ಬಿಆರ್‌ಟಿಎಸ್‌ ದಾರಿಗಿಳಿದರೆ ಮನೆಗೇ ನೋಟಿಸ್‌

ಅನ್ಯ ವಾಹನಗಳ ಸಂಚಾರ ತಡೆಗೆ ದಂಡ ಪ್ರಯೋಗ ; ನೋಂದಣಿ ಸಂಖ್ಯೆ ಗುರುತಿಸುವ ಕ್ಯಾಮೆರಾ ಅಳವಡಿಕೆ

Team Udayavani, Jul 26, 2022, 3:19 PM IST

10

ಹುಬ್ಬಳ್ಳಿ: ಬಿಆರ್‌ಟಿಎಸ್‌ ಪ್ರತ್ಯೇಕ ಮಾರ್ಗದಲ್ಲಿ ಅನಗತ್ಯ ಸಂಚಾರಕ್ಕೆ ಕಡಿವಾಣ ಹೇರಲು ಸ್ವಯಂ ಚಾಲಿತ ವಾಹನ ನೋಂದಣಿ ಸಂಖ್ಯೆ ಗುರುತಿಸುವ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪೊಲೀಸ್‌ ಇಲಾಖೆಯ ಸಂಚಾರ ನಿರ್ವಹಣಾ ಕೇಂದ್ರದ ಮೂಲಕ ವಾಹನ ಮಾಲೀಕರ ಮನೆಗೆ ದಂಡದ ನೋಟಿಸ್‌ ರವಾನಿಸಿ ದಂಡ ಪ್ರಯೋಗ ಮಾಡಲಾಗುತ್ತಿದೆ.

ಹುಬ್ಬಳ್ಳಿ-ಧಾರವಾಡ ನಡುವೆ ತ್ವರಿತ ಸಾರಿಗೆ ನೀಡಬೇಕು ಎನ್ನುವ ಹಿನ್ನೆಲೆಯಲ್ಲಿ ಹೊಸೂರಿನಿಂದ ಧಾರವಾಡ ಜ್ಯುಬ್ಲಿ ವೃತ್ತದವರೆಗೆ ಪ್ರತ್ಯೇಕ ಕಾರಿಡಾರ್‌ ನಿರ್ಮಿಸಲಾಗಿದೆ. ಚಿಗರಿ ಬಸ್‌ ಹೊರತುಪಡಿಸಿ ತುರ್ತು ಸೇವೆಯ ವಾಹನಗಳಿಗೆ ಮಾತ್ರ ಕಾರಿಡಾರ್‌ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಈ ಕುರಿತು ಅಧಿಕೃತವಾಗಿ ಅಧಿಸೂಚನೆ ಕೂಡ ಹೊರಡಿಸಲಾಗಿದ್ದು, ಒಮ್ಮೆ ನಿಯಮ ಉಲ್ಲಂಘಿಸಿದರೆ 500 ದಂಡ ಕಟ್ಟಬೇಕಾಗುತ್ತದೆ. ಇನ್ನೂ ಕಾರಿಡಾರ್‌ನಲ್ಲಿ ಏನಾದರೂ ಅಪಘಾತಗಳಾದರೆ ಅದಕ್ಕೆ ಖಾಸಗಿ ವಾಹನ ಸವಾರರೇ ನೇರ ಹೊಣೆಯಾಗಿದೆ. ನಿಯಮ ಉಲ್ಲಂಘನೆ ತಡೆ ಹಾಗೂ ಪತ್ತೆಗಾಗಿ ಅತ್ಯಾಧುನಿಕ ಸ್ವಯಂಚಾಲಿತವಾಗಿ ವಾಹನಗಳ ನೋಂದಣಿ ಸಂಖ್ಯೆ ಗುರುತಿಸುವ ವಿಶೇಷ ಕ್ಯಾಮರಾಗಳನ್ನು ಅಳವಡಿಸಿ ಕಾರಿಡಾರ್‌ ಪ್ರವೇಶಿಸಿದ ವಾಹನಗಳ ಪತ್ತೆ ಹಚ್ಚುವ ಕೆಲಸ ಮಾಡಲಾಗುತ್ತಿದೆ.

ಬೂಂ ಬ್ಯಾರಿಕೇಡ್‌ ಕಡಿವಾಣ: ಅನಗತ್ಯ ವಾಹನಗಳಿಗೆ ಪ್ರವೇಶಕ್ಕೆ ಕಡಿವಾಣ ಹೇರಲು ಸ್ಮಾರ್ಟ್‌ಸಿಟಿ ವತಿಯಿಂದ ಕಾರಿಡಾರ್‌ ಉದ್ದಕ್ಕೂ ಸ್ವಯಂ ಚಾಲಿತ ಬೂಂ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಚಿಗರಿ ಬಸ್‌ಗಳಿಗೆ ಟ್ಯಾಗ್‌ ಅಳವಡಿಸಲಾಗಿದೆ. ಇದರೊಂದಿಗೆ ತುರ್ತು ಸೇವೆಗಳಾದ 89 ಅಂಬ್ಯುಲೆನ್ಸ್‌, 8 ಅಗ್ನಿ ಶಾಮಕ ದಳ ವಾಹನಗಳಿಗೆ ಟ್ಯಾಗ್‌ ವಿತರಿಸಲಾಗಿದ್ದು, ತುರ್ತು ಸಂದರ್ಭದಲ್ಲಿ ಈ ಮಾರ್ಗವನ್ನು ಬಳಸುತ್ತಾರೆ. ಅಧಿಸೂಚನೆ ಜೊತೆಗೆ ಕಾರಿಡಾರ್‌ ಪ್ರವೇಶಿಸದಂತೆ ಅಲ್ಲಲ್ಲಿ ಭದ್ರತಾ ಸಿಬ್ಬಂದಿ ನೇಮಿಸಿದ್ದರೂ ಕಡಿವಾಣ ಬಿದ್ದಿರಲಿಲ್ಲ. ಹೀಗಾಗಿ ಲಾಭೂರಾಮ ಅವರು ಪೊಲೀಸ್‌ ಆಯುಕ್ತರಾಗಿ ಆಗಮಿಸಿದ ನಂತರ ಪರಿಣಾಮಕಾರಿ ಅನುಷ್ಠಾನಕ್ಕೆ ತಂದಿದ್ದಾರೆ.

1 ಕಿಮೀ ದೂರದ ಭಾವಚಿತ್ರ ಸೆರೆ!

ಕಾರಿಡಾರ್‌ ಉದ್ದಕ್ಕೂ ವಿವಿಧ ಮಾದರಿಯ ಕ್ಯಾಮರಾಗಳನ್ನು ಅಳವಡಿಸಲಾಗಿದೆ. 47 ಪಿಟಿಝೆಡ್‌ ಕ್ಯಾಮರಾ, 128 ಡೋಮ್‌ ಕ್ಯಾಮರಾ, ಅನಗತ್ಯ ವಾಹನಗಳ ಪತ್ತೆಗಾಗಿ ವಾಹನಗಳ ನೋಂದಣಿ ಸಂಖ್ಯೆ ಗುರುತಿಸುವ 20 ಎಎನ್‌ಪಿಆರ್‌ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇವು ಸುಮಾರು ಒಂದು ಕಿಮೀ ದೂರದ ವಾಹನಗಳ ನೋಂದಣಿ ಸಂಖ್ಯೆ-ವಾಹನ ಸವಾರರ ಭಾವಚಿತ್ರ ಸೆರೆಹಿಡಿಯುತ್ತವೆ. ಇದು ಕ್ಲಿಕ್ಕಿಸಿದ ಫೋಟೋ ನೇರವಾಗಿ ಬಿಆರ್‌ಟಿಎಸ್‌ ಕಂಟ್ರೋಲ್‌ ಕೊಠಡಿಗೆ ರವಾನೆಯಾಗುತ್ತದೆ. ಇಲ್ಲಿರುವ ಸಾಫ್ಟ್‌ವೇರ್‌ ನೋಂದಣಿ ಸಂಖ್ಯೆಯನ್ನು ಪ್ರತ್ಯೇಕಿಸುತ್ತದೆ. ಈ ಮಾಹಿತಿಗಳನ್ನು ಉಪನಗರ ಠಾಣೆ ಮೇಲಿರುವ ಪೊಲೀಸ್‌ ಇಲಾಖೆಯ ಸಂಚಾರ ನಿರ್ವಹಣಾ ಕೇಂದ್ರಕ್ಕೆ ಕಳುಹಿಸಲಾಗುತ್ತದೆ. ಈ ಫೋಟೋಗಳ ಆಧಾರದ ಮೇಲೆ ವಾಹನ ಮಾಲೀಕರ ವಿಳಾಸಕ್ಕೆ ದಂಡದ ನೋಟಿಸ್‌ ಕಳುಹಿಸಲಾಗುತ್ತಿದೆ.

ಕಾನೂನು ಪಾಲಕರಿಂದಲೇ ನಿಯಮ ಬ್ರೇಕ್‌

ಅಧಿಸೂಚನೆ ಪ್ರಕಾರ ಜಿಲ್ಲಾಧಿಕಾರಿ, ಮಹಾನಗರ ಪೊಲೀಸ್‌ ಆಯುಕ್ತರು ಮಾತ್ರ ಈ ಕಾರಿಡಾರ್‌ನಲ್ಲಿ ಸಂಚರಿಸಬಹುದು. ವಿಶೇಷ ಸಂದರ್ಭಗಳಲ್ಲಿ ಜಿಲ್ಲಾಧಿಕಾರಿ ಅನುಮತಿ ನೀಡುವರು. ವಿಪರ್ಯಾಸವೆಂದರೆ ಖಾಸಗಿ ವಾಹನಗಳಿಗಿಂತ ಹೆಚ್ಚಿನ ಸರಕಾರಿ ವಾಹನಗಳು, ಅದರಲ್ಲೂ ಪೊಲೀಸರ ವಾಹನಗಳು ಹೆಚ್ಚಿಗೆ ಓಡಾಡುತ್ತವೆ. ಕಾನೂನು ಪಾಲಕರೇ ಇಲ್ಲಿ ನಿಯಮ ಉಲ್ಲಂಘಿಸುತ್ತಿದ್ದು, ಅವರ ಮೇಲೆ ಕ್ರಮ ಕೈಗೊಳ್ಳುವವರಾರು ಎನ್ನುವ ಪ್ರಶ್ನೆ ಸಾರ್ವಜನಿಕರದ್ದಾಗಿದೆ. ಸ್ವಯಂ ಚಾಲಿತ ಬೂಂ ಬ್ಯಾರಿಕೇಡ್‌ ಇದ್ದರೂ ತಾಂತ್ರಿಕ ದೋಷವಿದ್ದಾಗ ಮಾನವ ಸಹಿತ ನಿರ್ವಹಣೆಗೆ ಅವಕಾಶ ಕಲ್ಪಿಸಿದ್ದರಿಂದ ಪಾಸ್‌ ಆಪರೇಟರ್‌ ಮೂಲಕ ಬ್ಯಾರಿಕೇಡ್‌ ತೆಗಿಸಿಕೊಂಡು ಸರಕಾರಿ ವಾಹನಗಳು ಓಡಾಡುತ್ತಿವೆ. ಅಧಿಸೂಚನೆ ಕಟ್ಟುನಿಟ್ಟಾಗಿ ಪಾಲನೆಯಾಗಬೇಕಾದರೆ ಮೊದಲು ಸರಕಾರಿ ವಾಹನಗಳಿಗೂ ಕಡಿವಾಣ ಹೇರಬೇಕು, ಅವರಿಗೂ ದಂಡ ವಿಧಿಸಬೇಕು ಎಂಬುದು ಜನರ ಅಭಿಪ್ರಾಯವಾಗಿದೆ.

ಮಾಸಿಕ ಸರಾಸರಿ 2,000 ವಾಹನ ಉಲ್ಲಂಘನೆ

ಬೂಂ ಬ್ಯಾರಿಕೇಡ್‌, ಭದ್ರತಾ ಸಿಬ್ಬಂದಿ, ನಿಯಮ ಉಲ್ಲಂಘನೆಗೆ ದಂಡ ವಿಧಿಸಲಾಗುತ್ತಿದ್ದರೂ ಭಂಡ ಧೈರ್ಯ ಎಂಬಂತೆ ಕಾರಿಡಾರ್‌ನಲ್ಲಿ ಅಡ್ಡಾದಿಡ್ಡಿ ಓಡಾಟವಿದೆ. ಆರಂಭಕ್ಕೆ ಹೋಲಿಸಿದರೆ ಇದೀಗ ಒಂದಿಷ್ಟು ಕಡಿಮೆಯಾಗಿದ್ದರೂ ತಿಂಗಳಿಗೆ ಸರಾಸರಿ 2000 ವಾಹನಗಳು ನಿಯಮ ಉಲ್ಲಂಘಿಸುತ್ತಿವೆ. ಇದಕ್ಕಾಗಿಯೇ ಪ್ರತ್ಯೇಕ ಸಂಚಾರ ಠಾಣೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದರೂ ಕಾರ್ಯರೂಪಕ್ಕೆ ಬಂದಿಲ್ಲ. ತಾತ್ಕಾಲಿಕವಾಗಿ ಗೃಹ ರಕ್ಷಕ ಸಿಬ್ಬಂದಿ ನಿಯೋಜಿಸಲಾಗಿತ್ತು. ಕೋವಿಡ್‌ ನಂತರದಲ್ಲಿ ಇದು ಕೂಡ ಕೈಬಿಟ್ಟಿದೆ.

ತ್ವರಿತ ಸಾರಿಗೆ ಸೇವೆಗಾಗಿ ಪ್ರತ್ಯೇಕ ಕಾರಿಡಾರ್‌ನಲ್ಲಿ ಅನಗತ್ಯ ವಾಹನಗಳ ಪ್ರವೇಶಕ್ಕೆ ನಿಷೇಧಿಸಲಾಗಿದ್ದು, ಬೂಂ ಬ್ಯಾರಿಕೇಡ್‌ ಅಳವಡಿಸುವ ಮೂಲಕ ಅನಗತ್ಯ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕಲಾಗಿದೆ. ಆದರೂ ಕೆಲವೊಂದು ಕಡೆ ನಿಯಮ ಉಲ್ಲಂಘನೆಯಾಗುತ್ತಿದೆ. ಇವುಗಳನ್ನು ಪತ್ತೆ ಹಚ್ಚಲು ಎಎನ್‌ಪಿಆರ್‌ ಕ್ಯಾಮರಾಗಳು ಕಾರ್ಯನಿವಹಿಸುತ್ತಿವೆ. ಸಾರ್ವಜನಿಕರು ತಮ್ಮ ಹಿತದೃಷ್ಟಿಯಿಂದ ಪ್ರತ್ಯೇಕ ಕಾರಿಡಾರ್‌ ಪ್ರವೇಶಿಸಬಾರದು. –ಎಸ್‌.ಭರತ, ವ್ಯವಸ್ಥಾಪಕ ನಿರ್ದೇಶಕ, ಬಿಆರ್‌ಟಿಎಸ್‌

ಇತರೆ ಸಂಚಾರ ನಿಯಮ ಉಲ್ಲಂಘನೆಯ ದಂಡ ಸಂಗ್ರಹಿಸುವಂತೆ ಬಿಆರ್‌ಟಿಎಸ್‌ ಕಾರಿಡಾರ್‌ ನಿಯಮ ಉಲ್ಲಂಘಿಸುವರಿಂದಲೂ ದಂಡ ಸಂಗ್ರಹಿಸಲಾಗುತ್ತದೆ. ಕರ್ತವ್ಯನಿರತ ಅಧಿಕಾರಿಗಳು ವಾಹನಗಳ ತಡೆದು ಹಿಂದೆ ದಾಖಲಾದ ಪ್ರಕರಣಗಳ ಬಗ್ಗೆ ಪರಿಶೀಲಿಸಿ ನಿಯಮ ಉಲ್ಲಂಘಿಸಿದ್ದು ಕಂಡುಬಂದರೆ ದಂಡ ವಸೂಲಿ ಮಾಡಲಾಗುತ್ತದೆ. -ಗೋಪಾಲ ಬ್ಯಾಕೋಡ್‌, ಡಿಸಿಪಿ

-ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Kichha Sudeep met dk shivakumar

ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?

air india

ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ; ತುರ್ತು ಲ್ಯಾಂಡಿಂಗ್

NIA

ಮುಂಬಯಿಯಲ್ಲಿ ತಾಲಿಬಾನ್ ದಾಳಿ: ಎನ್ ಐಎಗೆ ಬೆದರಿಕೆ ಮೇಲ್

joginder sharma

ಕ್ರಿಕೆಟ್ ಗೆ ವಿದಾಯ ಘೋಷಿಸಿದ 2007ರ ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ

Supreme Court

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ

1-sadsdasd

ಅದಾನಿ ಗ್ರೂಪ್ ವಿಚಾರದಲ್ಲಿ ಸಂಸತ್ ಉಭಯ ಸದನದಲ್ಲಿ ಕೋಲಾಹಲ

1-saddasd

ರಾಜ್ಯಸಭೆಯ ಕೊನೆಯ ಸಾಲಿಗೆ ಶಿಫ್ಟ್ ಆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್

crime-news

ಕುಡಿದ ಮತ್ತಿನಲ್ಲಿ ಹೆಂಡತಿ- ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ; ಗಂಡನೂ ನೇಣಿಗೆ ಶರಣು!

ಮತದಾರರೇ ಭ್ರಷ್ಟರಾಗಿದ್ದಾರೆ ನಾನು ಚುನಾವಣೆಗೆ ನಿಲ್ಲಲಾರೆ: ಹಳ್ಳಿ ಹಕ್ಕಿ ಹೊಸ ರಾಗ

ಮತದಾರರೇ ಭ್ರಷ್ಟರಾಗಿದ್ದಾರೆ ನಾನು ಚುನಾವಣೆಗೆ ನಿಲ್ಲಲಾರೆ: ಹಳ್ಳಿ ಹಕ್ಕಿ ಹೊಸ ರಾಗ

cmರೈತ ಪರ ಬಜೆಟ್‌ ಮಂಡನೆ: ಸಿಎಂ ಬೊಮ್ಮಾಯಿ

ರೈತ ಪರ ಬಜೆಟ್‌ ಮಂಡನೆ: ಸಿಎಂ ಬೊಮ್ಮಾಯಿ

ಹೋರಾಟದ ಬಳಿಕವೇ ಮಹದಾಯಿ ಹಾಗೂ ಕಳಸಾ ಬಂಡೂರಿಗೆ ಡಿಪಿಆರ್ ದೊರೆಕಿದೆ: ಸಿಎಂ ಬೊಮ್ಮಾಯಿ

ಹೋರಾಟದ ಬಳಿಕವೇ ಮಹದಾಯಿ ಹಾಗೂ ಕಳಸಾ ಬಂಡೂರಿಗೆ ಡಿಪಿಆರ್ ದೊರೆಕಿದೆ: ಸಿಎಂ ಬೊಮ್ಮಾಯಿ

MUST WATCH

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

ಹೊಸ ಸೇರ್ಪಡೆ

Kichha Sudeep met dk shivakumar

ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?

air india

ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ; ತುರ್ತು ಲ್ಯಾಂಡಿಂಗ್

ಬೈಂದೂರು:ಒತ್ತಿನೆಣೆ ಅಪಾಯಕಾರಿ ತಿರುವಿಗೆ ಮುಕ್ತಿ ಎಂದು?

ಬೈಂದೂರು:ಒತ್ತಿನೆಣೆ ಅಪಾಯಕಾರಿ ತಿರುವಿಗೆ ಮುಕ್ತಿ ಎಂದು?

NIA

ಮುಂಬಯಿಯಲ್ಲಿ ತಾಲಿಬಾನ್ ದಾಳಿ: ಎನ್ ಐಎಗೆ ಬೆದರಿಕೆ ಮೇಲ್

ಬೆಳ್ತಂಗಡಿ; ಜಿಲ್ಲೆಯಲ್ಲಿಯೇ ಪ್ರಥಮ ಮಲಿನ ನೀರು ಶುದ್ಧೀಕರಣ ಘಟಕ

ಬೆಳ್ತಂಗಡಿ; ಜಿಲ್ಲೆಯಲ್ಲಿಯೇ ಪ್ರಥಮ ಮಲಿನ ನೀರು ಶುದ್ಧೀಕರಣ ಘಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.