ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವುದು ಉತ್ತಮ: ಶೆಟ್ಟರ್
Team Udayavani, Jan 26, 2022, 11:29 AM IST
ಹುಬ್ಬಳ್ಳಿ: ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವುದು ಉತ್ತಮ. ಇದು ಆಡಳಿತ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದಾಗುತ್ತದೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆ ಸಲುವಾಗಿ ಮುಖ್ಯಮಂತ್ರಿಯವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಆದರೆ ಇದರಿಂದ ಪಕ್ಷಕ್ಕೆ ಸ್ವಲ್ಪ ಹಿನ್ನಡೆಯಾಗುತ್ತದೆ. ಮುಂಬರುವ ಚುನಾವಣೆ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದರು.
ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಾವಾಗಲೂ ಈ ಮಾತು ಹೇಳಿಕೊಂಡು ಇರುತ್ತಾರೆ. ಆದರೆ ಕಾಂಗ್ರೆಸ್ ಜಿಲ್ಲಾ ಮುಂಖಡರು, ಶಾಸಕರು ಮತ್ತು ಮಾಜಿ ಶಾಸಕರು ಬಿಜೆಪಿ ಆಡಳಿತ ವ್ಯವಸ್ಥೆ ಮೆಚ್ಚಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಅಸ್ತಿತ್ವಕಳೆದುಕೊಂಡಿದೆ. ಆದರೆ ಯಾರಾದರೂ ಕಾಂಗ್ರೆಸ್ ಗೆ ಸೇರಿಕೊಂಡರೆ ಅವರಂಥ ಮೂರ್ಖರು ಯಾರು ಇಲ್ಲ ಎಂದರು.
ಇದನ್ನೂ ಓದಿ:ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಹುಳ ಬಿಡುವ ಕೆಲಸ ಮಾಡುತ್ತಿದ್ದಾರೆ. ಅವರು ಹೇಳುವಂತೆ ಕಾಂಗ್ರೆಸ್ ಗೆ ಯಾರು ಸೇರ್ಪಡೆಯಾಗುತ್ತಿದ್ದಾರೆಂಬ ಬಗ್ಗೆ ಧೈರ್ಯವಾಗಿ ಹೇಳಲಿ. ಕದ್ದು ಮುಚ್ಚಿ ಮಾಡುವುದು ಬೇಡ. ನೇರವಾಗಿ ಹೇಳಲಿ ಎಂದರು.
ಸೋನಿಯಾ ಗಾಂಧಿ, ರಾಹುಲ ಗಾಂಧಿ ಅವರ ಆಪ್ತರಾದ ಆರ್ ಪಿಎನ್ ಸಿಂಗ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎಂದು ಅರ್ಥ ಮಾಡಿಕೊಳ್ಳಬೇಕು. ಅಷ್ಟೇ ಅಲ್ಲ ಮುಂಬರುವ ದಿನಗಳಲ್ಲಿ ಆ ಪಕ್ಷ ಪೂರ್ತಿ ಅಸ್ತಿತ್ವ ಕಳೆದುಕೊಳ್ಳುತ್ತದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಮಾಡಲಿಲ್ಲ ಅಂದರೆ ಕೆಲ ಶಾಸಕರು ಕಾಂಗ್ರೆಸ್ ಹೋಗುತ್ತಾರಂತಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ರೀತಿ ಆಗುವುದಿಲ್ಲ. ರಾಜ್ಯದಲ್ಲಿ ಪಕ್ಷ ಸಂಘಟನಾತ್ಮಕವಾಗಿದೆ. ಇದು ಎಲ್ಲ ಶುದ್ಧ ಸುಳ್ಳು. ಮಣಿಪುರ, ಗೋವಾ, ಉತ್ತರ ಪ್ರದೇಶ, ಉತ್ತರಾಖಂಡ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ನಶಿಸಿಹೋಗುತ್ತದೆ. ಕಾಂಗ್ರೆಸ್ ಗೆ ಯಾರು ಹೋಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ