ಉಮಚಗಿಯಲ್ಲಿ ದಾಸ್ತಾನಿಟ್ಟ ಅಕ್ರಮ ಮರಳು ವಶ

Team Udayavani, Jun 27, 2017, 12:00 PM IST

hub4.jpg

ಹುಬ್ಬಳ್ಳಿ: ತಾಲೂಕಿನ ಉಮಚಗಿ ಸೇರಿದಂತೆ ಕೆಲ ಗ್ರಾಮಗಳಲ್ಲಿ ಅಕ್ರಮ ಮರಳು ದಾಸ್ತಾನು ಕುರಿತಾಗಿ ದೂರುಗಳಿದ್ದರೂ ಅಧಿಕಾರಿಗಳು ಕ್ರಮಕ್ಕೆ ಗಂಭೀರ ಚಿಂತನೆ ನಡೆಸದೆ ಉದಾಸೀನತೆ ತೋರಿದ್ದರು. ಹಿರಿಯ ಅಧಿಕಾರಿಯೊಬ್ಬರ ಸೂಚನೆ ಮೇರೆಗೆ ಅಧಿಕಾರಿಗಳು ಅಕ್ರಮ ಮರಳು ದಾಸ್ತಾನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಣಿ ಮತ್ತು ಭೂಗರ್ಭ ಇಲಾಖೆ, ಕಂದಾಯ ಹಾಗೂ ಪೊಲೀಸ್‌ ಅಧಿಕಾರಿಗಳು ಉಮಚಗಿ ಗ್ರಾಮದಲ್ಲಿ ಅಲ್ಲಿನ ಹಳ್ಳದಿಂದ ಅಕ್ರಮವಾಗಿ ಮರಳು ದಾಸ್ತಾನು ಮಾಡಿದ ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಹೊಲಗಳಲ್ಲಿ ಮರಳು ದಾಸ್ತಾನು ಮಾಡಿದ್ದು ಕಂಡು ಬಂದಿದೆ. 

ಅಕ್ರಮ ಮರಳು ದಾಸ್ತಾನು ಕುರಿತಾಗಿ ಸಂಗ್ರಹ ಮಾಡಿದ ಜಮೀನು ಮಾಲೀಕರು ಹಾಗೂ ದಾಸ್ತಾನು ಮಾಡಿದವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಗಣಿ ಮತ್ತು ಭೂಗರ್ಭ ಇಲಾಖೆ ಹಿರಿಯ ಭೂ ವಿಜ್ಞಾನಿ(ಖನಿಜ) ಅವರು ಹುಬ್ಬಳ್ಳಿ ಗ್ರಾಮೀಣ ಪೊಲೀಸರಿಗೆ ನೀಡಿದ ದೂರಿನ ಅನ್ವಯ ಭೂ ಮಾಲೀಕರಾದ ಪಾಟೀಲ ರುಕ್ಮವ್ವ ಹಾಗೂ ಮರಳು ಸಂಗ್ರಹಿಸಿದ್ದ ಯಶವಂತ, ಬಸಪ್ಪ, ಶಿವಪ್ಪ, ಮುತ್ತಪ್ಪ ಅವರ ಮೇಲೆ ದೂರು ದಾಖಲಿಸಲಾಗಿದೆ.

ಅದೇ ರೀತಿ ಮರಳು ಸಂಗ್ರಹಿಸಿದ ಆರೋಪದ ಮೇರೆಗೆ ಶಿವನಗೌಡ, ಶಂಕ್ರಪ್ಪ, ಮಲ್ಲೇಶ, ವಿರೂಪಾಕ್ಷಪ್ಪ ಅವರ ವಿರುದ್ಧವೂ ದೂರು ದಾಖಲಿಸಿದ್ದು, ಒಟ್ಟಾರೆ ಸುಮಾರು 31 ಟ್ರ್ಯಾಕ್ಟರ್‌ಗಳಷ್ಟು ಮರಳನ್ನು ವಶಪಡಿಸಿಕೊಳ್ಳಲಾಗಿದೆ. ಉಮಚಗಿ ಸೇರಿದಂತೆ ಕೆಲವೊಂದು ಗ್ರಾಮಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದಾಗಲೂ ಸ್ಥಳೀಯ ಅಧಿಕಾರಿಗಳು ಅಂತಹದ್ದೇನು ಕಂಡು ಬಂದಿಲ್ಲ ಎಂದು ಸಾಗಿ ಹಾಕುವ ಯತ್ನ ತೋರಿದ್ದರು. 

ಅಕ್ರಮ ಮರಳು ಗಣಿಗಾರಿಕೆ ನಡೆಸುವವರು ರಾಜಕೀಯ ಸಂಪರ್ಕ ಹೊಂದಿದವರಾಗಿದ್ದು, ಆ ಪ್ರಭಾವವನ್ನೇ ಬಳಸಿಕೊಂಡು ತಮ್ಮ ವಿರುದ್ಧ ಧ್ವನಿ ಎತ್ತದಂತೆ ನೋಡಿಕೊಂಡಿದ್ದರು ಎನ್ನಲಾಗಿದೆ. ಗಣಿ ಮತ್ತು ಭೂ ಗರ್ಭ ಇಲಾಖೆ ಸಚಿವರು ಧಾರವಾಡ ಜಿಲ್ಲೆಯವರೇ ಆಗಿದ್ದು, ಅವರದ್ದೇ ಸ್ವಂತ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಅದರ ವಿರುದ್ಧ ಸ್ಪಷ್ಟ ಕ್ರಮ ಇಲ್ಲವಾಗಿತ್ತು. 

ಉಮಚಗಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಉತ್ತಮ ಗುಣಮಟ್ಟದ್ದಲ್ಲದ ಮರಳನ್ನೇ ಉತ್ತಮ ಗುಣಮಟ್ಟದ ಮರಳು ಎಂದು ಮಾರಾಟ ಮಾಡಲಾಗುತ್ತಿತ್ತು. ಅಕ್ರಮ ಮರಳು ಗಣಿಗಾರಿಕೆಯಿಂದ ಹಳ್ಳದಲ್ಲಿ ಕಂದಕಗಳು ಉಂಟಾಗುತ್ತಿದ್ದು, ಮಳೆಗಾಲದಲ್ಲಿ ಇದರಿಂದ ಅಪಾಯವಾಗುವ ಸಾಧ್ಯತೆ ಬಗ್ಗೆ ಅನೇಕರು ಆತಂಕ ವ್ಯಕ್ತಪಡಿಸಿದ್ದರು.

ಉಮಚಗಿ ಇನ್ನಿತರ ಕಡೆಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಣಿವಣ್ಣನ್‌ ಅವರು ಸ್ಥಳೀಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದರಿಂದ ಈ ದಾಳಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.  

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.