ಹಸಿರುಡುಗೆ ತೊಟ್ಟು ಕಂಗೊಳಿಸಲಿವೆ ರಸ್ತೆಗಳು


Team Udayavani, Feb 12, 2020, 11:20 AM IST

huballi-tdy-3

ಸಾಂಧರ್ಬಿಕ ಚಿತ್ರ

ಹುಬ್ಬಳ್ಳಿ: ಮಹಾನಗರ ಸೌಂದರ್ಯಿಕರಣ ಹಾಗೂ ಹಸಿರು ಪರಿಸರ ನಿರ್ಮಾಣ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ರಸ್ತೆ ವಿಭಜಕ (ಡಿವೈಡರ್‌)ಗಳಲ್ಲಿ ಗಿಡ ನೆಡುವ ಕಾರ್ಯಕ್ಕೆ ಮುಂದಾಗಿದ್ದು, ಮಹಾನಗರ ಪ್ರವೇಶಿಸುವ ಪ್ರಮುಖ ರಸ್ತೆಗಳು ಹಸಿರಿನಿಂದ ಕಂಗೊಳಿಸಲಿವೆ.

ಮಹಾನಗರ ಪ್ರವೇಶಿಸುವ ಪ್ರಮುಖ ರಸ್ತೆಗಳು ಸುಧಾರಣೆ ಕಾಣುತ್ತಿವೆ. ಇದಕ್ಕೆ ಪೂರಕವಾಗಿ ಒಂದಿಷ್ಟು ಹಸಿರು ಸ್ಪರ್ಶ ನೀಡಿದರೆ ರಸ್ತೆಗಳ ಅಂದ ಹೆಚ್ಚಾಗಿ ನಗರದ ಸೌಂದರ್ಯ ಮತ್ತಷ್ಟು ಹೆಚ್ಚಲಿದೆ ಎನ್ನುವ ಕಾರಣಕ್ಕೆ ರಸ್ತೆ ವಿಭಜಕಗಳಲ್ಲಿ ವಿವಿಧ ಜಾತಿಯ ಗಿಡ ನೆಡುವುದರ ಜೊತೆಗೆ ಲಾನ್‌ ಬೆಳೆಸಲು ಪಾಲಿಕೆ ಮುಂದಾಗಿದೆ. ಮೊದಲ ಹಂತದಲ್ಲಿ ಮಹಾನಗರದ ಎರಡು ರಸ್ತೆಗಳನ್ನು ಆಯ್ಕೆ ಮಾಡಿಕೊಂಡು ಬೆಂಗಳೂರು ಮೂಲದ ನರ್ಸರಿಮೆನ್‌ ಕೋ-ಆಪರೇಟಿವ್‌ ಸೊಸೈಟಿ ಸಂಸ್ಥೆಗೆ ಗುತ್ತಿಗೆ ನೀಡಿದೆ. ಈಗಾಗಲೇ ಲ್ಯಾಮಿಂಗ್ಟನ್‌ ರಸ್ತೆ ವಿಭಜಕದಲ್ಲಿ ಗಿಡ ನೆಡಲಾಗಿದೆ.

ಮಹಾನಗರ ಪಾಲಿಕೆಯ “ಹಸಿರು ಉಸಿರು’ ಯೋಜನೆಯಲ್ಲಿ ಈ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಮಹಾನಗರ ಪ್ರಮುಖ ರಸ್ತೆಯಾದ ಲ್ಯಾಮಿಂಗ್ಟನ್‌ ಹಾಗೂ ವಿಮಾನ ನಿಲ್ದಾಣ ರಸ್ತೆ ಆಯ್ಕೆ ಮಾಡಿಕೊಳ್ಳಲಾಗಿದ್ದು, ಗಿಡ ನೆಡುವ ಕಾರ್ಯ ಆರಂಭವಾಗಿದೆ. ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತ, ವಿಮಾನ ನಿಲ್ದಾಣದಿಂದ ಹೊಸೂರು ವೃತ್ತದವರೆಗೆ ಗಿಡ ನೆಡಲು ನಿರ್ಧರಿಸಲಾಗಿದ್ದಾದರೂ ಲೋಕೋಪಯೋಗಿ ಇಲಾಖೆಯಿಂದ ವಿಮಾನ ನಿಲ್ದಾಣ ರಸ್ತೆಯಲ್ಲಿ ರಸ್ತೆ ವಿಭಜಕ ನಿರ್ಮಾಣ ಹಾಗೂ ದುರಸ್ತಿ ಕಾರ್ಯ ಕೈಗೊಂಡಿರುವ ಕಾರಣ ಅಕ್ಷಯ ಪಾರ್ಕ್‌ವರೆಗೆ ನೆಟ್ಟು ನಂತರ ಅದನ್ನು ಮುಂದುವರಿಸುವ ಯೋಜನೆ ಇದೆ.

ಪ್ರಮುಖ ರಸ್ತೆಗಳ ಗುರಿ: ನಗರದ ಎಲ್ಲಾ ಪ್ರಮುಖ ರಸ್ತೆಗಳ ವಿಭಜಕಗಳಲ್ಲಿ ಗಿಡ ನೆಡಲು ಪಾಲಿಕೆ ಯೋಜನೆ ರೂಪಿಸಿದೆ. ಶೀಘ್ರದಲ್ಲಿ ಕುಸಗಲ್ಲ ರಸ್ತೆಯಲ್ಲಿ ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ಯೋಜನೆ ಕಾರ್ಯಗತಗೊಳ್ಳಲಿದೆ. ನಂತರದಲ್ಲಿ ಧಾರವಾಡದ ಕೆಸಿಡಿ ಕಾಲೇಜು ರಸ್ತೆ ಹಸಿರೀಕರಣಗೊಳ್ಳಲಿವೆ. ಇದೀಗ ಗಿಡ ನೆಡುತ್ತಿರುವ ರಸ್ತೆ ವಿಭಜಕಗಳಲ್ಲಿ ಹಿಂದೆ ಇದೇ ಯೋಜನೆಯಲ್ಲಿ ನೆಡಲಾಗಿತ್ತಾದರೂ ನಿರ್ವಹಣೆ ಕೊರತೆ, ರಸ್ತೆ ದುರಸ್ತಿ ಕಾರ್ಯಗಳಿಂದ ರಸ್ತೆ ವಿಭಜಕ ಸೇರಿದಂತೆ ಗಿಡಗಳು ಇಲ್ಲದಂತಾಗಿದ್ದವು. ಇದೀಗ ಗುತ್ತಿಗೆ ಪಡೆದಿರುವ ಸಂಸ್ಥೆ ಒಂದು ವರ್ಷ ಕಾಲ ನಿರ್ವಹಣೆ ಕಾರ್ಯ ಮಾಡಲಿದೆ. ಮುಂದೆ ನಿರ್ವಹಣೆ ಭಾರ ಯಾರದ್ದು ಎಂಬ ಪ್ರಶ್ನೆ ಮೂಡಿದೆ. ಪಾಲಿಕೆ ಈ ನಿಟ್ಟಿನಲ್ಲಿ ಮುಂದೆಯೂ ಜವಾಬ್ದಾರಿ ಹೊರಬೇಕಿದೆ.

ಗಿಡಗಳಿಗೆ ಕಳ್ಳರ ಕಾಟ :  ಇತ್ತೀಚೆಗೆ ಉದ್ಘಾಟನೆಗೊಂಡಿರುವ ಟೆಂಡರ್‌ ಶ್ಯೂರ್‌ ರಸ್ತೆಯ ವಿಭಜಕದಲ್ಲಿ ನೆಟ್ಟಿದ್ದ ಗಿಡಗಳಿಗೆ ಕಳ್ಳರ ಕಾಟ ಹೆಚ್ಚಾಗಿತ್ತು. ಆರಂಭದಲ್ಲಿ ಗಿಡಗಳನ್ನು ಕಾಯಲು ಭದ್ರತಾ ಸಿಬ್ಬಂದಿ ನೇಮಿಸುವ ಪರಿಸ್ಥಿತಿ ಒದಗಿಬಂದಿತ್ತು. ರಾತ್ರಿ ವೇಳೆ ಸುತ್ತಮುತ್ತಲಿನ ಜನರು ಗಿಡಗಳನ್ನು ಕಿತ್ತುಕೊಂಡು ಹೋಗುತ್ತಿರುವುದು ಪಾಲಿಕೆ ಅಧಿಕಾರಿಗಳಿಗೆ ತಲೆನೋವಾಗಿತ್ತು. ಇದೀಗ ಇಲ್ಲಿನ ಗಿಡಗಳ ಪರಿಸ್ಥಿತಿ ಹೇಗೆ ಎಂಬುವುದು ಪಾಲಿಕೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಚಿಂತೆಯಾಗಿ ಪರಿಣಮಿಸಿದ್ದು, ಈ ಗಿಡ ಹಾಗೂ ಸಸಿಗಳು ಕಡಿಮೆ ದರದಲ್ಲಿ ಎಲ್ಲಾ ನರ್ಸರಿಗಳಲ್ಲಿ ದೊರೆಯುತ್ತಿದ್ದು, ಪಾಲಿಕೆಯ ಈ ಕಾರ್ಯಕ್ಕೆ ಜನರು ಸಹಕಾರ ನೀಡಬೇಕು ಎಂಬುವುದು ಪಾಲಿಕೆ ಅಧಿಕಾರಿಗಳ ಮನವಿಯಾಗಿದೆ.

38.8 ಲಕ್ಷ ರೂ. ವೆಚ್ಚ :  ಲ್ಯಾಮಿಂಗ್ಟನ್‌ ಹಾಗೂ ವಿಮಾನ ನಿಲ್ದಾಣ ರಸ್ತೆಗಳಲ್ಲಿ ರಾಯಲ್‌ ಫಾಮ್‌, ಫಾಗಸೇrಲ್‌ ತಳಿಯ ಗಿಡಗಳನ್ನು ನೆಟ್ಟು ಅವುಗಳ ಮಧ್ಯದಲ್ಲಿ ಪೊದೆ ರೀತಿಯಲ್ಲಿ ಬೆಳೆಯುವ ಸಸಿಗಳನ್ನು ನೆಡಲಾಗುತ್ತಿದೆ. ಈ ಎರಡು ರಸ್ತೆಗಳಲ್ಲಿ ಸುಮಾರು 14,000ಗಿಡ ಹಾಗೂ ಸಸಿ ನೆಡಲಾಗುತ್ತಿದೆ. ಇದಕ್ಕಾಗಿ ಸುಮಾರು 38.8 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ. ಇದೀಗ ಆಯ್ಕೆ ಮಾಡಿಕೊಂಡಿರುವ ಗಿಡ ಹಾಗೂ ಸಸಿಗಳು ರಸ್ತೆ-ವಿಭಜಕಕ್ಕೆ ಯಾವುದೇ ಧಕ್ಕೆ ಮಾಡುವುದಿಲ್ಲ. ಮೇಲಾಗಿ ಜಾನುವಾರುಗಳು ತಿನ್ನದಂತಹ ಗಿಡಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕೆಲವೆಡೆ ರಸ್ತೆ ವಿಭಜಕಗಳು ಹಾಳಾಗಿದ್ದರೆ ಅವುಗಳನ್ನು ದುರಸ್ತಿ ಮಾಡಿಸಿ ಸಸಿ ಬೆಳೆಸುವ ಕಾರ್ಯ ನಡೆದಿದೆ.

ಹಸಿರು ಉಸಿರು ಯೋಜನೆಯಲ್ಲಿ ನಗರದ ಸೌಂದಯೀìಕರಣ ಹಾಗೂ ಹಸಿರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಮಹಾನಗರದ ಪ್ರಮುಖ ರಸ್ತೆಗಳನ್ನು ಹಸಿರು ಉಸಿರು ಯೋಜನೆಗೆ ಒಳಪಡಿಸುವ ಯೋಜನೆಯಿದೆ. ಪಾಲಿಕೆ ಆಯುಕ್ತರ ಮಾರ್ಗದರ್ಶನದ ಮೇರೆಗೆ ಇನ್ನಷ್ಟು ಕಾರ್ಯ ಕೈಗೊಳ್ಳಲಾಗುವುದು. ಜನರ ಸಹಭಾಗಿತ್ವ ಇಲ್ಲದೆ ಯಾವುದೇ ಯೋಜನೆ ಯಶಸ್ವಿಯಾಗಲು ಸಾಧ್ಯವಿಲ್ಲ. ನೆಟ್ಟಿರುವ ಗಿಡಗಳನ್ನು ಹಾಳು ಮಾಡದೆ ಕಾಪಾಡಿಕೊಳ್ಳಬೇಕು. ಇ. ತಿಮ್ಮಪ್ಪ, ಅಧೀಕ್ಷಕ ಅಭಿಯಂತ, ಹು-ಧಾ ಮಹಾನಗರ ಪಾಲಿಕೆ

 

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.