2023ರ ಚುನಾವಣೆಗೆ ಇನ್ನೂ ಸಮಯವಿದೆ, ಏನಾಗುತ್ತೋ ನೋಡೋಣ: ಜಗದೀಶ ಶೆಟ್ಟರ್
Team Udayavani, Sep 3, 2021, 12:08 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಕ್ಷದ ಆದೇಶ ಪಾಲಿಸುತ್ತೇವೆ. ಆದರೆ 2023ಕ್ಕೆ ಇನ್ನೂ ಕಾಲವಕಾಶವಿದೆ. ಅಲ್ಲಿವರೆಗೆ ಏನಾಗುತ್ತೋ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಪಾಲಿಕೆ ಚುನಾವಣೆಯಲ್ಲಿ ಮತದಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ನಿರ್ಧಾರಕ್ಕೆ ನಾವೆಲ್ಲ ಬದ್ದರಾಗಿರುತ್ತೇವೆ ಎಂದರು.
ಇದನ್ನೂ ಓದಿ:ಒಂದೇ ಮಾತಿನಲ್ಲಿ ರಾಜ್ಯ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ ಅಮಿತ್ ಶಾ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ವಯಂ ಪ್ರೇರಣೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನಿಡಿದ್ದಾರೆ ಎಂದು ಶಾ ಹೇಳಿದ್ದಾರೆ. ಪಕ್ಷದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ನಮ್ಮ ಅಭಿಪ್ರಾಯಗಳನ್ನು ಪಕ್ಷದ ವೇದಿಕೆಯಲ್ಲಿ ಯಾರಿಗೆ ಹೇಳಬೇಕೋ ಅವರಿಗೆ ಹೇಳಿದ್ದೇವೆ ಎಂದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 60 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.
ಪತ್ನಿ ಹಾಗೂ ಪುತ್ರನೊಂದಿಗೆ ಆಗಮಿಸಿ ಜಗದೀಶ ಶೆಟ್ಟರ್ ಅವರು ಮತದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ