ನ. 1ರಿಂದ ಚಿಗರಿ ಓಟಕ್ಕೆ ಅಗತ್ಯ ವ್ಯವಸ್ಥೆ: ಶೆಟ್ಟರ


Team Udayavani, Sep 7, 2018, 5:19 PM IST

7-september-23.jpg

ಹುಬ್ಬಳ್ಳಿ: ಬಿಆರ್‌ಟಿಎಸ್‌ ಕಾಮಗಾರಿ ವೇಗ ಪಡೆದುಕೊಂಡಿದೆ. ವಿಭಾಗೀಯ ಕಾರ್ಯಾಗಾರ, ಘಟಕಗಳ ಕಾಮಗಾರಿ ಶೇ. 99 ಪೂರ್ಣಗೊಂಡಿದೆ. ರಸ್ತೆ ಕಾಮಗಾರಿ 10 ದಿನದೊಳಗೆ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ನ. 1ರಂದು ಬಸ್‌ ಸೇವೆ ಆರಂಭಿಸುವ ನಿಟ್ಟಿನಲ್ಲಿ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.

ಹು-ಧಾ ಬಿಆರ್‌ಟಿಎಸ್‌ ಯೋಜನೆಯ ವಿವಿಧ ಕಾಮಗಾರಿ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಆರ್‌ಟಿಎಸ್‌ ಸೇವೆ ಆರಂಭವಾಗುವುದರಿಂದ ಹೊಸೂರು-ಉಣಕಲ್ಲ ಸಂಪರ್ಕ ರಸ್ತೆ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಹೀಗಾಗಿ ಬಿಆರ್‌ಟಿಎಸ್‌ ಹಾಗೂ ಸಿಆರ್‌ಎಫ್ ನಿಧಿಯಲ್ಲಿ ಚತುಷ್ಪಥವಾಗಿ ಅಭಿವೃದ್ಧಿಗೊಳ್ಳಲಿದೆ. 

ಮುಂದೆ ಭೂ ಸ್ವಾಧೀನ ಮಾಡಿಕೊಳ್ಳಬೇಕಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಅಲ್ಲಿನ ನಿವಾಸಿಗಳನ್ನು ತೆರವುಗೊಳಿಸುವ ಪ್ರಶ್ನೆ ಇಲ್ಲ ಎಂದು ತಿಳಿಸಿದರು. ವಿವಿಧೆಡೆ ಭೇಟಿ-ಮಾಹಿತಿ ಸಂಗ್ರಹ: ಗೋಕುಲ ರಸ್ತೆಯಲ್ಲಿ ವಿಭಾಗೀಯ ಕಾರ್ಯಾಗಾರ, ಬಸ್‌ ಘಟಕ, ಹೊಸೂರು ವೃತ್ತದಲ್ಲಿ ರಸ್ತೆ, ಬಸ್‌ ನಿಲ್ದಾಣ, ಉಣಕಲ್ಲನ ಫ್ಲೈಓವರ್‌ ಕೆಳ ಭಾಗದ ರಸ್ತೆ ಸೇರಿದಂತೆ ಬಿಆರ್‌ಟಿಎಸ್‌ ರಸ್ತೆ ನಿರ್ಮಾಣ ಕಾಮಗಾರಿ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಣಕಲ್ಲ ಹಾಗೂ ಪ್ರಸಿಡೆಂಟ್‌ ಹೋಟೆಲ್‌ ಮುಂಭಾಗದಲ್ಲಿರುವ ಬಿಆರ್‌ಟಿಎಸ್‌ ರಸ್ತೆಯನ್ನು 10 ದಿನದೊಳಗೆ ಪೂರ್ಣಗೊಳಿಸುವುದಾಗಿ ಬಿಆರ್‌ ಟಿಎಸ್‌ ಅಧಿಕಾರಿಗಳು ತಿಳಿಸಿದರು.

ಹೊಸೂರು ವೃತ್ತದ ಅಭಿವೃದ್ಧಿ ಕಾರ್ಯ ಇನ್ನೂ ಬಾಕಿ ಉಳಿದಿದ್ದು, ತರಾತುರಿಯಾಗಿ ಬಸ್‌ ಆರಂಭ ಮಾಡುವುದರಿಂದ ಇರುವ ರಸ್ತೆಯಲ್ಲೇ ಬಸ್‌ ಓಡಿಸುವಂತಾಗಲಿದೆ. ಬಸ್‌ ಸೇವೆ ಆರಂಭವಾಗುತ್ತಿದ್ದಂತೆ ಉಳಿದಿರುವ ಕಾಮಗಾರಿ ಕೈಗೊಳ್ಳಲು ಸಮಸ್ಯೆಯಾಗುತ್ತದೆ. ಆತುರದ ನಿರ್ಧಾರದಿಂದ ಸಂಚಾರ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಲಿದೆ ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಯಿತು. ಇನ್ನೂ ವೃತ್ತಕ್ಕೆ ಹೊಂದಿಕೊಂಡು ನಿರ್ಮಾಣಗೊಂಡಿರುವ ಬಿಆರ್‌ ಟಿಎಸ್‌ ನಿಲ್ದಾಣದಿಂದ ಎರಡು ದಿಕ್ಕಿನಲ್ಲಿರುವ ರಸ್ತೆಗಳ ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ. ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯರು ಮನವಿ ಮಾಡಿದರು. ಈ ಸಮಸ್ಯೆ ಪರಿಶೀಲಿಸುವಂತೆ ಮಾಜಿ ಸಿಎಂ ಶೆಟ್ಟರ ಅಧಿಕಾರಿಗಳಿಗೆ ಸೂಚಿಸಿದರು. ಪಾಲಿಕೆ ಸದಸ್ಯರಿಂದ ಮನವಿ: ಉಣಕಲ್ಲನಲ್ಲಿ ಪ್ರತಿ ಶನಿವಾರ ಸಂತೆ ಆಗುವುದರಿಂದ ಸಾಕಷ್ಟು ಸಂಚಾರ ದಟ್ಟಣೆ ಇರುತ್ತಿದೆ. ಹೀಗಾಗಿ ಉಣಕಲ್ಲ ಭಾಗದಿಂದ ಮುಖ್ಯ ರಸ್ತೆಗೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಮಾಡುವಂತೆ ಸ್ಥಳೀಯ ಪಾಲಿಕೆ ಸದಸ್ಯ ಉಮೇಶ ಕೌಜಗೇರಿ ಮನವಿ ಮಾಡಿದರು. ಪೂರ್ಣ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಸಾಧ್ಯವಿಲ್ಲ ಎಂದು ಬಿಆರ್‌ ಟಿಎಸ್‌ ಅಧಿಕಾರಿಗಳು ತಳ್ಳಿಹಾಕಿದರು. ಹೇಗಾದರೂ ಮಾಡಿ ಒಂದಿಷ್ಟು ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಶೆಟ್ಟರ ಸೂಚಿಸಿದರು.

ಬಿಆರ್‌ಟಿಎಸ್‌ ಡಿಜಿಎಂ ಬಸವರಾಜ ಕೇರಿ, ಪಾಲಿಕೆ ಸದಸ್ಯರಾದ ಮಹೇಶ ಬುರ್ಲಿ, ಉಮೇಶ ಕೌಜಗೇರಿ, ಮುಖಂಡರಾದ ನಾಗೇಶ ಕಲಬುರ್ಗಿ, ತಿಪ್ಪಣ್ಣ ಮಜ್ಜಗಿ ಹಾಗೂ ಬಿಆರ್‌ಟಿಎಸ್‌ ಅಧಿಕಾರಿಗಳು ಇದ್ದರು. 

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.