ಶೌರ್ಯ ಪದಕ ವಿಜೇತ ಸೈನಿಕರಿಗೆ ಸನ್ಮಾನ


Team Udayavani, Apr 16, 2018, 5:15 PM IST

16-April-26.jpg

ಧಾರವಾಡ: ಸಶ್ರೀ ಕುಮಾಂವು ಪ್ರತಿಷ್ಠಾನ ಮತ್ತು ಉತ್ತರ ಕರ್ನಾಟಕ ಸೈನಿಕರ ಕಲ್ಯಾಣ ಸಮಿತಿ ಸಹಯೋಗದಲ್ಲಿ ಕವಿಸಂನಲ್ಲಿ ರವಿವಾರ ಉತ್ತರ ಕರ್ನಾಟಕದ ಶೌರ್ಯ ಪದಕ ವಿಜೇತ ಸೈನಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಜರುಗಿತು.

ಶೌರ್ಯ ಪ್ರಶಸ್ತಿ ಪಡೆದ ವೀರಯೋಧರು ಹಾಗೂ ಮರಣ ಹೊಂದಿದ ಸೈನಿಕರ ಕುಟುಂಬಸ್ಥರನ್ನು ಸನ್ಮಾನಿಸುವುದರ ಜೊತೆಗೆ ಅವರ ತ್ಯಾಗ, ಬಲಿದಾನ, ಶೌರ್ಯ ಮೆರೆದ ಘಟನೆಗಳನ್ನು ಮೆಲುಕು ಹಾಕಲಾಯಿತು. ಗೌರವ ಸ್ವೀಕರಿಸಿದ ಸೈನಿಕರು ಯುದ್ಧದ ಸಮಯದ ಘಟನಾವಳಿಗಳನ್ನು ಸ್ಮರಿಸಿದರು.

ಮಂಗಳೂರು ವಿವಿ ವಿಶ್ರಾಂತ ಕುಲಪತಿ ಡಾ| ಎಂ.ಐ. ಸವದತ್ತಿ ಮಾತನಾಡಿ, ನಾವಿಂದು ಜಾತಿ, ಭಾಷೆಗೆ ಬಡಿದಾಡುತ್ತಿದ್ದೇವೆ. ಸೈನಿಕರು ಮಾತ್ರ ನಿಜವಾಗಲೂ ದೇಶಕ್ಕಾಗಿ ಬಡಿದಾಡುತ್ತಿದ್ದಾರೆ. ಅವರ ದೇಶಭಕ್ತಿ ಅಪಾರ. ಅವರ ಕಾರ್ಯ ಸದಾ ಸ್ಮರಣೀಯ. ಸೈನಿಕರನ್ನು ಗೌರವಿಸುವ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ನ್ಯಾಯಾಂಗ, ಶಾಸಕಾಂಗ ಮತ್ತು ಕಾರ್ಯಾಂಗದ ಉತ್ತಮ ಕಾರ್ಯಗಳಿಂದ ದೇಶದ ಉನ್ನತಿ ಆಗಲಿದೆ. ಆದರೆ ಈ ಸ್ಥರಗಳಲ್ಲಿ ಕೇವಲ ಶೇ 5-10ರಷ್ಟು ಮಾತ್ರ ಕಾರ್ಯ ನಿರ್ವಹಣೆಯಾಗುತ್ತಿದೆ. ಸೇನೆಯಿಂದ ಮಾತ್ರ ಸಂಪೂರ್ಣ ಪ್ರಮಾಣದ ಕಾರ್ಯ ನಡೆಯುತ್ತಿದೆ. ಶೌರ್ಯ ಪ್ರಶಸ್ತಿ ಪಡೆದ ಸೈನಿಕರನ್ನು ಹಾಗೂ ಅವರ ಕುಟುಂಬಸ್ಥರನ್ನು ಜನರಿಗೆ ಪರಿಚಯ ಮಾಡಿಕೊಟ್ಟಿರುವ ಕೆಲಸ ಶ್ಲಾಘನೀಯ ಎಂದರು.

ಸಶ್ರೀ ಕುಮಾಂವು ಪ್ರತಿಷ್ಠಾನದ ಕಾರ್ಯ ನಿರ್ವಾಹಕ ಲೆ.ಜನರಲ್ ಎಸ್‌.ಸಿ. ಸರದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ಉತ್ತರ ಕರ್ನಾಟಕ ಸೈನಿಕ ಕಲ್ಯಾಣ ಸಮಿತಿ ಅಧ್ಯಕ್ಷ ಚಂದ್ರಶೇಖರ ಅಮ್ಮಿನಗಡ, ಕೃಷ್ಣ ಜೋಶಿ, ಅರವಿಂದ ಶಿಗ್ಗಾಂವ, ಕರ್ನಲ್‌ ಮೋಹನ ಮಠ, ಬ್ರಿಗೇಡಿಯರ್‌ ಎಸ್‌.ಬಿ. ಭಾಗವತ್‌ ಮೊದಲಾದವರಿದ್ದರು. ಸಿ.ಎಸ್‌. ಹವಾಲ್ದಾರ್‌ ಸ್ವಾಗತಿಸಿದರು.

ಬೆಳಗಾವಿಯಿಂದ 28, ಧಾರವಾಡ, ಕಾರವಾರ, ಬಾಗಲಕೋಟೆಯಿಂದ ತಲಾ 3 ಮತ್ತು ಗದಗ, ಕೊಪ್ಪಳ, ಬಳ್ಳಾರಿ, ಬೀದರ, ಕಲಬುರ್ಗಿ, ವಿಜಯಪುರದಿಂದ ತಲಾ ಒಬ್ಬ ಶೌರ್ಯ ಪದಕ ವಿಜೇತರು ಸೇರಿ ಒಟ್ಟು 38 ಜನರು ಪಾಲ್ಗೊಂಡಿದ್ದರು. ನಂತರ ಡಿಸಿ ಕಚೇರಿ ಬಳಿ ಸ್ಥಾಪಿಸಿರುವ ಕಾರ್ಗಿಲ್‌ ಸ್ತೂಪಕ್ಕೆ ತೆರಳಿ ನಮನ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

15-subrahmanya

ರಾಜ್ಯ ಸರಕಾರ ಜನಹಿತ ಮರೆತಿದೆ- ಕುಕ್ಕೆಯಲ್ಲಿ ಮಾಜಿ ಸಿಎಂ ಬಿ.ಎಸ್.ವೈ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

Mudhol: ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ… ತಪ್ಪಿದ ಅನಾಹುತ

14-uv-fusion

UV Fusion: ನೆನಪುಗಳು, ಭಾವನೆಗಳು ಸಮತೋಲನ ಆಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

Hubli; ಆಕಾಶ ಮಠಪತಿ ಪ್ರಕರಣದಲ್ಲಿ 8 ಮಂದಿ ಬಂಧನ

5-Kundgola

Kundgola: ಬೆನಕನಹಳ್ಳಿ ಜಲ ಜೀವನಾಡಿಗೆ ಅಸ್ವಚ್ಛತೆ ಬೇಡಿ

crime (2)

Hubballi; ಆಟೋರಿಕ್ಷಾ ಚಾಲಕರ, ಮಾಲಕರ ಸಂಘದ ಅಧ್ಯಕ್ಷ ನ ಪುತ್ರನ ಹತ್ಯೆ

Hubli; Protest demanding implementation of Dr. Sarojini Mahishi’s revised report

Hubli; ಡಾ.ಸರೋಜಿನಿ‌ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Janardhana Reddy: ಅಯೋಗ್ಯ ಜನಾರ್ದನ ರೆಡ್ಡಿ ಕ್ಷಮೆಯಾಚಿಸಲಿ; ಸಲೀಂ ಅಹ್ಮದ್‌

Janardhana Reddy: ಅಯೋಗ್ಯ ಜನಾರ್ದನ ರೆಡ್ಡಿ ಕ್ಷಮೆಯಾಚಿಸಲಿ; ಸಲೀಂ ಅಹ್ಮದ್‌

MUST WATCH

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

ಹೊಸ ಸೇರ್ಪಡೆ

18-koratagere

Koratagere ಬಂದ್‌ಗೆ ಕರೆ ನೀಡಿದ ನೀರಾವರಿ ಸಂಘಟನೆ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

17-uv-fusion

UV Fusion: ಐ (i) ಅಂದ್ರೆ?

16-uv-fusion

Life: ಬದುಕು ಕಟ್ಟಿಕೊಳ್ಳುವುದೇ ಸಾಧನೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.