ಕಾಂಗ್ರೆಸ್ ನವರು ಕೂಸು ಹುಟ್ಟುವ ಮುಂಚೆಯೇ ಕುಲಾಯಿ ಹೊಲಿಸುತ್ತಿದ್ದಾರೆ

Team Udayavani, Dec 8, 2019, 12:16 PM IST

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ನವರು ಕೂಸು ಹುಟ್ಟುವ ಮುಂಚೆಯೇ ಕುಲಾಯಿ ಹೊಲಿಸುತ್ತಿದ್ದಾರೆ.  ಚುನಾವಣಾ ಫಲಿತಾಂಶ ಬರುವ ಮುಂಚಿಯೇ ಅವರು ಅಧಿಕಾರದ ಕನಸು ಕಾಣುತ್ತಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬಿಜೆಪಿ‌ ಸಾಂಸ್ಥಿಕ ಚುನಾವಣಾ ವೀಕ್ಷಕರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಈ ಹಿಂದೆ ಸಿದ್ಧರಾಮಯ್ಯ ಅವರು ನೀಡಿದಂತಹ ಯೋಜನೆಗಳು ಜನಸಾಮಾನ್ಯರಿಗೆ ಯಾವುದೂ ತಲುಪದೆ ಮಧ್ಯದಲ್ಲಿಯೇ ದರೋಡೆಯಾಗಿವೆ ಎಂದರು.

ಸಿದ್ಧರಾಮಯ್ಯ ಅವರಿಗೆ ಜನರ ನಾಡಿಮಿಡಿತವೇ ಗೊತ್ತಿಲ್ಲ. ಅಹಂಕಾರ, ಅಹಮ್ಮಿನಿಂದ ಮಾತನಾಡಿತ್ತಿದ್ದಾರೆ. ಸಿದ್ಧರಾಮಯ್ಯನವರ ನಾಯಕತ್ವ ಅಂತ್ಯಕಾಲಕ್ಕೆ ಬಂದಿದೆ ಎಂದರು.

ಉಪಚುನಾವಣಾ ಫಲಿತಾಂಶ ನಂತರ ಬಿಜೆಪಿ ಸರ್ಕಾರವೇ ಮುಂದುವರೆಯಲಿದೆ. ಸಿದ್ಧರಾಮಯ್ಯ ಮೊದಲು ನಿಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿ. ಅದನ್ನ ಬಿಟ್ಟು ಬಿಜೆಪಿ ಬಗ್ಗೆ ಸುಖಾಸುಮ್ಮನೇ ಮಾತನಾಡಬೇಡಿ ಎಂದು ಶೆಟ್ಟರ್ ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ