ದಳಪತಿಗಳಿಂದ ಅಣಕು ಶವಯಾತ್ರೆ


Team Udayavani, May 18, 2018, 4:36 PM IST

18-may-19.jpg

ಹುಬ್ಬಳ್ಳಿ: ವಿದ್ಯುನ್ಮಾನ ಮತಯಂತ್ರದಲ್ಲಿ ದೋಷ ಹಾಗೂ ರಾಜ್ಯಪಾಲರ ಕ್ರಮ ಖಂಡಿಸಿ ಜೆಡಿಎಸ್‌ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ ರಾಜ್ಯಪಾಲರ ಪ್ರತಿಕೃತಿ ದಹಿಸಿದರು.

ಇಲ್ಲಿನ ಬಸವವನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಿದ ಕಾರ್ಯಕರ್ತರು ರಸ್ತೆತಡೆ ನಡೆಸಿದರು. ರಾಜ್ಯಪಾಲ ಹಾಗೂ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದರು. ರಾಜ್ಯಪಾಲರು ಸಂವಿಧಾನ ಉಲ್ಲಂ ಸಿದ್ದಾರೆಂದು ಆರೋಪಿಸಿ ರಾಜ್ಯಪಾಲರ ಪ್ರತಿಕೃತಿ ದಹಿಸಿದರು. ಅಲ್ಲಿಂದ ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಹು-ಧಾ ಕೇಂದ್ರ ವಿಧಾನಸಭ ಕ್ಷೇತ್ರದ ಜೆಡಿಎಸ್‌ ಪರಾಜಿತ ಅಭ್ಯರ್ಥಿ ರಾಜಣ್ಣ ಕೊರವಿ ಮಾತನಾಡಿ, ಚುನಾವಣಾ ಆಯೋಗ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ಕೇಂದ್ರ ಸರಕಾರದ ತಾಳಕ್ಕೆ ತಕ್ಕಂತೆ ಚುನಾವಣೆ ಮಾಡಲಾಗಿದೆ. ಇವಿಎಂ ಮತಯಂತ್ರದಲ್ಲಿ ದೋಷ ಕುರಿತು ಹಿಂದಿನಿಂದಲೂ ಆರೋಪಗಳು ಕೇಳಿ ಬರುತ್ತಿವೆ. ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಮತಯಂತ್ರದ ದೋಷ ಕಂಡು ಬಂದಿದ್ದು, ಮತಪತ್ರಗಳ ಮೂಲಕ ಮತ್ತೊಮ್ಮೆ ಚುನಾವಣೆ ನಡೆಯಬೇಕು ಎಂದರು.

ಬಹುಮತವಿರದ ಬಿಜೆಪಿಗೆ ಸರಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿರುವುದು ಸಂವಿಧಾನ ಬಾಹಿರ. ಬಹುಮತ ಹೊಂದಿರುವ ಕಾಂಗ್ರೆಸ್‌ -ಜೆಡಿಎಸ್‌ಗೆ ಅವಕಾಶ ನೀಡಬೇಕಿತ್ತು. ಆದರೆ ದೇಶದ ಇತರೆ ರಾಜ್ಯಗಳಲ್ಲಿ ನಡೆಯುತ್ತಿದ್ದ ನಿರಂಕುಶ ಪ್ರಭುತ್ವ ರಾಜ್ಯದಲ್ಲಿ ಆರಂಭವಾಗುತ್ತಿದ್ದು, ಬಿಜೆಪಿಯಿಂದ ಮತ್ತೆ ಕೆಟ್ಟ ಸಂಪ್ರದಾಯ ಒಳ್ಳೆಯ ಬೆಳವಣಿಗೆಯಲ್ಲ ಎಂದರು. ಮುಖಂಡರಾದ ನಾಗನಗೌಡ ಪಾಟೀಲ, ನವೀನ ಮುನಿಯಪ್ಪನವರ, ಅಫ್ರೆಜ್‌ ಮಂಚಿಕೊಪ್ಪ, ರವೀಂದ್ರ ಕಟ್ಟಿಮನಿ, ವಿನಾಯಕ ಗಾಡಿವಡ್ಡರ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.