Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ

Team Udayavani, May 27, 2024, 3:09 PM IST

Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ

ಧಾರವಾಡ : ಪ್ರಸಕ್ತ ಮುಂಗಾರು ಹಂಗಾಮಿಗೆ ರಾಜ್ಯ ಸರಕಾರ ರೈತ ಸಂಪರ್ಕ ಕೇಂದ್ರಗಳ ಮೂಲಕ ನೀಡುವ ರಿಯಾಯಿತಿ ದರದ ಬಿತ್ತನೆ ಬೀಜಗಳ ದರ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ ವರ್ಷ ಬರದಿಂದ ಕಂಗೆಟ್ಟಿರುವ ರೈತರಿಗೆ ಈ ಬಾರಿ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ರೈತ ಹೋರಾಟಗಾರ ಪಿ.ಎಚ್. ನೀರಲಕೇರಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅಚರು, ರಾಜ್ಯ ಸರ್ಕಾರ ರೈತರಿಗೆ ದಿಢೀ‌ರ್ ಆಘಾತ ನೀಡಿದ್ದು, ಮುಂಗಾರು ಬಿತ್ತನೆ ಬೀಜಗಳ ದರವನ್ನು ಶೇ 60 ರಿಂದ ಶೇ 70 ರಷ್ಟು ಏರಿಕೆ ಮಾಡಿದೆ. ಉತ್ತರ ಕರ್ನಾಟಕದ ಪ್ರಮುಖ ಬೆಳೆಗಳಾದ ತೊಗರಿ, ಹೆಸರು, ಮೆಕ್ಕೆಜೋಳ ಬಿತ್ತನೆ ಬೀಜಗಳ ದರ ಹೆಚ್ಚಳವಾಗಿದೆ. ಕಳೆದ ವರ್ಷ ಸಬ್ಸಿಡಿ ಹೊರತುಪಡಿಸಿ ಸಾಮಾನ್ಯ ವರ್ಗಕ್ಕೆ ಮೆಕ್ಕೆಜೋಳ (5KG ಪ್ಯಾಕೆಟ್) 501 ರೂ., SC, ST ವರ್ಗಕ್ಕೆ 438ರೂ. ಇತ್ತು. ಈ ಬಾರಿ 805 ರೂ. ಹಾಗೂ SC, ST ವರ್ಗಕ್ಕೆ 742 ರೂ. ನಿಗದಿ ಮಾಡಲಾಗಿದೆ. ಹೀಗಾಗಿ ರೈತರು ಸಾಲ ಮಾಡಬೇಕಾದ ಸ್ಥಿತಿ ಎದುರಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಮಳೆ ಇಲ್ಲದೇ ಬೆಳೆ ಬಂದಿಲ್ಲ. ರೈತರು ತೀರಾ ಸಂಕಷ್ಟದಲ್ಲಿದ್ದಾರೆ. ಸರಕಾರ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತವಾಗಿ ಬೀಜ ನೀಡಬೇಕಿತ್ತು. ಅದು ಬಿಟ್ಟು ಬೆಲೆ ಹೆಚ್ಚಿಸಿರುವುದು ರೈತರಿಗೆ ಬಲವಾದ ಹೊಡೆತ ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ರೈತರು ಸಾಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ್ದರು. ಆದರೆ ಮಳೆ ಆಗದೇ ಬೆಳೆ ಬರದೇ ಇದ್ದರಿಂದ ಸಂಕಷ್ಟದಲ್ಲಿದ್ದಾರೆ. ಈಗ ಹೊಸದಾಗಿ ಬೀಜ ಮತ್ತು ಗೊಬ್ಬರಕ್ಕೆ ಮತ್ತೆ ಸಾಲ ಮಾಡಬೇಕು. ಬೆಲೆ ಹೆಚ್ಚಳ ಮಾಡಿರುವುದು ಮತ್ತೆ ಸಂಕಷ್ಟಕ್ಕೆ ನೂಕಿದಂತಾಗಿದೆ ಎಂದಿದ್ದಾರೆ.

ಭೀಕರ ಬರದಿಂದಾಗಿ ರೈತರು ಸಂಕಷ್ಟದಲ್ಲಿ ಇದ್ದಾರೆ. ಸರಕಾರ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತವಾಗಿ ಬೀಜ ನೀಡಬೇಕು. ಇಲ್ಲದಿದ್ದರೆ ಸಬ್ಸಿಡಿ ಹೆಚ್ಚಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸರಕಾರಿ ನೌಕರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಿ… ಶಾಸಕ ಚನ್ನಬಸಪ್ಪ

ಟಾಪ್ ನ್ಯೂಸ್

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.