ಅಭಿವೃದ್ಧಿ ಪಥದಲ್ಲಿ ಭಾರತ: ಶೆಟ್ಟರ


Team Udayavani, Aug 16, 2017, 12:57 PM IST

hub3.jpg

ಹುಬ್ಬಳ್ಳಿ: ಇಡೀ ದೇಶದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿದ್ದು, ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಹೇಳಿದರು. ಇಲ್ಲಿನ ನೆಹರು ಮೈದಾನದಲ್ಲಿ ತಾಲೂಕು ಆಡಳಿತದಿಂದ ಮಂಗಳವಾರ 71ನೇ ಸ್ವಾತಂತ್ರೊತ್ಸವ ದಿನಾಚರಣೆ ಧ್ವಜಾರೋಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಯೋಜನೆಗಳು ಸರಿಯಾದ ರೀತಿಯಲ್ಲಿ ಅನುಷ್ಠಾನವಾಗಬೇಕು. ದೇಶ ಹಾಗೂ ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರ ಮೂಲಕ ಪ್ರಗತಿ ಸಾಧಿ ಸಬಹುದು ಎಂದರು. ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗಿಲ್ಲ. ರೈತರ ಆತ್ಮಹತ್ಯೆ ಹೆಚ್ಚಾಗುತ್ತಿದ್ದು, ಈ ಕುರಿತು ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕಿದೆ ಎಂದರು.

ಮಹದಾಯಿ ನದಿ ವಿವಾದ ವಿಚಾರದಲ್ಲಿ ಗೋವಾ ರಾಜ್ಯದ ಮುಖ್ಯಮಂತ್ರಿಗಳ ಮನವೊಲಿಸಲು ಸರ್ವ ಪಕ್ಷಗಳು ತೀರ್ಮಾನಿಸಿದ್ದು, ನ್ಯಾಯಾಧಿಕರಣದಲ್ಲಿರುವ ಪ್ರಕರಣವಾಗಿದ್ದು, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವ ಕುರಿತು ಈಗಾಗಲೇ ಹಲವು ಪ್ರಯತ್ನಗಳು ಜಾರಿಯಲ್ಲಿವೆ ಎಂದರು. 

ತಹಶೀಲ್ದಾರ ಶಶಿಧರ ಮಾಡ್ಯಾಳ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ತಾಲೂಕಿನ 3 ಗ್ರಾಮಗಳಾದ ಶಾಂತಿನಗರ (ಬ್ಯಾಹಟ್ಟಿ ಗ್ರಾಮ), ಹೊಸ ಭಂಡಿವಾಡ, ಸಣ್ಣ ಕುಸುಗಲ್ಲ ಇವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಾಲೂಕಿನ 9.82 ಲಕ್ಷ ದಾಖಲೆಗಳನ್ನು ದಾನಿಗಳ ಸಹಾಯದಿಂದ ಸ್ಕ್ಯಾನಿಂಗ್‌ ಮಾಡಿ ಗಣಕೀರಣಗೊಳಿಸಲಾಗಿದೆ ಎಂದರು. 

ಇದೇ ಸಂದರ್ಭದಲ್ಲಿ ಹಿರಿಯ ಸ್ವಾತಂತ್ರ ಹೋರಾಟಗಾರರಾದ ಶ್ರೀರಾಮ ವಿಷ್ಣು ಪಂತ್‌ ಶಿಂಧೆ, ನಿವೃತ್ತ ತಹಶೀಲ್ದಾರ ಜಿ.ಆರ್‌. ಶೀಲವಂತ, ರಾಪóಪತಿ ಪದಕ ವಿಜೇತ ಹಳೇಹುಬ್ಬಳ್ಳಿ ಪೊಲೀಸ್‌ ಠಾಣಾಧಿಕಾರಿ ಮಾರುತಿ ಗುಳ್ಳಾರಿ, ರಾಷ್ಟ್ರಮಟ್ಟದ ಬ್ಯಾಟ್‌ಮಿಟನ್‌ ಆಟಗಾರ ಗುರುವಸಂತ ಅವರನ್ನು ಸ್ಮಾನಿಸಲಾಯಿತು.  ಎಸ್ಸೆಸ್ಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಪ್ರಸಾದ ಅಬ್ಬಯ ಲ್ಯಾಪ್‌ಟಾಪ್‌ ವಿತರಿಸಿದರು.

ನಂತರ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳು  ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಆರಂಭದಲ್ಲಿ ತಹಶೀಲ್ದಾರ ಶಶಿಧರ ಮಾಡ್ಯಾಳ ವಿವಿಧ ತುಕಡಿಗಳಿಂದ ಗೌರವ ವಂದನೆ ಪಡೆದರು. ಸಂಸದ ಪ್ರಹ್ಲಾದ ಜೋಶಿ, ವಿಧಾನ ಪರಿಷತ್‌ ಶಾಸಕ ಪ್ರದೀಪ ಶೆಟ್ಟರ, ಮಹಾಪೌರ ಡಿ.ಕೆ. ಚವ್ಹಾಣ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ಡಾ| ರಾಮಚಂದ್ರ ಹೊಸಮನಿ, ಪ್ರಕಾಶ ನಾಸಿ, ಸಾವುಕರ, ಸನದಿ, ಉಮೇಶ ಕೊಂಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.  

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.