ಸಿದ್ದರಾಮಯ್ಯಗೆ ಸಿಡಿ ಮಾಡಿಸುವ ಮತ್ತು ಬಿಡುಗಡೆ ಮಾಡುವ ಚಾಳಿ
Team Udayavani, Nov 5, 2019, 12:17 PM IST
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಿಡಿ ಮಾಡಿಸುವ ಹಾಗೂ ಬಿಡುಗಡೆ ಮಾಡಿಸುವ ಚಾಳಿಯಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಾಗ್ದಾಳಿ ನಡೆಸಿದರು.
ನಗರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಲಿಂಗಾಯತರ ಬಗ್ಗೆ ಮಾತನಾಡಿದ್ದನ್ನು ಹಾಗೂ ಕುಮಾರಸ್ವಾಮಿ ಒಕ್ಕಲಿಗರ ಬಗ್ಗೆ ಮಾತನಾಡಿದ್ದನ್ನು ಸಿಡಿ ಮಾಡಿಸಿ ಬಿಡುಗಡೆಗೊಳಿಸಿದ್ದು ಸಿದ್ದರಾಮಯ್ಯ ಎಂದು ಆರೋಪಿಸಿದರು.
ಅವರು ತಮ್ಮಂತೆ ಬೇರೆಯವರು ಎಂದು ತಿಳಿದಿದ್ದಾರೆ. ಸಿದ್ದರಾಮಯ್ಯ ಅವರ ಈ ವರ್ತನೆ ಅವರ ಘನತೆಗೆ ಸರಿಯಾದದ್ದು ಅಲ್ಲ. ನನಗೂ ಹುಬ್ಬಳ್ಳಿ ಕೋರ್ ಕಮೀಟಿ ಸಿಡಿಗೂ ಯಾವುದೇ ಸಂಬಂಧ ಇಲ್ಲ. ನಾನೂ ಹುಬ್ಬಳ್ಳಿ ಸಭೆಯಲ್ಲಿ ಹಾಜರಿದ್ದೆ. ಇದರಲ್ಲಿ ಯಾವುದೇ ಶಾಸಕರ ಕೈವಾಡ ಇಲ್ಲ. ಅಂದಿನ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನರ್ಹಗೊಂಡ ಶಾಕರಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿದೆ ಎಂದರಷ್ಟೇ ಎಂದು ಬಿಎಸ್ ವೈ ಆಡಿಯೋ ಬಗ್ಗೆ ಮಾತನಾಡಿದರು.
ಮುಂದುವರೆದು ಮಾತನಾಡಿದ ಸವದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಹ ಸಿಡಿ ಬಗ್ಗೆ ವಿಚಾರಿಸಿಲ್ಲ. ಸರ್ಕಾರದ ನಿತ್ಯದ ವರದಿ ಕೇಳಿದ್ದಾರಷ್ಟೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ