ವರುಣನ ಆರ್ಭಟಕ್ಕೆ ಧರೆಗೊರಗಿದ ಮನೆಗಳು

ಹುಬ್ಬಳ್ಳಿಯಲ್ಲಿ ಉತ್ತಮ ಮಳೆ | ರೇವಡಿಹಾಳದಲ್ಲಿ ಎರಡು ಮನೆ ಕುಸಿತ | ಮನೆ ಬಿದ್ದ 24 ಪ್ರಕರಣಗಳಲ್ಲಿ ಜಿಲ್ಲಾಡಳಿತದಿಂದ ಪರಿಹಾರ ತಿರಸ್ಕಾರ

Team Udayavani, Aug 4, 2019, 9:46 AM IST

ಹುಬ್ಬಳ್ಳಿ: ದಾಜಿಬಾನಪೇಟೆ ವೃತ್ತದಲ್ಲಿ ಸಂಗ್ರಹವಾದ ಮಳೆ ನೀರು-ವಾಹನ ಸಂಚಾರ ತಡೆಯಲು ಬ್ಯಾರಿಕೇಡ್‌ ಹಾಕಲಾಗಿತ್ತು.

ಹುಬ್ಬಳ್ಳಿ: ತಾಲೂಕಿನಾದ್ಯಾಂತ ಶನಿವಾರ ಉತ್ತಮ ಮಳೆಯಾಗಿದ್ದು, ರೇವಡಿಹಾಳದಲ್ಲಿ ಎರಡು ಮನೆ ಬಿದ್ದಿರುವ ಬಗ್ಗೆ ವರದಿಯಾಗಿದೆ.

ಮಳೆಗಾಲದ ಆರಂಭದಿಂದ ಇಲ್ಲಿಯವರೆಗೆ ಹೋಲಿಸಿದರೆ ಶನಿವಾರ ಉತ್ತಮ ಮಳೆಯಾಗಿದ್ದು, ನಗರದ ತಗ್ಗು ಪ್ರದೇಶದಲ್ಲಿನ ರಸ್ತೆಗಳಲ್ಲಿ ಮಳೆ ನೀರು ತುಂಬಿತ್ತು. ಬೆಳಗ್ಗಿನಿಂದ ಆರಂಭವಾದ ಮಳೆ ಬಿಟ್ಟು ಬಿಡದೆ ಸುರಿದಿದ್ದು, ಮಲೆನಾಡಿನ ಮಳೆ ನೆನಪಿಸುವಂತಿತ್ತು. ರೇವಡಿಹಾಳ ಗ್ರಾಮದಲ್ಲಿ ಎರಡು ಮನೆ ಕುಸಿದಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ. ತಾಲೂಕಿನಾದ್ಯಾಂತ ಉತ್ತಮ ಮಳೆಯಾಗಿದೆ ಎಂದು ತಹಶೀಲ್ದಾರ್‌ ಸಂಗಪ್ಪ ಬಾಡಗಿ ತಿಳಿಸಿದ್ದಾರೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ರಸ್ತೆಗಳು ಹೊಂಡಮಯವಾಗಿದ್ದು, ಕೆಸರುಗದ್ದೆಯಂತಾಗಿವೆ. ದ್ವಿಚಕ್ರ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುವಂತಾಗಿದೆ. ಗುಂಡಿಗಳನ್ನು ಮುಚ್ಚುವ ಕೆಲಸಕ್ಕೆ ಪಾಲಿಕೆ ಮುಂದಾಗಿದ್ದು, ಗುಂಡಿಗಳಿಗೆ ವೆಟ್ಮಿಕ್ಸ್‌ ಹಾಕುತ್ತಿದೆ. ಕೆಲವೆಡೆ ಮಳೆ ನೀರು ಸರಾಗವಾಗಿ ಹರಿಯದ ಕಾರಣ ರಸ್ತೆ ಮೇಲೆ ಸಂಗ್ರಹವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ನೀರನ್ನು ಚರಂಡಿಗೆ ಹರಿಸುವ ಕೆಲಸ ಮಾಡಿದರು. ದಾಜಿಬಾನಪೇಟೆ ವೃತ್ತದಲ್ಲಿ ನೀರು ಸಂಗ್ರಹವಾದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ವಾಹನಗಳ ಸಂಚಾರ ತಡೆಗೆ ವೃತ್ತದ ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

  • ಧಾರವಾಡ: ಹನಿ ನೀರನ್ನು ಪರಿಪೂರ್ಣವಾಗಿ ಬಳಸಿ, ನಿಗದಿತ ಸಮಯದಲ್ಲಿ ಅದನ್ನು ಹಣವಾಗಿ ಪರಿವರ್ತಿಸುವ ಕೃಷಿ ವಿಧಾನವನ್ನು ಜಗತ್ತಿಗೆ ಮಾದರಿಯಾಗಿ ಕೊಟ್ಟಿದ್ದು ಇಸ್ರೇಲ್‌...

  • ಹುಬ್ಬಳ್ಳಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ದಿನವಾದ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಯಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ...

  • ಧಾರವಾಡ: ಕೃಷಿ ಮೇಳದ ಜಾನುವಾರು ಪ್ರದರ್ಶನದಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಸಲ ಜಾನುವಾರುಗಳ ಸಂಖ್ಯೆ ಕಡಿಮೆ ಇದ್ದು, ವೀಕ್ಷಕರ ಸಂಖ್ಯೆಯೂ ತೀರಾ ಕಡಿಮೆ ಇತ್ತು....

  • ಧಾರವಾಡ: ದ್ರಾಕ್ಷಾರಸ ಮದಿರೆಯಾಗಿ ಮತ್ತೇರಿಸುವುದು ಇತಿಹಾಸದಲ್ಲಿತ್ತು. ಅದೇ ದ್ರಾಕ್ಷಾರಸ ವೈನ್‌ ಎಂಬ ಹೆಸರಿನೊಂದಿಗೆ ಆಧುನಿಕ ಜಗತ್ತಿನಲ್ಲಿ ಹೆಸರಾಗಿದೆ. ಇದೀಗ...

  • ಧಾರವಾಡ: ಕೃಷಿ ವಿಶ್ವವಿದ್ಯಾಲಯಗಳು ರೈತರ ಜೊತೆ ಕೃಷಿ ಅಭಿವೃದ್ಧಿಗೆ ಜಂಟಿ ಪ್ರಯೋಗ ಮಾಡುವುದು ಹಾಗೂ ಕೃಷಿ ಪದವೀಧರರು ಹೊಲಗಳಿಗೆ ಮರಳಿ ಆಧುನಿಕ ಕೃಷಿ ಮಾಡಿದರೆ...

ಹೊಸ ಸೇರ್ಪಡೆ