ರೈತರ ಬದುಕಿಗೆ ಬರೆ ಎಳೆದ ಆಲಿಕಲ್ಲು ಮಳೆ

Team Udayavani, Apr 20, 2018, 5:10 PM IST

20-April-20.jpg

ಹುಬ್ಬಳ್ಳಿ: ಬರದ ಛಾಯೆ ನಡುವೆಯೇ ಅಷ್ಟು ಇಷ್ಟು ನೀರಾವರಿ ವ್ಯವಸ್ಥೆಯಿಂದ ಬೆಳೆದಿದ್ದ ಭತ್ತ, ದ್ರಾಕ್ಷಿ ಇನ್ನಿತರ ಬೆಳೆ ಇತ್ತೀಚೆಗೆ ಬಿದ್ದ ಆಲಿಕಲ್ಲು ಮಳೆಯಿಂದ ಹಾನಿಗೀಡಾಗಿದೆ. ಈಗಾಗಲೇ ಸಂಕಷ್ಟದಲ್ಲಿರುವ ಅನ್ನದಾತನ ಬದುಕಿಗೆ ಆಲಿಕಲ್ಲು ಮಳೆ ಬರೆ ಎಳೆದಿದೆ.

ಇತ್ತೀಚೆಗೆ ಬಿದ್ದ ಮಳೆ ಹಾಗೂ ಆಲಿಕಲ್ಲು ಮಳೆಯಿಂದಾಗಿ ರಾಯಚೂರು, ವಿಜಯಪುರ, ಬಾಗಲಕೋಟೆ, ಯಾದಗಿರಿ ಇನ್ನಿತರ ಜಿಲ್ಲೆಗಳಲ್ಲಿ ಕೊಯ್ಲಿಗೆ ಬಂದಿದ್ದ ಭತ್ತ, ದ್ರಾಕ್ಷಿ ಇನ್ನಿತರ ಬೆಳೆಗಳು ಹಾನಿಗೀಡಾಗಿವೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾದ ಸ್ಥಿತಿ ರೈತರದ್ದಾಗಿದೆ.

ಒಂದು ವಾರ ಆಲಿಕಲ್ಲು ಮಳೆ ವಿಳಂಬವಾಗಿದ್ದರೂ ಸಾಕಾಗಿತ್ತು. ಭತ್ತದ ಕೊಯ್ಲು ಆಗಿ ರೈತರ ಕೈಗೆ ಬೆಳೆ ದಕ್ಕುತ್ತಿತ್ತು. ಇನ್ನೊಂದು ಕಡೆ ಉತ್ತಮ ಫ‌ಸಲು ಕಂಡಿದ್ದ ದ್ರಾಕ್ಷಿ ಕೂಡ ಕೈಗೆ ದಕ್ಕದಾಗಿದೆ. ಅಕಾಲಿಕ ಮಳೆಯ ಹೊಡೆತಕ್ಕೆ ರೈತರು ಕಂಗಾಲಾಗಿದ್ದಾರೆ.

2-3 ಸಾವಿರ ಎಕರೆ ಭತ್ತ ಹಾನಿ?: ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭತ್ತ ಪ್ರಮುಖ ಬೆಳೆಯಾಗಿ ಗುರುತಿಸಿಕೊಂಡಿದೆ. ಕೇವಲ ರಾಯಚೂರು-ಕೊಪ್ಪಳ ಜಿಲ್ಲೆಗಳಲ್ಲಿಯೇ ಸುಮಾರು 5-6 ಲಕ್ಷ ಎಕರೆಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. ಕೆಲವು ವರ್ಷಗಳಿಂದ ನೀರಾವರಿ ಸೌಲಭ್ಯ ಪಡೆದ ಯಾದಗಿರಿ ಜಿಲ್ಲೆಯ ಸುರಪುರ, ಶಹಾಪುರ ತಾಲೂಕುಗಳಲ್ಲಿಯೂ ಭತ್ತದ ಬೆಳೆ ವಿಸ್ತರಣೆ ಕಂಡಿದೆ.

ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ತುಂಗಭದ್ರಾ ಜಲಾಶಯ ನಂಬಿಕೊಂಡು ಭತ್ತ ಕೃಷಿ ಕೈಗೊಳ್ಳಲಾಗುತ್ತಿದೆ. ಈ ಬಾರಿ ನೀರಿನ ಕೊರತೆಯಿಂದ ಹಿಂಗಾರು ಹಂಗಾಮಿಗೆ ಭತ್ತ ನಾಟಿ ಬೇಡ ಎಂಬ ಸೂಚನೆ ನಡುವೆಯೂ ಅನೇಕ ರೈತರು ತಮ್ಮ ಹೊಲಗಳಲ್ಲಿ ಕೆರೆಗಳನ್ನು ಮಾಡಿಕೊಂಡು ಬಿಟ್ಟ ನೀರು ಸಂಗ್ರಹಿಸಿ ಭತ್ತ ಬೆಳೆದಿದ್ದರು.

ಇತ್ತೀಚೆಗೆ ಬಿದ್ದ ಆಲಿಕಲ್ಲು ಮಳೆಯಿಂದ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹಂಚಿನಾಳ, ಹಂಚಿನಾಳ ಕ್ಯಾಂಪ್‌, ಬಸವಣ್ಣ ಕ್ಯಾಂಪ್‌, ಗೊರೆಬಾಳ, ಅಂಬಾಮಠ ವ್ಯಾಪ್ತಿಯಲ್ಲಿ ಕೊಯ್ಲಿಗೆ ಸಿದ್ಧವಾಗಿದ್ದ ಭತ್ತದ ಬೆಳೆ ಹಾಗೂ ಕೊಯ್ಲು ಮಾಡಿದ್ದ ಭತ್ತ ಹಾನಿಗೀಡಾಗಿದೆ.

ಕೆಲ ರೈತರ ಪ್ರಕಾರ ಸುಮಾರು 2,000 ರಿಂದ 2,500ಎಕರೆಯಷ್ಟು ಭತ್ತದ ಬೆಳೆ ಹಾನಿಗೀಡಾಗಿದೆ ಎಂದು ಹೇಳಲಾಗುತ್ತಿದೆ. ಅದೇ ರೀತಿ ಯಾದಗಿರಿ ಜಿಲ್ಲೆಯ ಶಹಾಪುರ, ಸುರಪುರ ತಾಲೂಕಿನ ಹಲವು
ಹಳ್ಳಿಗಳಲ್ಲಿ ಬೆಳೆದು ನಿಂತ ಭತ್ತದ ಬೆಳೆ ಹಾನಿಗೀಡಾಗಿದೆ.

ಐವತ್ತರಿಂದ ಹತ್ತಿಪ್ಪತ್ತು ಚೀಲಕ್ಕೆ: ಸಿಂಧನೂರು ತಾಲೂಕಿನಲ್ಲಿ ಆಲಿಕಲ್ಲು ಮಳೆ ಬಾರದಿದ್ದರೆ ಎಕರೆಗೆ ಸುಮಾರು 45-50 ಚೀಲ ಭತ್ತ ಬರುತ್ತಿತ್ತು. ಆದರೆ ಆಲಿಕಲ್ಲು ಮಳೆ ಹಾಗೂ ಗಾಳಿಯಿಂದ ಕೊಯ್ಲಿಗೆ ಬಂದ ಭತ್ತ ನೆಲಕ್ಕೆ ಮಲಗಿದೆ. ಇದರಿಂದಾಗಿ ಇದೀಗ ಎಕರೆಗೆ 10-20 ಚೀಲ ಬರುವುದು ಕಷ್ಟವಾಗಿದೆ.

ಒಂದು ಎಕರೆಗೆ ಸುಮಾರು 30-35 ಸಾವಿರ ರೂ.ವೆಚ್ಚ ಬಂದಿದ್ದು, ಎಕರೆಗೆ 45-50 ಚೀಲ ಬಂದಿದ್ದರೆ ವೆಚ್ಚ ಕಳೆದು ಒಂದಿಷ್ಟು ಆದಾಯ ಬರುತ್ತಿತ್ತು. ಇದೀಗ ವೆಚ್ಚ ಮಾಡಿದ ಹಣವೂ ಕೈಗೆ ದಕ್ಕದ ಸ್ಥಿತಿ ಇದೆ. ಅದೇ ರೀತಿ ಭತ್ತದ ಹುಲ್ಲು ನೀರಿಗೆ ಬಿದ್ದಿದ್ದರಿಂದ ಜಾನುವಾರುಗಳಿಗೆ ಮೇವು ಇಲ್ಲದ ಸ್ಥಿತಿ ನಿರ್ಮಾಣವಾಗಲಿದೆ ಎಂಬುದು ರೈತರ ಅಳಲು.

ದ್ರಾಕ್ಷಿ ಹಾನಿ: ವಿಜಯಪುರ ಜಿಲ್ಲೆಯಲ್ಲಿ ಬೆಳೆದ ದ್ರಾಕ್ಷಿ ಬೆಳೆ ಆಲಿಕಲ್ಲು ಮಳೆಗೆ ಹಾನಿಗೀಡಾಗಿದೆ. ತಿಕೋಟಾ, ಬಬಲೇಶ್ವರ, ವಿಜಯಪುರ, ಚಡಚಣ ಪ್ರದೇಶದಲ್ಲಿ ದ್ರಾಕ್ಷಿ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಗೀಡಾಗಿದ್ದರೆ, ನಿಡಗುಂದಿ ಹಾಗೂ ಕೊರ್ತಿ-ಕೊಲ್ಹಾರ ಪ್ರದೇಶದ ಕೆಲವು ಭಾಗಗಳಲ್ಲಿ ದ್ರಾಕ್ಷಿ ಬೆಳೆ ಸ್ವಲ್ಪ ಪ್ರಮಾಣದಲ್ಲಿ ಹಾನಿಗೀಡಾಗಿದೆ.

ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ಭತ್ತ ಹಾಗೂ ದ್ರಾಕ್ಷಿ ಬೆಳೆಗಾರರು ಇದೀಗ ಪರಿತಪಿಸುವಂತಾಗಿದ್ದು, ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಇನ್ನೊಂದು ವಾರ ತಡವಾಗಿದ್ದರೂ ಭತ್ತದ ಕೊಯ್ಲು ಆಗಿ ಭತ್ತ ಮನೆ ಸೇರುತ್ತಿತ್ತು. ದಿಢೀರ್‌ನೆ ಸುರಿದ ಆಲಿಕಲ್ಲು
ಮಳೆ ಬೆಳೆ ಹಾನಿ ಮಾಡಿದೆ. ಕೆಲ ದಿನಗಳ ಹಿಂದೆಯಷ್ಟೇ 75ಕೆ.ಜಿ. ತೂಕದ ಚೀಲದ ಭತ್ತಕ್ಕೆ ಸುಮಾರು 1,400-1,500ರೂ. ನಷ್ಟು ಇದ್ದ ಬೆಲೆ ಇದೀಗ 1,000-1,150ರೂ.ಗೆ ಇಳಿದಿದೆ. ರೈತರಿಗೆ ಒಂದು ಕಡೆ ಬೆಳೆ ನಷ್ಟ,
ಇನ್ನೊಂದು ಕಡೆ ಬೆಲೆ ಕುಸಿತದ ಸಂಕಷ್ಟ ಎದುರಾಗಿದೆ.
ಸಂತೋಷ ಪಾಟೀಲ, ಹಂಚಿನಾಳ ರೈತ.

ಅಮರೇಗೌಡ ಗೋನವಾರ 

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.