ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ, ಸತ್ಯಕ್ಕೆ ಸೋಲಿಲ್ಲ: ವಿನಯ್ ಕುಲಕರ್ಣಿ
Team Udayavani, Nov 6, 2020, 12:47 PM IST
ಧಾರವಾಡ: ಜಿಲ್ಲಾ ಪಂಚಾಯತಿ ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಫೇಸ್ ಬುಕ್ ಖಾತೆಯಲ್ಲಿ “ಬಿದ್ದು ಎದ್ದು ಗೆದ್ದು ಬರುವೆನು, ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು” ಭಾವನಾತ್ಮಕವಾಗಿ ಬರೆದುಕೊಳ್ಳಲಾಗಿದೆ.
ವಿನಯ್ ಕುಲಕರ್ಣಿಯವರ ಫೇಸ್ ಬುಕ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಆಗಿದ್ದು, “ಬಿದ್ದು ಎದ್ದು ಗೆದ್ದು ಬರುವೆನು, ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು. “ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೆ ಹೋಗುತ್ತದೆ”. ಸತ್ಯಕ್ಕೆ ಸೋಲಿಲ್ಲ. ನನ್ನೆಲ್ಲಾ ಪ್ರೀತಿ ಪಾತ್ರರಿಗೆ ನನ್ನ ಮೇಲಿಟ್ಟಿರುವ ನಂಬಿಕೆಗೆ ನಾನು ಚಿರಋಣಿ, ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದು ಸುಳ್ಳಾಗುವುದಿಲ್ಲ ಎಂದು ಬರೆಯಲಾಗಿದೆ.
ಇದನ್ನೂ ಓದಿ:ಮದುವೆ ಸಮಾರಂಭಗಳಲ್ಲಿ ಸೇರುತ್ತಿದ್ದಾರೆ ಭಾರಿ ಜನರು! ಕಟ್ಟೆಚ್ಚರ ನೀಡಿದ ಉಡುಪಿ ಡಿಸಿ
ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಸಂಬಂಧ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಮತ್ತು ಸಹೋದರ ವಿಜಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿತ್ತು.