ಹಾಲು ಉತ್ಪಾದನೆಗೆ ಪ್ರೋತ್ಸಾಹ ಹೆಚ್ಚಳ


Team Udayavani, Jun 2, 2019, 11:19 AM IST

dw-tdy-2..

ಧಾರವಾಡ: ಕೆಎಂಎಫ್‌ ವತಿಯಿಂದ ವಿಶ್ವ ಹಾಲು ದಿನ ಆಚರಿಸಲಾಯಿತು.

ಧಾರವಾಡ: ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರುವ ಹಾಲು ಉತ್ಪಾದನೆಗೆ ಇನ್ನಷ್ಟು ಪ್ರೋತ್ಸಾಹ ನೀಡುವುದಾಗಿ ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ ಹೇಳಿದರು.

ಆಲೂರು ವೆಂಕಟರಾವ್‌ ಭವನದಲ್ಲಿ ಆಯೋಜಿಸಿದ್ದ ವಿಶ್ವಹಾಲು ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅÊರು ಮಾತನಾಡಿದರು. ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಹಾಲು ಪ್ರಮುಖ ಪಾತ್ರ ವಹಿಸುತ್ತಿದೆ. ಹಾಲಿನ ಉತ್ಪಾದನೆ ಹೆಚ್ಚಿಸಲು ಧಾರವಾಡ ಹಾಲು ಒಕ್ಕೂಟವು ರೈತರಿಗೆ ಮತ್ತು ಹಾಲು ಉತ್ಪಾದಕರಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ. ವಿಶ್ವ ಹಾಲು ದಿನಾಚರಣೆಯು 2001ರಿಂದ ಆಚರಣೆಗೆ ಬಂದಿದ್ದು, ಹಾಲಿನಲ್ಲಿರುವ ಎಲ್ಲ ಸೂಕ್ಷ್ಮ ಪೋಷಕಾಂಶಗಳ ಮಾಹಿತಿ ಪ್ರಚುರ ಪಡಿಸಲು ವಿಶ್ವ ಹಾಲು ದಿನ ಆಚರಿಸಲಾಗುತ್ತಿದೆ ಎಂದರು.

ಅಪೌಷ್ಠಿಕತೆ ಹೋಗಲಾಡಿಸಲು ಆರಂಭದಲ್ಲಿ ಅಂಗನವಾಡಿ ಮಕ್ಕಳಿಗೆ ಮಾತ್ರ ಹಾಲನ್ನು ವಿತರಿಸಲಾಗುತ್ತಿತ್ತು. ರಾಜ್ಯದ ಮಕ್ಕಳಲ್ಲಿಯ ವಿಶೇಷ ಪೋಷಕಾಂಶಗಳ ಕೊರತೆ ಪರಿಗಣಿಸಿ ರಾಜ್ಯ ಸರ್ಕಾರವು ಕ್ಷೀರಭಾಗ್ಯ ಯೋಜನೆ ರೂಪಿಸಿದೆ. ಹಾಲಿನಲ್ಲಿರುವ ಸೂಕ್ಷ್ಮ ಪೋಷಕಾಂಶಗಳನ್ನು ಸೇವಿಸುವುದರಿಂದ ಮಕ್ಕಳು ಆರೋಗ್ಯವಾಗಿ ಮತ್ತು ಸದೃಢವಾಗಿ ಬೆಳೆಯುತ್ತಾರೆ ಎಂದು ಹೇಳಿದರು.

ಹಾಲು ಒಕ್ಕೂಟದ ನಿರ್ದೇಶಕರಾದ ಎನ್‌.ಎಸ್‌. ಅಸೂಟಿ, ಶಂಕರ ಮುಗದ, ಗೀತಾ ಸುರೇಶ ಮರಿಲಿಂಗಣ್ಣವರ ಮಾತನಾಡಿದರು. ಡಾ| ಸುಷ್ಮಾ ರಾಮನಗೌಡರ ಹಾಗೂ ಡಾ| ಪ್ರವೀಣಕುಮಾರ ಪ್ರಭು ಟಿ. ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ನಂದಿನಿ ಬಾದಾಮ ಹಾಲು, ಶಾಲಾ ಪಠ್ಯ ಪರಿಕರಗಳನ್ನು ವಿತರಿಸಲಾಯಿತು. ರೈತರ ಜೀವನಾಡಿ ಮತ್ತು ಗ್ರಾಹಕರ ನೆಚ್ಚಿನ ನಂದಿನಿ ವಿಷಯ ಕುರಿತು ಸಿಎಸ್‌ಐ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕಿರುನಾಟಕ ಪ್ರಸ್ತುತಪಡಿಸಿದರು.

ಹಾಲು ಒಕ್ಕೂಟದ ಶೇಖರಣೆ ಹಾಗೂ ತಾಂತ್ರಿಕ ವಿಭಾಗದ ಉಪವ್ಯವಸ್ಥಾಪಕ ಡಾ| ವೀರೇಶ ತರಲಿ ಸ್ವಾಗತಿಸಿದರು. ವ್ಯವಸ್ಥಾಪಕ ಡಾ|ಎಸ್‌.ಎಸ್‌. ಆಲೂರ ಪ್ರಾಸ್ತಾವಿಕ ಮಾತನಾಡಿದರು. ಎನ್‌.ಎಸ್‌. ಕೋಡಿಯಾಲಮಠ ನಿರೂಪಿಸಿದರು.ಆರ್‌.ಎಸ್‌. ಸಿದ್ಧರಾಜು ವಂದಿಸಿದರು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.