ಸಿಗ್ನಲ್ ಸಿಗದೆ ಒಂದು ಗಂಟೆಗೂ ಹೆಚ್ಚು ಕಾಲ ಆಗಸದಲ್ಲೇ ಸುತ್ತಿದ ಅನಂತ್ ಹೆಗಡೆ ಇದ್ದ ವಿಮಾನ
Team Udayavani, Aug 16, 2020, 10:29 AM IST
ಹುಬ್ಬಳ್ಳಿ: ಸಂಸದ ಅನಂತ್ ಕುಮಾರ್ ಹೆಗಡೆ ಸೇರಿದಂತೆ 49 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಹವಾಮಾನ ವೈಪರಿತ್ಯದಿಂದಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಎಟಿಸಿ ಸಿಗ್ನಲ್ ಸಿಗದ ಕಾರಣ ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಆಗಸದಲ್ಲಿಯೆ ಸುತ್ತಿ ಆತಂಕ ಸೃಷ್ಟಿಸಿತ್ತು.
ಬೆಂಗಳೂರಿನಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ವಿಮಾನ ಬೆಳಗ್ಗೆ 8:55 ಗಂಟೆಗೆ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ವಿಮಾನವು ಟವರ್ ಸಿಗ್ನಲ್ ದೊರೆಯದ್ದಕ್ಕೆ ಆಕಾಶದಲ್ಲಿ ಸುತ್ತಾಟ ನಡೆಸಿತು. ಕೊನೆಗೆ 10.25ರ ವೇಳೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು.
ಸಂಸದ ಅನಂತಕುಮಾರ ಹೆಗಡೆ ಸೇರಿ 49 ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಸದ್ಯ ಎಲ್ಲರೂ ಸುರಕ್ಷಿತವಾಗಿ ವಿಮಾನದಿಂದ ಕೆಳಕ್ಕಿಳಿದಿದ್ದಾರೆ. ಹುಬ್ಬಳ್ಳಿಯಿಂದ 46 ಜನರು ಇದೇ ವಿಮಾನ ಮೂಲಕ ಇಂದು ಬೆಂಗಳೂರಿಗೆ ತೆರಳಬೇಕಿದೆ.
ಒಂದು ವೇಳೆ ಹುಬ್ಬಳ್ಳಿಯಲ್ಲಿ ವಿಮಾನ ಲ್ಯಾಂಡಿಂಗ್ ಸಾಧ್ಯವಾಗದೇ ಹೋದಲ್ಲಿ ಗೋವಾ ಅಥವಾ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡುವ ಬಗ್ಗೆ ಯೋಚನೆ ಮಾಡಲಾಗಿತ್ತು. ಆದರೆ ಸಿಗ್ನಲ್ ದೊರೆತ ಕಾರಣ 10.25ರ ವೇಳೆ ಸುರಕ್ಷಿತ ಲ್ಯಾಂಡಿಂಗ್ ಸಾಧ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ