ಯುವಶಕ್ತಿ ಸದ್ಬಳಕೆ ಚಿಂತನೆ ಅಗತ್ಯ: ಹೊಸಮನಿ


Team Udayavani, Jan 15, 2019, 11:54 AM IST

15-january-23.jpg

ಹುಬ್ಬಳ್ಳಿ: ಯುವಕರಿದ್ದರೆ ದೇಶ. ದೇಶವಿದ್ದರೆ ಯುವಕರು. ಆದ್ದರಿಂದ ಯುವ ಜನಾಂಗ ಸದಾ ತಮ್ಮಲ್ಲಿನ ಶಕ್ತಿ ಸದ್ಬಳಕೆ ಮಾಡಿಕೊಳ್ಳುವ ಕುರಿತು ಚಿಂತನೆ ನಡೆಸಬೇಕೆಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ| ಕೆ.ಎಂ. ಹೊಸಮನಿ ಹೇಳಿದರು.

ವಿದ್ಯಾನಗರದ ಕನಕದಾಸ ಶಿಕ್ಷಣ ಸಮಿತಿಯಲ್ಲಿ ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್ನೆಸ್ಸೆಸ್‌ ಕೋಶ, ಕೆಯುಡಿ, ಕೆಎಸ್‌ಎಸ್‌ ಸಮಿತಿ ಗದಗ-ಹುಬ್ಬಳ್ಳಿ, ಕೆಎಸ್‌ಎಸ್‌ ಪದವಿ ಮತ್ತು ಬಿಎಸ್‌ಡಬ್ಲ್ಯು, ಎನ್‌ಎಸ್‌ಎಸ್‌ ಘಟಕಗಳು, ನರೇಂದ್ರ ಯುವಕ ಮಂಡಳ ಹುಬ್ಬಳ್ಳಿ, ವಿನೂತನ ಯುವ ಮಂಡಳ ಶೇರೆವಾಡ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಸಂಸ್ಕೃತಿ ಜಗತ್ತಿನ ಉತ್ತಮ ನಡವಳಿಕೆಯಲ್ಲಿ ಹೆಚ್ಚು ಮಹತ್ವ ಪಡೆದಿದ್ದು, ಯುವಕರು ಏನನ್ನಾದರೂ ಸಾಧಿಸಬೇಕಾದರೆ ಏಕಾಗ್ರತೆ, ದೃಢ ನಿಶ್ಚಯ ಅವಶ್ಯ. ಭಾರತೀಯ ಪುರಾತನ ಗ್ರಂಥಗಳು, ಸ್ವಾಮಿ ವಿವೇಕಾನಂದರ ಚಿಂತನೆಗಳು, ಅವರ ದಿವ್ಯತ್ವದ ಶಕ್ತಿ ವಿಶ್ವಕ್ಕೆ ಸಾರಿ ಸಾರಿ ಹೇಳುತ್ತವೆ. ವಿವೇಕಾನಂದರು ಷಿಕಾಗೋ ಸರ್ವಧರ್ಮ ಸಮ್ಮೇಳನದಲ್ಲಿ ಜಗತ್ತಿಗೆ ಹಿಂದೂ ಧರ್ಮ ತೋರಿಸಿಕೊಟ್ಟು ಇಂದಿಗೂ ವಿಶ್ವಕ್ಕೆ ಪರಿಚಿತರಾಗಿದ್ದಾರೆ. ಯುವಕರ ಮನಸ್ಸು ಉತ್ಸಾಹದಿಂದ, ಸದಾ ಲವಲವಿಕೆಯಿಂದ ಕೂಡಿರಬೇಕು. ಮನಸ್ಸು ದೃಢವಾಗಿಟ್ಟುಕೊಂಡು ಅದಕ್ಕೆ ಉತ್ತೇಜನ ನೀಡಿ ಸ್ವಾರ್ಥಕ್ಕಿಂತ ಪರರ ಹಿತವೇ ಶ್ರೇಷ್ಠ ಎಂದು ಭಾವಿಸಬೇಕು ಎಂದರು.

ಕನಕದಾಸ ಶಿಕ್ಷಣ ಸಮಿತಿ ಕಾರ್ಯದರ್ಶಿ ರವಿ ದಂಡಿನ ಮಾತನಾಡಿ, ಜೀವನದಲ್ಲಿ ಶ್ರದ್ಧೆ, ನಿಷ್ಠೆ, ಆತ್ಮವಿಶ್ವಾಸ ಅಳವಡಿಸಿಕೊಳ್ಳವುದರಿಂದ ಸಾಧನೆಯ ಫಲ ನಮಗೆ ದೊರೆಯುತ್ತದೆ. ಯುವ ಶಕ್ತಿ ಹಾಳಾಗದಂತೆ ನೋಡಿಕೊಳ್ಳುವುದು ಶಿಕ್ಷಕರು ಮತ್ತು ಗುರು-ಹಿರಿಯರ ಆದ್ಯ ಜವಾಬ್ದಾರಿಯಾಗಿದೆ. ಯುವಕರು ವಿವೇಕಾನಂದರ ಚಿಂತನೆಗಳನ್ನು ತಮ್ಮಲ್ಲಿ ಕರಗತವಾಗಿಸಿಕೊಂಡಾಗ ದೇಶಕ್ಕೆ ಮಹಾನ್‌ ವಿಶ್ವಮಾನವರು ನೀಡಿದ ಕೋಡುಗೆಗಳು ಸಾರ್ಥಕವಾಗುತ್ತವೆ ಎಂದು ಹೇಳಿದರು.

ಉಪನ್ಯಾಸಕಿ ಡಾ| ಸುಜಾತಾ ಸೋಗೂರ ಮಾತನಾಡಿ, ಬಾಲ್ಯದಿಂದಲೇ ಭಾರತದ ಮಹಾನ್‌ ಗ್ರಂಥವಾದ ಭಗವದ್ಗೀತೆ ಬೋಧಿಸುವ ವ್ಯವಸ್ಥೆ ಇಂದಿನ ಯುವ ಸಮೂಹದಲ್ಲಿ ಬೆಳೆಸಬೇಕು ಎಂದರು.

ಎಪಿಎಂಸಿ ಅಧ್ಯಕ್ಷ ಜಗನ್ನಾಥ ಸಿದ್ದನಗೌಡ್ರ ಮಾತನಾಡಿ, ಯುವಕರು ಹೆಚ್ಚಿನ ಸಮಯ ಮೊಬೈಲ್‌, ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ ಮಾಡದೆ ನಮ್ಮ ನೆರೆ-ಹೊರೆಯ ಸಮಾಜದೊಂದಿಗೆ ಬೆರೆತು ಎಲ್ಲರೂ ಒಂದೇ ಎನ್ನುವ ಮನೋಭಾವ ತಾಳಬೇಕು ಎಂದು ಕಿವಿಮಾತು ಹೇಳಿದರು.

ಕಸಾಪ ಜಿಲ್ಲಾಧ್ಯಕ್ಷ ಡಾ| ಲಿಂಗರಾಜ ಅಂಗಡಿ, ಕೆಎಸ್‌ಎಸ್‌ ಉಪಾಧ್ಯಕÒ‌ ಶಾಂತಣ್ಣ ಕಡಿವಾಲ, ಎಚ್.ವಿ. ಬೆಳಗಲಿ, ಎಂ.ಬಿ. ದಲಪತಿ, ಪ್ರಾಚಾರ್ಯರಾದ ಡಾ| ಮಲ್ಲಿಕಾರ್ಜುನ ಕೆ., ಬಸವರಾಜ ಗೋರವರ ಮೊದಲಾದವರಿದ್ದರು. ಗಣ್ಯರು ಉತ್ತಮನಾಗು ಉಪಕಾರಿಯಾಗು ವಿವೇಕ ಬ್ಯಾಂಡ್‌ ಬಿಡುಗಡೆ ಮಾಡಿದರು.

ಪ್ರಾಚಾರ್ಯ ಪ್ರೊ| ಸಂದೀಪ ಬೂದಿಹಾಳ ಸ್ವಾಗತಿಸಿದರು. ಉಪನ್ಯಾಸಕ ಕೆ.ಬಿ. ಕುರಿ ನಿರೂಪಿಸಿದರು. ಲಿಂಗರಾಜ ನಿಡವಣಿ ಪ್ರಾಸ್ತಾವಿಕ ಮಾತನಾಡಿದರು. ಬಿ.ಎಸ್‌. ಮಡ್ಲಿ ವಂದಿಸಿದರು.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.