ಅಧಿಕಾರಿಗಳು ಒಂದೇ ಕುಟುಂಬದವರಂತೆ ಕೆಲಸ ನಿರ್ವಹಿಸಲಿ

Team Udayavani, May 24, 2018, 5:41 PM IST

24-may-20.jpg

ಬೀಳಗಿ: ಸಂವಿಧಾನದ ಪ್ರಮುಖ ಅಂಗಗಳಲ್ಲಿ ಆಡಳಿತ ಯಂತ್ರ ಪ್ರಮುಖ ಪಾತ್ರ ವಹಿಸುತ್ತದೆ. ಎಲ್ಲ ಅಧಿಕಾರಿಗಳು ಒಂದೇ ಕುಟುಂಬದವರಂತೆ ಕೆಲಸ ಮಾಡುವ ಮೂಲಕ ಮತಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಬೇಕು. ಅಭಿವೃದ್ಧಿಗೆ
ಅಧಿಕಾರಿಗಳೇ ಆಧಾರ ಸ್ಥಂಭವಾಗಿದ್ದಾರೆ ಎಂದು ಶಾಸಕ ಮುರುಗೇಶ ನಿರಾಣಿ ಹೇಳಿದರು.

ಪಟ್ಟಣದ ತಾಪಂ ಸಭಾ ಭವನದಲ್ಲಿ ಬುಧವಾರ ಬೀಳಗಿ ಮತಕ್ಷೇತ್ರ ವ್ಯಾಪ್ತಿಯ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮತಕ್ಷೇತ್ರದ ರೈತರು, ನೇಕಾರರು, ಮೀನುಗಾರರು, ಕೃಷಿ ಕೂಲಿ ಕಾರ್ಮಿಕರು, ಕೂಲಿ ಕಾರ್ಮಿಕರು ಸೇರಿದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಯೋಜನೆಗಳನ್ನುತಲುಪಿಸುವ ನಿಟ್ಟಿನಲ್ಲಿ ಕ್ಷೇತ್ರದ ಎಲ್ಲ ಅಧಿಕಾರಿ ವರ್ಗ ಪ್ರಾಮಾಣಿಕ ಸೇವೆ ಸಲ್ಲಿಸಬೇಕು. ನಾನು ಯಾವುದೇ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡಲಾರೆ. ವರ್ಗಾವಣೆಗೆ ಕೈ ಹಾಕಲಾರೆ ಎಂದರು.

 ಕಾನೂನು ಚೌಕಟ್ಟಿನ ಜತೆಗೆ ಕೆಲವೊಂದು ಬಾರಿ ಮಾನವೀಯತೆಯ ಆಧಾರದ ಮೇಲೆ ಜನತೆಗೆ ಅಧಿ ಕಾರಿಗಳು ಸ್ಪಂದಿಸಬೇಕಾಗುತ್ತದೆ. ಕಾರಣ, ಅಧಿಕಾರಿಗಳು ಜನಸಾಮಾನ್ಯರ ಜತೆಗೆ ತಾಳ್ಮೆಯಿಂದ ವ್ಯವಹರಿಸುವ ಕೆಲಸ ಮಾಡಬೇಕು. ಮತಕ್ಷೇತ್ರದ ಹಲವಾರು ಇಲಾಖೆಗಳ ಕುರಿತು ಈ ಸಂದರ್ಭ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಕೆಲ ಇಲಾಖೆಗಳ ಅಧಿಕಾರಿಗಳಿಗೆ ತಮ್ಮ ಇಲಾಖೆಯ ಕುರಿತಾಗಿಯೇ ಸ್ಪಷ್ಟ ಮಾಹಿತಿ ಇರದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣದ ಪಾಲಿಟೆಕ್ನಿಕ್‌ ಕಾಲೇಜು ಕಟ್ಟಡ ಪೂರ್ಣಗೊಂಡಿದೆ. ಇನ್ನಷ್ಟು ಸಣ್ಣ-ಪುಟ್ಟ ಕೆಲಸಗಳ ಜತೆಗೆ ಹಳೆಯ ಕಾಲೇಜಿನಲ್ಲಿನ ವಿದ್ಯಾರ್ಥಿಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಹದಿನೈದು ದಿನದಲ್ಲಿ ಕ್ರಮ ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆಯ ಎಇಇ ಎಂ.ಟಿ.ಮೇಟಿ ಅವರಿಗೆ ಸೂಚಿಸಿದರು. ಶಿಕ್ಷಣ, ಆರೋಗ್ಯ, ತೋಟಗಾರಿಕೆ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಸ್ಥಿಗತಿಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ಬೀಳಗಿ ತಾಪಂ ಇಒ ಎಂ.ಕೆ.ತೊದಲಬಾಗಿ, ಬಾದಾಮಿ ತಾಪಂ ಇಒ ಭೀಮಪ್ಪ ಲಾಳಿ, ಬಾಗಲಕೋಟೆ ತಾಪಂ ಇಒ ರವಿ ಬಂಗಾರೆಪ್ಪನವರ, ಜಿಪಂ ಎಇಇ ಮಹೇಶಕಕರಡ್ಡಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.