೆಚ್ಚಾಗಿದೆ. – ಶಾರದಾ ಜಯರಾಮನವರ, ಮುಖ್ಯ ಶಿಕ್ಷಕಿ, ಮನಗುಂಡಿ

ಮಕ್ಕಳನ್ನು ಆಕರ್ಷಿಸಲು ರೈಲು ಎಂಜಿನ್‌ ಮತ್ತು ಡಬ್ಬಿಗಳ ತರಹ ಚಿತ್ರ ಬಿಡಿಸಿದ್ದೇವೆ. ಧಾರವಾಡದ ಖಾಸಗಿ ಶಾಲೆಗೆ ಹೋಗುತ್ತಿದ್ದ 32 ಮಕ್ಕಳು ಶಾಲೆಯ ವಿವಿಧ ತರಗತಿಯಲ್ಲಿ ಪ್ರಸಕ್ತ ಸಾಲಿಗೆ ಪ್ರವೇಶ ಪಡೆದಿದ್ದು, ನಮ್ಮ ಪ್ರಯತ್ನಕ್ಕೆ ಸ್ಪಂದನೆ ಲಭಿಸಿದೆ. ಶಾಲೆ ವಂಚಿತ ಮಕ್ಕಳನ್ನೂ ಶಾಲೆಯತ್ತ ಸೆಳೆಯಲೂ ಪ್ರಯತ್ನಿಸಿದ್ದೇವೆ. ನಿಂಗಪ್ಪ ಹಡಪದ, ಅಧ್ಯಕ್ಷ, ಎಸ್‌ಡಿಎಂಸಿ, ಮನಗುಂಡಿ

ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.