ಆರ್‌ಪಿಎಫ್ ಸಿಬ್ಬಂದಿ ಕರ್ತವ್ಯ ನಿಯೋಜನೆಯಲ್ಲಿ ತಾರತಮ್ಯ?


Team Udayavani, May 5, 2019, 10:49 AM IST

hub-1

ಹುಬ್ಬಳ್ಳಿ: ರೈಲ್ವೆ ಸುರಕ್ಷತಾ ಬಲ (ಆರ್‌ಪಿಎಫ್‌)ಸಿಬ್ಬಂದಿ ಕರ್ತವ್ಯ ನಿಯೋಜನೆಯಲ್ಲಿ ಅಧಿಕಾರಿಗಳು ತಾರತಮ್ಯ ತೋರುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಕೆಲ ಸಿಬ್ಬಂದಿಗೆ 12 ತಾಸು, 24 ತಾಸು ಕೆಲಸ ನೀಡಲಾಗುತ್ತಿದೆ ಎಂಬ ಅಳಲು ಅನೇಕರದ್ದಾಗಿದೆ.

ರೈಲ್ವೆ ನಿಲ್ದಾಣ ಸೇರಿದಂತೆ ಇಲಾಖೆಯ ಪ್ರಮುಖ ಸ್ಥಳಗಳಲ್ಲಿ ಭದ್ರತೆ, ಸುರಕ್ಷತಾ ಕ್ರಮ ಕೈಗೊಳ್ಳುವ ನೆಪದಲ್ಲಿ ಅಧಿಕಾರಿಗಳು ಕಳೆದೊಂದು ವರ್ಷಗಳಿಂದ ತಮಗೆ ಬೇಕಾದವರನ್ನು ಹೊರತುಪಡಿಸಿ ಇನ್ನುಳಿದ ಸಿಬ್ಬಂದಿಗೆ ದಿನದ 12 ತಾಸು ಕೆಲಸಕ್ಕೆ ನಿಯೋಜಿಸುತ್ತಿದ್ದಾರೆ. ಕರ್ತವ್ಯದ ಮಧ್ಯೆ ಎರಡು ತಾಸು ಮಾತ್ರ ವಿಶ್ರಾಂತಿ ಬಿಟ್ಟು 24 ತಾಸು ಡ್ಯೂಟಿ ಮಾಡುವಂತೆ ಸೂಚಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.

ಓರ್ವ ಸಿಬ್ಬಂದಿ 12 ತಾಸು ಕರ್ತವ್ಯದಲ್ಲಿದ್ದರೆ ಅವರಿಗೆ ಸ್ಥಳದಲ್ಲೇ ನೀರು, ಊಟ ಕೊಡಬೇಕೆಂಬ ನಿಯಮವಿದೆ. ಆದರೆ ಅಧಿಕಾರಿಗಳು ಆ ಯಾವ ವ್ಯವಸ್ಥೆಯನ್ನು ಸಿಬ್ಬಂದಿಗೆ ಒದಗಿಸುತ್ತಿಲ್ಲ. ತಮಗೆ ಬೇಕಾದವರಿಗೆ ದಿನಕ್ಕೆ 8 ತಾಸು ಮಾತ್ರ ಕರ್ತವ್ಯ ಮಾಡಲು ಹೇಳುತ್ತಾರೆ. ಅವರಿಗೆ ರಜೆ ಕೂಡ ಕೊಡುತ್ತಾರೆ. ಮುಖ ನೋಡಿ ಮಣೆ ಹಾಕುತ್ತಿದ್ದಾರೆ. ಆದರೆ ಇನ್ನುಳಿದವರಿಗೆ ರಜೆ ನೀಡಲು ಸತಾಯಿಸುತ್ತಿದ್ದು, ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾದರೂ ಹಕ್ಕಿನ ರಜೆ ನೀಡದೆ ಗೈರು ಹಾಜರಿ ಎಂದು ನಮೂದಿಸುತ್ತಿದ್ದಾರೆ. ಆರ್‌ಪಿಎಫ್ ಪ್ರಧಾನ ನಿರೀಕ್ಷಕರು/ಪ್ರಧಾನ ಮುಖ್ಯ ಭದ್ರತಾ ಆಯುಕ್ತರ (ಐಜಿ/ಪಿಸಿಎಸ್‌ಸಿ) ಆದೇಶವಿದೆ. ರಜೆ ಕೊಡಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ತಮಗೆ ಬೇಕಾದವರಿಗೆ ಒಂದು ರಾತ್ರಿ ಪಾಳಿ ಮಾತ್ರ ಡ್ಯೂಟಿ ಹಾಕುತ್ತಾರೆ. ಇನ್ನುಳಿದವರಿಗೆ ವಾರದಲ್ಲಿ ಮೂರು ದಿನ ರಾತ್ರಿ ಡ್ಯೂಟಿ ಕಡ್ಡಾಯ ಮಾಡಲಾಗಿದೆ. ಉತ್ತರ ಭಾರತೀಯರು ಹಾಗೂ ದಕ್ಷಿಣ ಭಾರತೀಯರು ಎಂಬ ಭೇದಭಾವ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ನಿಲ್ದಾಣದ ಐದು ಪ್ಲಾಟ್ಫಾರ್ಮ್ನ್ನು ಇಬ್ಬರೇ ಸಶಸ್ತ್ರ ಸಿಬ್ಬಂದಿ ಒಂದು ತುದಿಯಿಂದ ಇನ್ನೊಂದು ತುದಿವರೆಗೆ ನೋಡಿಕೊಳ್ಳಬೇಕು. ಅನುಮಾನ ಬಂದರೆ ಪ್ರಯಾಣಿಕರ ತಪಾಸಣೆ ಮಾಡಬೇಕು. ಕರ್ತವ್ಯದಲ್ಲಿ ಏನಾದರೂ ಲೋಪವಾದರೆ ಇಲ್ಲವೇ ನಿಲ್ದಾಣದಲ್ಲಿ ಅನಾಹುತ, ಅವಘಡಗಳು ಸಂಭವಿಸಿದರೆ ಅವರನ್ನೇ ಹೊಣೆಗಾರರನ್ನಾಗಿ ಮಾಡಿ, ಸಂಬಳ ಕಡಿತಗೊಳಿಸುತ್ತಾರೆ. ಕರ್ತವ್ಯದಲ್ಲಿದ್ದಾಗ ಟೋಪಿ ಹಾಕಿಲ್ಲ, ಪ್ರಯಾಣಿಕರ ಲಗೇಜ್‌, ಟಿಕೆಟ್ ತಪಾಸಣೆ ಮಾಡಿಲ್ಲ, ಮೊಬೈಲ್ನಲ್ಲಿ ಮಾತನಾಡುತ್ತಿದ್ದೀರಿ, ಶೌಚಾಲಯಕ್ಕೆ ಹೋಗಿದ್ದೀರಿ ಎಂದು ಕ್ಷುಲ್ಲಕ ಕಾರಣಕ್ಕೆ ಸಂಬಳ ಕಡಿತಗೊಳಿಸಲಾಗುತ್ತಿದೆ ಎಂದು ದೂರಲಾಗಿದೆ.

ಆರ್‌ಪಿಎಫ್‌ ಸಿಬ್ಬಂದಿಯನ್ನು ಹಗಲಿರುಳು ದುಡಿಸಿಕೊಳ್ಳುತ್ತಿರುವುದನ್ನು ಗಮನಿಸಿರುವ ನೈಋತ್ಯ ರೈಲ್ವೆ ಮಹಾ ಪ್ರಬಂಧಕರು ಪಿಸಿಎಸ್‌ಸಿ ಅವರಿಗೆ ಹಾಗೆ ನಡೆಸಿಕೊಳ್ಳದಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಮಾತ್ರ ತಮ್ಮ ಚಾಳಿ ಬಿಟ್ಟಿಲ್ಲ. ದೇಶದ ಗಡಿ ನಿಯಂತ್ರಣ ರೇಖೆಯಲ್ಲಿ ಅರೆಸೇನಾ ಪಡೆಗೆ ಇಲ್ಲದಂತಹ ಹಾಗೂ ದೇಶದ ಯಾವ ರೈಲ್ವೆ ವಿಭಾಗಗಳಲ್ಲೂ ಇಲ್ಲದಂತಹ ಡ್ಯೂಟಿಯನ್ನು ನೈಋತ್ಯ ರೈಲ್ವೆ ವಲಯದ ಸಿಬ್ಬಂದಿಯಿಂದ ಮಾಡಿಸಲಾಗುತ್ತಿದೆ ಎಂಬ ಗೋಳು ಅನೇಕ ಸಿಬ್ಬಂದಿಯದ್ದಾಗಿದೆ.

ಶಿವಶಂಕರ ಕಂಠಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.