ಮುಂದುವರಿದ ಒತ್ತುವರಿ ತೆರವು ಕಾರ್ಯಾಚರಣೆ


Team Udayavani, Mar 17, 2021, 3:16 PM IST

ಮುಂದುವರಿದ ಒತ್ತುವರಿ ತೆರವು ಕಾರ್ಯಾಚರಣೆ

ಹುಬ್ಬಳ್ಳಿ: ಮಾರುಕಟ್ಟೆ ಪ್ರದೇಶದ ಒತ್ತುವರಿ ತೆರವಿಗೆ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಮುಂದಾಗಿದ್ದು, ಮಂಗಳವಾರವೂ ಪಾಲಿಕೆ ಜೆಸಿಬಿಗಳುಮಾರುಕಟ್ಟೆ ಪ್ರದೇಶಗಳಲ್ಲಿ ಸದ್ದು ಮಾಡಿವೆ.

ಕಳೆದ ಎರಡು ದಿನಗಳ ಹಿಂದೆ ತೆರವು ಕಾರ್ಯಾಚರಣೆ ಮೂಲಕ ಬಿಸಿ ಮುಟ್ಟಿಸಿದ್ದ ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಂಗಳವಾರವೂ ತೆರವು ಕಾರ್ಯಾಚರಣೆ ಮೂಲಕ ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಒತ್ತುವರಿಮಾಡಿಕೊಂಡಿದ್ದ ವ್ಯಾಪಾರಿಗಳಿಗೆ ಬಿಸಿ ಮುಟ್ಟಿಸಿದರು.ಸಂಜೆ 5 ಗಂಟೆಗೆ ಆರಂಭವಾದ ಕಾರ್ಯಾಚರಣೆ ರಾತ್ರಿ 8ಗಂಟೆವರೆಗೂ ನಡೆಯಿತು. ಸುಮಾರು ಮೂರು ಕಿಮೀದೂರದವರೆಗೂ ತೆರವು ಕಾರ್ಯಾಚರಣೆ ನಡೆಯಿತು.

ಅಂಗಡಿಗಳ ಮುಂದೆ ಕಟ್ಟಿದ್ದ ಕಟ್ಟಡ, ಮೆಟ್ಟಿಲುಗಳನ್ನು ಜೆಸಿಬಿ ಮೂಲಕ ಒಡೆದು ತೆಗೆಯಲಾಯಿತು. ಇನ್ನೂ ಪಾದಚಾರಿ ಮಾರ್ಗಗಳ ಮೇಲೆ ಇಟ್ಟಿದ್ದ ಡಬ್ಬಾ ಅಂಗಡಿಗಳನ್ನು ಜಪ್ತು ಮಾಡಲಾಯಿತು. ಜನರ ಓಡಾಟಕ್ಕೆ ತೊಂದರೆಯಾಗುವಂತೆ ಮಾರಾಟ ಮಾಡುತ್ತಿದ್ದ ವಸ್ತುಗಳನ್ನು ಮುಲಾಜಿಲ್ಲದೆ ಪಾಲಿಕೆ ಟ್ರ್ಯಾಕ್ಟರ್‌ಗಳಲ್ಲಿ ತುಂಬಲಾಯಿತು.

ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್ನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಡಿಸಿಪಿ ಆರ್‌.ಬಿ. ಬಸರಗಿ, ತಹಶೀಲ್ದಾರ್‌ ಶಶೀಧರ ಮಾಡ್ಯಾಳ, ನಗರ ಭೂ ಮಾಪನ ಅಧಿಕಾರಿಗಳು, ಕಂದಾಯ, ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಜಿಲ್ಲಾಧಿಕಾರಿ ಖಡಕ್‌ ವಾರ್ನಿಂಗ್‌ :

ಬೀದಿ ವ್ಯಾಪಾರಿಗಳಾಗಿದ್ದು, ಮಾನವೀಯತೆ ದೃಷ್ಟಿಯಿಂದ ಬಿಡುವಂತೆ ಮನವಿ ಮಾಡಿದರು. ಪಾದಚಾರಿ ಮಾರ್ಗ, ರಸ್ತೆ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡಿದರೆ ಜನರು ಓಡಾಡುವುದುಹೇಗೆ. ಮಾರುಕಟ್ಟೆ ಪ್ರದೇಶಗಳಲ್ಲಿ ಜನರು ವಾಹನಗಳು ಸುಗಮವಾಗಿ ಓಡಾಡದಂತಾಗಿದೆ. ಯಾವುದೇಕಾರಣಕ್ಕೂ ವಿನಾಯಿತಿ ನೀಡುವ ಪ್ರಶ್ನೆಯಿಲ್ಲ. ಅಂಗಡಿ ಮಾಲೀಕರು ತಮ್ಮ ಅಂಗಡಿಯೊಳಗೆ ಸಾಮಗ್ರಿಗಳನ್ನಿಟ್ಟುಕೊಂಡು ವ್ಯಾಪಾರ ಮಾಡಬೇಕು ವಿನಃ ಪಾದಚಾರಿ ಮಾರ್ಗದಲ್ಲಿ ಅಲ್ಲ ಎಂದು ನಿತೇಶ ಪಾಟೀಲ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು.

ಅತಿಕ್ರಮಣ ತೆರವು ಎಲ್ಲೆಲ್ಲಿ? :

ಮಾರುಕಟ್ಟೆಯ ಹೃದಯ ಭಾಗವಾಗಿರುವ ದುರ್ಗದ ಬಯಲು, ಶಾ ಬಜಾರ್‌, ತಬೀಬ್‌ ಲ್ಯಾಂಡ್‌ ಮುಖ್ಯ ರಸ್ತೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಮಾಡಲಾಯಿತು. ಸುಮಾರು 50-60 ಅಂಗಡಿಗಳ ಮುಂದೆ ಅಕ್ರಮವಾಗಿ ಮೆಟ್ಟಿಲು, ವ್ಯಾಪಾರದ ಸ್ಥಳವನ್ನಾಗಿ ಮಾಡಿಕೊಳ್ಳಲಾಗಿತ್ತು. ಇಂತಹ ಸ್ಥಳಗಳನ್ನು ಗುರುತಿಸಿ ಸರ್ವೇ ಅಧಿಕಾರಿಗಳಿಂದ ಅಳತೆ ಮಾಡಿಸಿ ಒತ್ತುವರಿ ಖಚಿತಪಡಿಸಿಕೊಂಡು ತೆರವುಗೊಳಿಸಲಾಯಿತು. ನಾವೇ ತೆರವುಗೊಳಿಸುತ್ತೇವೆ ಎಂಬ ಮಾಲೀಕರ ಮನವಿ ತಿರಸ್ಕರಿಸಿ ಪಾಲಿಕೆ ಜೆಸಿಬಿಯಿಂದ ಒಡೆದುತೆಗೆಯಲಾಯಿತು.

ಸಾರ್ವಜನಿಕರಿಂದ ಶಹಬ್ಬಾಸ್‌ಗಿರಿ  :

ನಗರದ ಪ್ರಮುಖ ಮಾರುಕಟ್ಟೆ ದುರ್ಗದ ಬಯಲು ಸೇರಿದಂತೆ ವಿವಿಧ ರಸ್ತೆಗಳ ಒತ್ತುವರಿ ತೆರವು ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆವ್ಯಕ್ತವಾಗಿದೆ. ಒತ್ತುವರಿಯಿಂದ ನಗರದ ವಿವಿಧೆಡೆದೊಡ್ಡ ರಸ್ತೆಗಳು ಕಿರಿದಾಗಿ ದ್ವಿಚಕ್ರ ವಾಹನಗಳೂಓಡಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಬಗ್ಗೆ ಸೂಕ್ತ ಗಮನ ಹರಿಸಬೇಕಾದ ಮಹಾನಗರಪಾಲಿಕೆ ಮೌನಕ್ಕೆ ಶರಣಾಗಿದ್ದರಿಂದ ಈ ಪರಿಸ್ಥಿತಿಉಂಟಾಗಿದೆ. ಒತ್ತುವರಿ ತೆರವು ಕಾರ್ಯ ಒಂದೆರಡು ದಿನಕ್ಕೆ ಸೀಮಿತವಾಗದೆ ಎಲ್ಲಾ ಕಡೆಗೂ ಆಗಬೇಕು. ಅನಧಿಕೃತ ಕಟ್ಟಡಗಳ ತೆರವಿಗೂ ಜಿಲ್ಲಾಡಳಿತ ಮುಂದಾಗಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಮಾರುಕಟ್ಟೆ ಪ್ರದೇಶಗಳಲ್ಲಿ ಸಾಕಷ್ಟು ಒತ್ತುವರಿಯಾಗಿರುವ ಕುರಿತು ಸಾರ್ವನಿಕರಿಂದ ದೂರು ಬಂದಿದ್ದವು. ಈಗಾಗಲೇ ಅಂತಹಪ್ರದೇಶಗಳನ್ನು ಗುರುತಿಸಿ ಎಚ್ಚರಿಕೆ ಕೂಡನೀಡಲಾಗಿದೆ.ಪಾಲಿಕೆಯ ರಸ್ತೆ, ಪಾದಚಾರಿಮಾರ್ಗಗಳು ಜನರಿಗೆ ಮುಕ್ತವಾಗುವವರೆಗೂ ತೆರವುಕಾರ್ಯಾಚರಣೆ ನಿರಂತರವಾಗಿ ನಡೆಯಲಿದೆ. ಒತ್ತುವರಿ ತೆರವು ಕಾರ್ಯಾಚರಣೆ ಆಗಾಗ ನಡೆಸುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. -ನಿತೇಶ ಪಾಟೀಲ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.