ಬೆಂಗಳೂರಿನಿಂದ ಧಾರವಾಡಕ್ಕೆ ಹೈಸ್ಪೀಡ್‌ ರೈಲು

•2022ರೊಳಗೆ ಯೋಜನೆ ಅನುಷ್ಠಾನ•ಕೇಂದ್ರ ಸಚಿವರಿಂದ ಅಭಿವೃದ್ಧಿ ಸಂಕಲ್ಪ

Team Udayavani, Jul 7, 2019, 9:34 AM IST

hubali-tdy-3..

ಧಾರವಾಡ: ವಿದ್ಯಾಗಿರಿಯ ಜೆಎಸ್ಸೆಸ್‌ ಕಾಲೇಜಿನ ಸನ್ನಿಧಿ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಸತ್ಕರಿಸಲಾಯಿತು.

ಧಾರವಾಡ: ದೇಶದಲ್ಲಿ ಬದಲಾವಣೆ ಅತಿ ಅವಶ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ರೈಲು, ಪ್ರವಾಸೋದ್ಯಮ, ಕೈಗಾರಿಕೆಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ವಿದ್ಯಾಗಿರಿಯ ಜೆಎಸ್ಸೆಸ್‌ ಕಾಲೇಜಿನ ಸನ್ನಿಧಿ ಕಲಾಕ್ಷೇತ್ರದಲ್ಲಿ ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರದ ನಾಗರಿಕರಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

ಕ್ಷೇತ್ರದ ಅಭಿವೃದ್ಧಿಗಾಗಿ ಕೈಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಿ ನಿರೋದ್ಯೋಗ ಸಮಸ್ಯೆ ಬಗೆಹರಿಸಲಾಗುವುದು. ಪ್ರತಿಯೊಬ್ಬರಿಗೂ 2024ರೊಳಗೆ ಶುದ್ಧ ಕುಡಿಯುವ ನೀರು ಒದಗಿಸುವ ಸಂಕಲ್ಪ ಮಾಡಲಾಗಿದೆ. 2022ರೊಳಗೆ ಬೆಂಗಳೂರಿನಿಂದ ಧಾರವಾಡಕ್ಕೆ 4 ಗಂಟೆಗಳಲ್ಲಿ ರೈಲು ಸಂಚರಿಸುವಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಮೋದಿ ಅವರ ಸಂಪುಟದಲ್ಲಿ ಮಂತ್ರಿ ಸ್ಥಾನ ಲಭಿಸಿರುವುದು ಜವಾಬ್ದಾರಿ ಹೆಚ್ಚಿಸಿದೆ. ಹೀಗಾಗಿ ಆದಷ್ಟು ಸನ್ಮಾನ ಸಮಾರಂಭಗಳನ್ನು ಬದಿಗಿಟ್ಟು ಪ್ರಾಮಾಣಿಕವಾಗಿ ಜನರ ಅಪೇಕ್ಷೆಗೆ ತಕ್ಕಂತೆ ಸಮಾಜಮುಖೀಯಾಗಿ ಕಾರ್ಯಪ್ರವೃತ್ತನಾಗುತ್ತೇನೆ. ಯುಪಿಎ ಸರ್ಕಾರ 10 ವರ್ಷಗಳಲ್ಲಿ 13 ಲಕ್ಷ ಮನೆಗಳನ್ನು ನಿರ್ಮಿಸಿದರೆ ಮೋದಿ ಸರ್ಕಾರ 5 ವರ್ಷಗಳಲ್ಲಿ 26 ಲಕ್ಷ ಮನೆಗಳನ್ನು ನಿರ್ಮಿಸಿ ವಿತರಿಸಿದೆ. ಇದು ಮೋದಿ ಸರ್ಕಾರದ ಕೆಲಸಕ್ಕೆ ಹಿಡಿದ ಕೈಗನ್ನಡಿ ಎಂದರು.

ಆರೆಸ್ಸೆಸ್‌ ಉತ್ತರ ಪ್ರಾಂತ ಸಹ ಕಾರ್ಯವಾಹ ಶ್ರೀಧರ ನಾಡಿಗೇರ ಮಾತನಾಡಿ, ಗುಲಾಮರ ದೇಶ ಎಂದು ಬಿಂಬಿತವಾಗುತ್ತಿದ್ದ ಭಾರತ ಇಂದು ಜಗತ್ತಿನ ಬಲಿಷ್ಠ ರಾಷ್ಟ್ರಗಳಲ್ಲಿ ಒಂದಾಗಿದೆ. ಅಧಿಕಾರಕ್ಕಾಗಿ ಸಮಾಜ ಒಡೆಯುವ ಶಕ್ತಿಗಳು ನಮ್ಮ ಒಳಗೆ ಮತ್ತು ಹೊರಗೆ ಇವೆ. ಅವುಗಳ ನಾಶದಿಂದ ಜನರಲ್ಲಿ ಸಂಘಟಿತ ಭಾವ ಮೂಡಿದರೆ ಭಾರತ ವಿಶ್ವಗುರು ಆಗಲಿದೆ. ಅಧಿಕಾರದಲ್ಲಿರುವ ಸರ್ಕಾರ ಎಲ್ಲರನ್ನು ಒಗ್ಗೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿದರು. ಪ್ರೊ| ಎಂ.ಐ. ಸವದತ್ತಿ ಅಧ್ಯಕ್ಷತೆ ವಹಿಸಿದ್ದರು. ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಎಸ್‌.ಆರ್‌. ರಾಮಗೌಡರ, ಅರುಣ ಜೋಶಿ, ರೆವರೆಂಡ್‌ ಸಕ್ಕರಿ, ಕೆ.ಬಿ. ನಾವಲಗಿಮಠ, ಸುಭಾಷ ನಾಡಿಗೇರ, ಡಾ| ಆನಂದ ಪಾಂಡುರಂಗಿ ಇದ್ದರು. ರವಿ ಕುಲಕರ್ಣಿ ನಿರೂಪಿಸಿದರು. ಪ್ರೊ| ಕಿರಣ ಶಿಂಧೆ ಸ್ವಾಗತಿಸಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.