ಮಕ್ಕಳ ರಂಗ ತರಬೇತಿ ಶಿಬಿರಕ್ಕೆ ಚಾಲನೆ

ಪೋಷಕರು ಮಕ್ಕಳ ಮೇಲೆ ಒತ್ತಡ ಹೇರದೆ ಸ್ವತಂತ್ರವಾಗಿ ಬಿಟ್ಟಾಗಲೇ ವ್ಯಕ್ತಿತ್ವ ವಿಕಸನ: ಗುಡಸಿ

Team Udayavani, Apr 12, 2022, 12:45 PM IST

7

ಧಾರವಾಡ: ಮಕ್ಕಳ ಮೇಲೆ ಪೋಷಕರು ಒತ್ತಡ ಹೇರದೆ ಸ್ವತಂತ್ರವಾಗಿ ಬಿಟ್ಟಾಗಲೇ ಸ್ವತಂತ್ರವಾಗಿ ಯೋಚಿಸಲು ಹಾಗೂ ವ್ಯಕ್ತಿತ್ವ ವಿಕಸನಗೊಳಿಸಲು ಸಹಕಾರಿಯಾಗುತ್ತದೆ ಎಂದು ಕವಿವಿ ಕುಲಪತಿ ಡಾ| ಕೆ.ಬಿ.ಗುಡಸಿ ಹೇಳಿದರು.

ರಂಗಾಯಣದಲ್ಲಿ ಚಿಣ್ಣರ ನಡೆ ಹಳ್ಳಿಕಡೆ ನುಡಿಗಟ್ಟಿನೊಂದಿಗೆ ಮೇ 2ರವರೆಗೆ ಆಯೋಜಿಸಿರುವ ಮಕ್ಕಳ ಬೇಸಿಗೆ ರಂಗ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಆಧುನಿಕತೆ ಭರಾಟೆಯಲ್ಲಿ ಮುಳುಗಿರುವ ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಬರೀ ಪಠ್ಯದ ಜ್ಞಾನವನ್ನು ಮಾತ್ರ ನೀಡದೆ ಸಂಗೀತ, ನೃತ್ಯ, ನಾಟಕದಂತಹ ಕಲೆಗಳ ಅರಿವನ್ನು ಮೂಡಿಸಬೇಕು. ಈ ನಿಟ್ಟಿನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ, ರಂಗ ತರಬೇತಿ ಶಿಬಿರಗಳ ಅಗತ್ಯವಿದೆ. ಇದರಿಂದ ಮಕ್ಕಳ ವ್ಯಕ್ತಿತ್ವ ವಿಕಸನಗೊಳ್ಳಲು ಸಹಕಾರಿ ಎಂದರು.

ಸಾನ್ನಿಧ್ಯ ವಹಿಸಿದ್ದ ದೇವರಹುಬ್ಬಳ್ಳಿಯ ಸಿದ್ಧಾಶ್ರಮದ ಸಿದ್ಧಶಿವಯೋಗಿಗಳು ಮಾತನಾಡಿ, ನಾಟಕವು ಒಂದು ದೇವದತ್ತ ಕಲೆಯಾಗಿದೆ. ನಾಟಕಗಳು ಸಾಮಾಜಿಕ, ಐತಿಹಾಸಿಕ ಹಾಗೂ ಪ್ರಚಲಿತ ವಿಚಾರಗಳ ಕುರಿತು ಜನರಲ್ಲಿ ಅರಿವನ್ನು ಮೂಡಿಸುತ್ತವೆ. ನಗರದ ಮಕ್ಕಳಿಗೆ ಹಳ್ಳಿಯ ವಾತಾವರಣವನ್ನು ತಿಳಿಸುವ ಕಾರ್ಯವನ್ನು ರಂಗಾಯಣ ಮಾಡುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಅಶೋಕ ತೇಲಿ ಮಾತನಾಡಿ, ಮಕ್ಕಳು ಓದಿನ ಜತೆಗೆ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.

ಕೃಷಿ ವಿವಿ ಕುಲಸಚಿವ ಶಿವಾನಂದ ಕರಾಳೆ ಮಾತನಾಡಿ, ರಂಗಾಯಣವು ಏರ್ಪಡಿಸಿರುವ ಬೇಸಿಗೆ ಶಿಬಿರದ ಉದ್ದೇಶ ಮಕ್ಕಳಿಗೆ ಹಳ್ಳಿಯ ವಾತಾವರಣದ ಪರಿಚಯವನ್ನು ನೀಡುವುದಾಗಿದೆ ಎಂದರು.

ರಂಗಾಯಣದ ನಿರ್ದೇಶಕ ರಮೇಶ ಪರವಿನಾಯ್ಕರ ಅಧ್ಯಕ್ಷತೆ ವಹಿಸಿದ್ದರು. ಎಸ್‌ಪಿ ಕೃಷ್ಣಕಾಂತ, ನ್ಯಾಯವಾದಿ ಅರುಣ ಜೋಶಿ, ಕವಿಸಂ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಮಕ್ಕಳ ಸಾಹಿತಿಗಳಾದ ಮುಕುಂದ ಮೈಗೂರ, ಎಂ.ಎಂ. ಚಿಕ್ಕಮಠ, ರಂಗಸಮಾಜ ಸದಸ್ಯರಾದ ಹಿಪ್ಪರಗಿ ಸಿದ್ಧರಾಮ, ರಂಗಕರ್ಮಿಗಳು ವಿಠ್ಠಲ ಕೊಪ್ಪದ ಇನ್ನಿತರರಿದ್ದರು. ಕೆ.ಎಚ್‌. ನಾಯಕ ಪ್ರಾಸ್ತಾವಿಕ ಮಾತನಾಡಿದರು. ಫಕ್ಕೀರಪ್ಪ ಮಾದನಭಾವಿ ನಿರೂಪಿಸಿ, ವಂದಿಸಿದರು.

ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಿ

ಧಾರವಾಡ: ಮಕ್ಕಳು ಸಮಯ ವ್ಯರ್ಥ ಮಾಡದೇ ಶಿಬಿರದಲ್ಲಿ ಹೇಳಿಕೊಡುವ ಸಂಗೀತ, ನಾಟಕ ಹಾಗೂ ವಿವಿಧ ಬಗೆಯ ವಿಭಿನ್ನ ಚಟುವಟಿಕೆಗಳನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಅವುಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ರಂಗಭೂಮಿ ನಿರ್ದೇಶಕ ಪ್ರಕಾಶ ಬೆಳವಾಡಿ ಹೇಳಿದರು.

ರಂಗಾಯಣದಲ್ಲಿ ಹಮ್ಮಿಕೊಂಡಿ ರುವ ಚಿಣ್ಣರ ಮೇಳದ ಮಕ್ಕಳ ಬೇಸಿಗೆ ರಂಗ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಕ್ಕಳು ಓದಿನ ಜತೆಗೆ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಿಕೊಳ್ಳಬೇಕು. ಪಠ್ಯದ ಜ್ಞಾನದ ಜತೆಗೆ ಸಂಗೀತ, ನೃತ್ಯ, ಕಥೆಗಳನ್ನು ಹೇಳುವ ಕಲೆ, ನಾಟಕದಲ್ಲಿ ಅಭಿನಯಿಸುವ ಹೀಗೆ ಹಲವಾರು ಕಲೆಗಳನ್ನು ರೂಢಿಸಿಕೊಳ್ಳಬೇಕು ಎಂದರು.

ರಂಗಾಯಣದ ನಿರ್ದೇಶಕ ರಮೇಶ ಪರವಿನಾಯ್ಕರ ಮಾತನಾಡಿ, ಧಾರವಾಡ ರಂಗಾಯಣ ಮಕ್ಕಳಿಗಾಗಿ ವಿಭಿನ್ನವಾಗಿ ಹಳ್ಳಿಯ ಸೊಗಡಿನ ಕುರಿತು ತಿಳಿಸುವ ಯೋಜನೆ ರೂಪಿಸಿದೆ. ಇದರಿಂದ ಮಕ್ಕಳಲ್ಲಿರುವ ಕಲೆ ಗುರುತಿಸಲು ಸಹಕಾರಿಯಾಗುತ್ತದೆ. ಮಕ್ಕಳು ಶಿಬಿರದ ನಿರ್ದೇಶಕರು ಹೇಳಿಕೊಡುವ ಎಲ್ಲ ಚಟುವಟಿಕೆಗಳನ್ನು ಅತ್ಯಂತ ಶಿಸ್ತಿನಿಂದ ಕಲಿಯಬೇಕು. ಶಿಬಿರದಲ್ಲಿ ಕಲಿಯುವ ಚಟುವಟಿಕೆಗಳನ್ನು ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದರು.

ಶಿಬಿರದ ಸಂಯೋಜಕ ಸಿಕಂದರ ದಂಡಿನ, ನಾಟಕ ನಿರ್ದೇಶಕರು, ರಂಗಾಯಣ ಕಲಾವಿದರು ಇನ್ನಿತರರಿದ್ದರು.

ಟಾಪ್ ನ್ಯೂಸ್

ಐಪಿಎಲ್‌ 2022: ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಐಪಿಎಲ್‌ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

ಸೌಹಾರ್ದದಿಂದ ಮಂದಿರ ಬಿಟ್ಟುಕೊಡಲಿ : ಪೇಜಾವರ ಶ್ರೀ

ರಾಷ್ಟ್ರೀಯ ಡೆಂಗ್ಯೂ ದಿನ: ಕೀಟಜನ್ಯ ರೋಗ ಜಾಗೃತಿ

ರಾಷ್ಟ್ರೀಯ ಡೆಂಗ್ಯೂ ದಿನ: ಕೀಟಜನ್ಯ ರೋಗ ಜಾಗೃತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳೇಹುಬ್ಬಳ್ಳಿ ಗಲಭೆ ಪ್ರಕರಣ : 4 ವಿದ್ಯಾರ್ಥಿಗಳು ಸೇರಿ 7 ಮಂದಿಗೆ ಷರತ್ತು ಬದ್ದ ಜಾಮೀನು

ಹಳೇಹುಬ್ಬಳ್ಳಿ ಗಲಭೆ ಪ್ರಕರಣ : 4 ವಿದ್ಯಾರ್ಥಿಗಳು ಸೇರಿ 7 ಮಂದಿಗೆ ಷರತ್ತು ಬದ್ದ ಜಾಮೀನು

6

ಮಕ್ಕಳನ್ನು ಬರಮಾಡಿಕೊಳ್ಳಲು ಶಾಲೆಗಳು ಅಣಿ

5

ಜನಪರ ಚರ್ಚೆಗಳಿಂದ ಕಲಾಪ ದೂರ

4

ಜೀವನಶೈಲಿ ಸರಿದಾರಿಗೆ ತರುವ ಕೆಲಸವಾಗಲಿ

3

ಪಾಲಿಕೆಗೆ ಕಳಚಿತು ಜಾಹೀರಾತು ಬಾಕಿ ಉರುಳು

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

ಐಪಿಎಲ್‌ 2022: ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಐಪಿಎಲ್‌ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 17 ರನ್‌ ಗೆಲುವು

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ: ಗುಣಮಟ್ಟ ಶಿಕ್ಷಣಕ್ಕೆ ಕಲಿಕಾ ಚೇತರಿಕೆ: ಸಿಎಂ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಮಳಲಿ ದರ್ಗಾದಲ್ಲಿ ದೇಗುಲ ಕುರುಹು : ಅಷ್ಟಮಂಗಲ ಪ್ರಶ್ನೆಗೆ ವಿಎಚ್‌ಪಿ ನಿರ್ಧಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ : ಸಚಿವ ಅಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.