ಶರಣರ ವಚನ ಸಾಹಿತ್ಯ ಬದುಕಿಗೆ ದಾರಿದೀಪ: ತಿಮ್ಮಪ್ಪ 


Team Udayavani, Aug 8, 2018, 5:40 PM IST

8-agust-23.jpg

ಹಾವೇರಿ: ವಚನ ಸಾಹಿತ್ಯವನ್ನು ಇನ್ನಷ್ಟು ಹೊಸ ರೀತಿಯಲ್ಲಿ ಅಧ್ಯಯನ ಮಾಡಿ ಜನರಿಗೆ ಮುಟ್ಟಿಸುವ ಕೆಲಸವಾಗಬೇಕಾಗಿದೆ ಎಂದು ಶತಾಯುಷಿ, ನಿವೃತ್ತ ಶಿಕ್ಷಕ ಎಂ.ಬಿ. ಹಿರೇಮಠ ಅಭಿಪ್ರಾಯಿಸಿದರು. ಸ್ಥಳೀಯ ಹುಕ್ಕೇರಿಮಠ ದಾಸೋಹ ಮಂದಿರದಲ್ಲಿ ಏರ್ಪಡಿಸಿದ್ದ ಕರ್ನಾಟಕ ವಚನ ಸಾಹಿತ್ಯ ಮತ್ತು ಸಂಶೋಧನ ಪರಿಷತ್ತಿನ ಉದ್ಘಾಟನೆ ಮತ್ತು ‘ಗಮನ- 75 ಗೀತಗಾಯನ’ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕವಿ ಗಂಗಾಧರ ನಂದಿ ಅವರು ನನ್ನ ಶಿಷ್ಯ. ಅವರು ಬೆಳೆದ ರೀತಿ ಮತ್ತು ಬರೆದ ಸಾಹಿತ್ಯ, ಎಂಥ ಗುರುವಿಗೂ ಅಭಿಮಾನ ತರುವ ವಿಷಯ. ತಮ್ಮ ತಂದೆ-ತಾಯಿಯ ಜೊತೆಗೆ ಗುರುಗಳನ್ನು ನೆನೆದು ಸನ್ಮಾನಿಸಿರುವುದು ಶ್ಲಾಘನೀಯ ಎಂದರು. ಅಧ್ಯಕ್ಷತೆ ವಹಿಸಿದ್ದ ವಚನ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ ತಿಮ್ಮಪ್ಪ ಮಾತನಾಡಿ, ರಾಜ್ಯದ ಎಲ್ಲ 30 ಜಿಲ್ಲೆಗಳಲ್ಲಿ ವಚನ ಸಾಹಿತ್ಯ ಪರಿಷತ್ತಿನ ಘಟಕಗಳು ಸ್ಥಾಪನೆಯಾಗಿದ್ದು, 134 ತಾಲೂಕು ಕೇಂದ್ರಗಳಲ್ಲಿಯೂ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಸಂದರ್ಭಕ್ಕೆ ಶರಣರ ವಚನ ಸಾಹಿತ್ಯ ದಾರಿ ದೀಪಗಳಾಗಿದ್ದು ಅದರ ಅಧ್ಯಯನ ಮತ್ತು ಜನರಿಗೆ ಮುಟ್ಟಿಸುವ ಉದ್ದೇಶ ಪರಿಷತ್ತಿನದ್ದಾಗಿದೆ ಎಂದರು.

ಈ ಸಂದರ್ಭದಲ್ಲಿ ಗಂಗಾಧರ ನಂದಿ ಅವರಿಗೆ 75 ವರ್ಷ ಪೂರೈಸಿದರ ಪ್ರಯುಕ್ತ ಲೇಖಕರನ್ನು ಅನೇಕ ಸಂಘ ಸಂಸ್ಥೆಗಳು, ಗಣ್ಯರು ಅವರ ತಂದೆ-ತಾಯಿಯ ಭಾವಚಿತ್ರಕ್ಕೆ ಹಾರ-ಶಾಲು ಹಾಕುವ ಮೂಲಕ ಸನ್ಮಾನಿಸಿದರು. ಕವಿ ಗಂಗಾಧರ ನಂದಿ ಮಾತನಾಡಿ, ಯಾವ ಫಲಾಪೇಕ್ಷೆ ಇಲ್ಲದೇ ತಂದೆ-ತಾಯಿಯರ ಕೃಪೆಯಿಂದ ಸ್ವಲ್ಪ ಮಟ್ಟಿಗೆ ಸಾಧನೆ ಮಾಡಿರುವೆ. ಗುರುಗಳಾದ ಎಂ.ಬಿ. ಹಿರೇಮಠ ಮಾರ್ಗದರ್ಶನ, ಗುರುಕೃಪೆಯು ನನ್ನನ್ನು ಬೆಳೆಸಿದೆ ಎಂದರು.

ಸಮಾರಂಭವನ್ನುದ್ದೇಶಿಸಿ ಸಾರ್ವಜನಿಕ ಶಿಕ್ಷಣ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಮಂಜುನಾಥ ತಂಬಾಕದ, ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ, ಪ್ರೊ| ಸಿ.ಸಿ. ಪ್ರಭುಗೌಡರ, ವಿಜಯರೂಪ ತಂಬಾಕದ, ಬಿ. ಬಸವರಾಜ ಮುಂತಾದವರು ಮಾತನಾಡಿದರು. ಈ ಸಂದರ್ಭದಲ್ಲಿ 46 ಗಣ್ಯರನ್ನು ಸನ್ಮಾನಿಸಲಾಯಿತು. ಕವಿ ಗಂಗಾಧರ ನಂದಿಯವರು ರಚಿಸಿದ ಕಾವ್ಯ ಗಾಯನವನ್ನು 18 ಗಾಯಕರು ಹಾಡಿದರು. ಬಿ. ಬಸವರಾಜಪ್ಪ ಸ್ವಾಗತಿಸಿದರು. ಪುಷ್ಟಾ ಶೆಲವಡಿಮಠ ಕಾರ್ಯಕ್ರಮ ನಿರ್ವಹಿಸಿದರು. ಜಿ.ಎಂ. ಓಂಕಾರಣ್ಣನವರ ವಂದಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.