ಕೈಗೆ ಅಧಿಕಾರಕ್ಕೆ ಬಂದ್ರೆ ಬಡವರಿಗೆ ಮಾಸಿಕ 6 ಸಾವಿರ

Team Udayavani, Apr 11, 2019, 11:07 AM IST

ಹುಬ್ಬಳ್ಳಿ: ದೇಶದಲ್ಲಿನ ಬಡತನ ನಿರ್ಮೂಲನೆಗೆ ದಿಟ್ಟ ಹೆಜ್ಜೆ ಇಟ್ಟಿರುವ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಕನಿಷ್ಠ ಆರ್ಥಿಕ ಭದ್ರತೆ ಯೋಜನೆಯಡಿ ದೇಶದ ಪ್ರತಿ ಬಡ ಕುಟುಂಬಕ್ಕೆ ಮಾಸಿಕ 6 ಸಾವಿರ ರೂ.ನಂತೆ ನೀಡಲಾಗುವುದು ಎಂದು ಲೀಡ್ಕರ್‌ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಪರ ಬುಧವಾರ ಹು-ಧಾ ಮಹಾನಗರ ವಾರ್ಡ್‌ 50 ರ ಮಂಟೂರು ರಸ್ತೆಯ ಮಿಲ್ಲತ್‌ ನಗರ, ಅಬ್ರಾರ್‌ ಕಾಲೋನಿ, ಕಸ್ತೂರ ಬಾ ನಗರ,
ಪ್ರಿಯದರ್ಶಿನಿ ಕಾಲೋನಿ, ಕೃಪಾ ನಗರ, ಅಂಬೇಡ್ಕರ್‌ ಕಾಲೋನಿ, ಬ್ಯಾಳಿ ಪ್ಲಾಟ್‌ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಅವರು ಮಾತನಾಡಿದರು.
ಬಡವರಿಗೆ ಎಲ್ಲ ರಂಗದಲ್ಲೂ ಸೂಕ್ತ ನ್ಯಾಯ ಒದಗಿಸಲು ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಅವರನ್ನು ಹೆಚ್ಚು ಮತಗಳಿಂದ ಆಯ್ಕೆ ಮಾಡುವಂತೆ ಮನವಿ ಮಾಡಿದರು. ಕಾಂಗ್ರೆಸ್‌ ಮುಖಂಡರಾದ ಮೆಹಮೂದ ಕೋಳೂರು, ಶರೀಫ್‌ ಅದವಾನಿ, ಬಾಷಾ ಬೇಪಾರಿ, ಇನಾಯತ್‌ ಖಾನ್‌ ಪಠಾಣ, ರಶೀದ ಶೇಖ್‌, ಸೈಯದ್‌ ಸಲೀಂ, ರಾಜಾರಾವ್‌, ಕಾರ್ತಿಕ್‌ ಇನ್ನಿತರರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ