ಉಮಚಗಿ ಗ್ರಾಪಂ ವ್ಯಾಪ್ತಿಯಲ್ಲಿ ಖಾತ್ರಿ ಕಾಮಗಾರಿ

4.60 ಲಕ್ಷ ಮಾನವ ದಿನಗಳ ಗುರಿ ನಿಗದಿ: ತಾಪಂ ಸಹಾಯಕ ನಿರ್ದೇಶಕ ಗಂಗಾಧರ

Team Udayavani, May 8, 2020, 3:15 PM IST

08-May-16

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ತಾಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳನ್ನು ಆರಂಭಿಸಲಾಗಿದ್ದು, ಉಮಚಗಿ ಗ್ರಾಪಂ ವ್ಯಾಪ್ತಿಯಲ್ಲಿ ರೈತರ ಹೊಲದಲ್ಲಿ ಬದು ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ತಾಪಂ ಸಹಾಯಕ ನಿರ್ದೇಶಕ ಗಂಗಾಧರ ಕಂದಕೂರ ಮಾತನಾಡಿ, 2020-21ನೇ ಸಾಲಿಗೆ 4.60 ಲಕ್ಷ ಮಾನವ ದಿನಗಳ ಗುರಿ ನಿಗದಿ ಮಾಡಲಾಗಿದೆ. ಇದುವರೆಗೆ 11ರಿಂದ 12 ಸಾವಿರ ಮಾನವ ದಿನಗಳ ಸೃಜನೆ ಮಾಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ತಾಲೂಕಿನಾದ್ಯಂತ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕೃಷಿ ಹೊಂಡ, ಬದು, ದನದ ಕೊಟ್ಟಿಗೆ, ಆಶ್ರಯ ಮನೆಗಳ ನಿರ್ಮಾಣಕ್ಕೆ 90 ಮಾನವ ದಿನಗಳನ್ನು ನೀಡಲಾಗುತ್ತಿದೆ. ಮುಂದಿನ ಜೂನ್‌ ಅಂತ್ಯದ ವೇಳೆಗೆ ಎಲ್ಲಾ ಕೃಷಿ ಹೊಂಡ, ಬದು ಹಾಗೂ ಚಕ್‌ ಡ್ಯಾಮ್‌ಗಳನ್ನು ಪೂರ್ಣಗೊಳಿಸಿ ಮಳೆನೀರು ಸಂಗ್ರಹಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಕೊವೀಡ್‌-19 ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಇತರೆ ನಗರಗಳಿಂದ ಹಳ್ಳಿಗೆ ಬಂದಿರುವ ಜನರಿಗೆ ನರೇಗಾದಡಿ ಕೆಲಸ ನೀಡುತ್ತಿರುವುದು ವರದಾನವಾಗಿದೆ. ಈಗ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕನಿಷ್ಠ 30ರಿಂದ 40 ಕೂಲಿ ಕಾರ್ಮಿಕರು ಸಿಗುತ್ತಿದ್ದಾರೆ. ಇನ್ನೂ ಮುಂದೆ ಇವರು ನಗರಗಳಿಗೆ ವಲಸೆ ಹೋಗದಂತೆ ಗ್ರಾಪಂ ವ್ಯಾಪ್ತಿಯಲ್ಲಿಯೇ ಕೆಲಸ ನೀಡಲಾಗುವುದು. ಪ್ರತಿ ಕಾಮಗಾರಿ ಆಗಮಿಸುವ ಕೂಲಿಕಾರರಿಗೆ ಮಾಸ್ಕ್ ವಿತರಿಸಲಾಗಿದೆ. ಹ್ಯಾಂಡ್‌ ಸ್ಯಾನಿಟೈಸರ್‌ ಒದಗಿಸಲಾಗಿದೆ. ಸಾಮಾಜಿಕ ಅಂತರದೊಂದಿಗೆ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.

ಗ್ರಾಪಂ ಪಿಡಿಒ ದಾವಲ್‌ ಸಾಬ್‌ ಪಿಂಜಾರ್‌ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾದಡಿ ಕೆಲಸ ನೀಡಲಾಗಿದೆ. 150 ರಿಂದ 200 ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದಾರೆ. ವಾರದೊಳಗಾಗಿ ಕೂಲಿ ಹಣವನ್ನು ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುತ್ತಿದೆ. ಗ್ರಾಪಂ ವ್ಯಾಪ್ತಿಯಲ್ಲಿ 25 ರಿಂದ 30 ರೈತರ ಹೊಲದಲ್ಲಿ ಬದು ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ ಎಂದರು. ಉಮಚಗಿ ಗ್ರಾಮದ ರೈತ ಶಿವಾನಂದ ಮಾಳಪ್ಪ ಕಟಗಿ ಮಾತನಾಡಿದರು.

ನರೇಗಾದಡಿ ಕೂಲಿ ನೀಡುತ್ತಿರುವುದು ಎಲ್ಲಾ ಕಾರ್ಮಿಕರಿಗೆ ಅನುಕೂಲವಾಗಿದೆ. ಕೊರೊನಾ ಸಂದರ್ಭದಲ್ಲಿ ಜನರು ಬೇರೆ ಸ್ಥಳಗಳಿಗೆ ತೆರಳಿ ಕೆಲಸ ನಿರ್ವಹಿಸುವುದು ದುಸ್ತರವಾಗಿದೆ. ನರೇಗಾ ಕೆಲಸದಿಂದ ಮನೆ ನಿರ್ವಹಣೆ, ಔಷಧೋಪಚಾರ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದೆ ಎಂದು ಕಾರ್ಮಿಕ ಮಲ್ಲಿಕಾರ್ಜುನ ಹೇಳಿದರು.

ಟಾಪ್ ನ್ಯೂಸ್

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.