ನಕಲಿ ಪೊಲೀಸ್‌ ಸೇರಿ ಐವರ ಸೆರೆ

Team Udayavani, May 7, 2021, 10:10 PM IST

7-9

ಧಾರವಾಡ: ಸಶಸ್ತ್ರ ಮೀಸಲು ಪೊಲೀಸ್‌ ಕಾನ್‌ಸ್ಟೆàಬಲ್‌ಗ‌ಳ ನೇಮಕಾತಿಯ ದೈಹಿಕ ಪರೀಕ್ಷೆಯಲ್ಲಿ ಮೂಲ ಅಭ್ಯರ್ಥಿ ಬದಲಾಗಿ ನಕಲಿ ಅಭ್ಯರ್ಥಿ ಹಾಜರಾಗಿ ನೌಕರಿ ಗಿಟ್ಟಿಸಿಕೊಂಡ ಪ್ರಕರಣ ಬೆಳಕಿಗೆ ಬಂದಿದ್ದು, ಈ ಕುರಿತಂತೆ ಐದು ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಪಿ.ಕೃಷ್ಣಕಾಂತ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದ ಶಿವಪ್ಪ ಪಡೆಪ್ಪನವರ, ಮಂಜುನಾಥ ಕರಿಗಾರ, ಗೋಕಾಕ ತಾಲೂಕಿನ ನಲ್ಲನಟ್ಟಿ ಗ್ರಾಮದ ಬಸವರಾಜ ಮೇಲ್ಮಟ್ಟಿ, ಬಸವರಾಜ ದೇವರಮನಿ ಹಾಗೂ ಆನಂದ ಕೋಳೂರ ಎಂಬುವರನ್ನು ಬಂ ಧಿಸಲಾಗಿದ್ದು, ಧಾರವಾಡ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.

ಸಶಸ್ತ್ರ ಮೀಸಲು ಪೊಲೀಸ್‌ ಕಾನ್‌ ಸ್ಟೇಬಲ್‌ ಹುದ್ದೆಗಳ ಭರ್ತಿಗೆ ಅ ಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಧಾರವಾಡದ ಆರ್‌.ಎನ್‌. ಶೆಟ್ಟಿ ಕ್ರೀಡಾಂಗಣದಲ್ಲಿ 2020ರ ಡಿ.19ರಂದು ದೇಹದಾಡ್ಯìತೆ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಮೂಲ ಅಭ್ಯರ್ಥಿ ಆರೋಪಿ ಶಿವಪ್ಪ ಪಡೆಪ್ಪನವರ ತನ್ನ ಬದಲಿಗೆ ನಕಲಿ ಅಭ್ಯರ್ಥಿ ಆನಂದ ಕೋಳೂರ ಎಂಬುವರನ್ನು ಹಾಜರುಪಡಿಸಿದ್ದ. ಅದರಲ್ಲಿ ಆತ ಉತ್ತೀರ್ಣನಾಗಿದ್ದ. ವೈದ್ಯಕೀಯ ಪರೀಕ್ಷೆ ನಂತರ ಶಿವಪ್ಪ 2021ರ ಮಾ.7ರಂದು ನೇಮಕಾತಿ ಆದೇಶ ಪಡೆದು ಏ.3ರಂದು ಕರ್ತವ್ಯಕ್ಕೆ ಹಾಜರಾಗಿದ್ದ ಎಂದು ತಿಳಿಸಿದರು.

ಬೆರಳು ಮುದ್ರೆಯಿಂದ ಸಿಕ್ಕಿ ಬಿದ್ದರು: ನೇಮಕಗೊಂಡ ಕಾನ್‌ಸ್ಟೆಬಲ್‌ಗ‌ಳ ಬೆರಳು ಮುದ್ರೆಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಧಾರವಾಡದ ಬೆರಳು ಮುದ್ರೆ ಘಟಕದ ಅ ಧಿಕಾರಿಗಳಿಗೆ ಸೂಚಿಸಲಾಗಿತ್ತು. ಈ ವೇಳೆ ಶಿವಪ್ಪ ಪಡೆಪ್ಪನವರ ಎಂಬ ಅಭ್ಯರ್ಥಿಯ ವೈದ್ಯಕೀಯ ಪರೀಕ್ಷೆಯ ಕಾಲಕ್ಕೆ ಹಾಗೂ ದೇಹದಾಡ್ಯತೆ ಪರೀಕ್ಷೆಯ ಕಾಲಕ್ಕೆ ಪಡೆದ ಎಡಗೈ ಹೆಬ್ಬರಳಿನ ಮುದ್ರೆಯೊಂದಿಗೆ ಹೊಂದಾಣಿಕೆಯಾಗಿಲ್ಲ ಎಂದು ತಜ್ಞರು ವರದಿ ನೀಡಿದ್ದು, ಇದರಿಂದ ಅನುಮಾನಗೊಂಡು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಪ್ರಕರಣ ಬಯಲಿಗೆ ಬಂದಿದೆ ಎಂದರು.

ಮೂಲ ಅಭ್ಯರ್ಥಿ ಶಿವಪ್ಪ ಪಡೆಪ್ಪನವರ ಓದಿನಲ್ಲಿ ಉತ್ತಮನಾಗಿದ್ದರೆ, ದೇಹದಾಡ್ಯìತೆ ಪರೀಕ್ಷೆ ಪಾಸ್‌ ಮಾಡಲು ಅಸಮರ್ಥನಾಗಿದ್ದ. ಹೀಗಾಗಿ ತನ್ನ ಸ್ನೇಹಿತ ಮಂಜುನಾಥ ಕರಿಗಾರ ಮೂಲಕ ಗೋಕಾಕನ ಬಸವರಾಜ ಮೇಲ್ಮಟ್ಟಿ ಹಾಗೂ ಬಸವರಾಜ ದೇವರಮನಿ ಎಂಬುವರನ್ನು ಸಂಪರ್ಕಿಸಿ, ಆನಂದ ಕೋಳೂರ ಎಂಬಾತನನ್ನು ದೇಹದಾಡ್ಯತೆಯ ಪರೀಕ್ಷೆಗೆ ಒಪ್ಪಿದ್ದರು.

ಅದಕ್ಕೆ ಶಿವಪ್ಪ 2.30 ಲಕ್ಷ ರೂ. ನೀಡಿದ್ದ. ಈ ಹಣವನ್ನು ಆರೋಪಿಗಳು ಹಂಚಿಕೊಂಡಿರುವುದು ಪ್ರಕರಣದ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದಲ್ಲದೇ ನಕಲಿ ಅಭ್ಯರ್ಥಿ ಆನಂದ ಕೋಳೂರು ಎಂಬಾತನ ವಿರುದ್ಧ ಈ ಹಿಂದೆ ಇಂತಹದೇ ಪ್ರಕರಣದಲ್ಲಿ ಹಾಸನದ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.