ಯುವಶಕ್ತಿ ಒಗ್ಗೂಡಿದರೆ ದೇಶ ವಿಶ್ವಗುರು

ಸಕಾರಾತ್ಮಕ ಯೋಚನೆಯಿಂದ ಭವ್ಯ ಭಾರತ ನಿರ್ಮಾಣ

Team Udayavani, Mar 13, 2022, 12:23 PM IST

7

ಧಾರವಾಡ: ಯುವಶಕ್ತಿಯ ಸಕಾರಾತ್ಮಕ ಆಲೋಚನೆ ಮತ್ತು ಪ್ರಯತ್ನದಿಂದ ಮುಂದಿನ ದಿನಗಳಲ್ಲಿ ಭವ್ಯ ಭಾರತ ನಿರ್ಮಾಣ ಸಾಧ್ಯ ಎಂದು ಯುವ ಬ್ರಿಗೇಡ್‌ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ದೇವರಹುಬ್ಬಳ್ಳಿ ಗ್ರಾಮದ ಸಿದ್ದಾಶ್ರಮದಲ್ಲಿ ಹಮ್ಮಿಕೊಂಡಿದ್ದ ಯುವ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತ ವಿಶ್ವಗುರು ಆಗಲು ಯುವ ಶಕ್ತಿ ಒಗ್ಗೂಡಬೇಕು. ರಾಷ್ಟ್ರಕ್ಕಾಗಿ, ಸಮಾಜಕ್ಕಾಗಿ, ಸೇವೆ ಮಾಡಲು ಸದಾ ಸಿದ್ಧರಿರಬೇಕು. ಸಮಾಜದ ಅಂಕು-ಡೊಂಕುಗಳನ್ನು ಸೌಜನ್ಯಯುತವಾಗಿ ಬಗೆಹರಿಸಿಕೊಂಡು ಯುವ ಶಕ್ತಿ ಸಂಘಟನಾತ್ಮಕವಾಗಿ ಪ್ರಖರ ಶಕ್ತಿಯಾಗಿ ಹೊರಹೊಮ್ಮಬೇಕಿದೆ ಎಂದರು.

ಕೆಲವು ಕುತಂತ್ರ ರಾಜಕಾರಣಿಗಳ ಪ್ರತಿಫಲವಾಗಿ ಜಾತಿ ವ್ಯವಸ್ಥೆ ಸದಾ ಹೆಡೆ ಎತ್ತಿ ನಿಲ್ಲುವಂತಾಗಿದೆ. ಆದರೆ ಹಿಂದೂ ಸಮಾಜ ಜಾತಿ-ಜಾತಿಗಳನ್ನು ಮರೆತು ಒಗ್ಗೂಡಿದಾಗ ಮಾತ್ರ ಗಟ್ಟಿಯಾಗಿ ನಿಲ್ಲಲು ಸಾಧ್ಯ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ ತನ್ನ ಭವ್ಯತೆ ಮರಳಿ ಪಡೆಯುವ ಸಮಯ ಒದಗಿಬಂದಿದೆ ಎಂದು ಹೇಳಿದರು.

ಭಾರತದ ಭವ್ಯ ಪರಂಪರೆಯನ್ನು ಪುನರ್‌ ನಿರ್ಮಿಸುವ ಸಂಕಲ್ಪವನ್ನು ಯುವಕರು ಮಾಡಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಕೃಷಿ, ಕೈಗಾರಿಕೆ, ಅಭಿವೃದ್ಧಿ ಹಾಗೂ ರಕ್ಷಣೆ ದೃಷ್ಟಿಯಿಂದ ಇಂದು ವಿಶ್ವದಲ್ಲಿಯೇ ಭಾರತ ತಲೆ ಎತ್ತಿ ನಿಂತಿದೆ. ಉಕ್ರೇನ್‌ ದೇಶದ ಪ್ರಧಾನಿಯು ಯುದ್ಧ ನಿಲ್ಲಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಹೇಳಿದಾಗ, ಭಾರತ ಈಗ ಎಷ್ಟು ಶಕ್ತಿಶಾಲಿಯಾಗಿದೆ ಎಂಬುದನ್ನು ಎಲ್ಲರೂ ಅರಿಯಬಹುದಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ರಾಯನಾಳದ ಚಿಕ್ಕರೇವಣಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ಭಾರತವು ಪ್ರಾಚೀನ ಪರಂಪರೆಯ ಜತೆಗೆ ಆಧುನಿಕ ಶಕ್ತಿಶಾಲಿ ರಾಷ್ಟ್ರವಾಗಿ ಹೊರ ಹೊಮ್ಮುವುದು ಯುವಕರ ಕೈಯಲ್ಲಿದೆ ಎಂದರು.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.