ಲಾಕ್‌ಡೌನ್ ನಿಯಮ ಸಡಿಲಿಕೆ: ಕಟ್ಟಡ ಕಾಮಗಾರಿಗಳು ಆರಂಭ
Team Udayavani, Apr 29, 2020, 2:09 PM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಲಾಕ್‌ಡೌನ್ ನಿಯಮಗಳಲ್ಲಿ ಒಂದಿಷ್ಟು ಸಡಿಲಗೊಳಿಸಿದ್ದರಿಂದ ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳು ನಿಧಾನಕ್ಕೆ ಆರಂಭಗೊಳ್ಳತೊಡಗಿವೆ.
ಜಿಲ್ಲೆಯಲ್ಲಿ ಕೆಲವೊಂದು ಕೆಲಸ ಕಾರ್ಯಗಳಿಗೆ ಸಡಿಲಿಕೆ ನೀಡಲಾಗಿದ್ದು, ಹಳೇ ಹುಬ್ಬಳ್ಳಿ ಭಾಗದಲ್ಲಿ ಕಟ್ಟಡ ಕಾಮಗಾರಿಗಳು, ಸರಕಾರಿ ಸೇತುವೆ ಕಾಮಗಾರಿಗಳು, ರಸ್ತೆ ಕಾಮಗಾರಿಗಳು ಆರಂಭಗೊಳ್ಳುತ್ತಿವೆ. ಕಳೆದ ಒಂದೂವರೆ ತಿಂಗಳಿಂದ ಸಂಪೂರ್ಣ ಕೆಲಸ ಕಾರ್ಯಗಳು ಇಲ್ಲದೇ ಎಲ್ಲವೂ ಸ್ತಬ್ಧಗೊಂಡಿತ್ತು. ಇದೀಗ ಜಿಲ್ಲಾಡಳಿತ ನೀಡಿರುವ ಸಡಿಲಿಕೆಯಿಂದ ಕಟ್ಟಡ ಕಾರ್ಮಿಕರು ತಮ್ಮ ದಿನನಿತ್ಯದ ಕಾರ್ಯಗಳಿಗೆ ಆಗಮಿಸುತ್ತಿದ್ದಾರೆ. ಆದರೆ ಅಂತರ್ ಜಿಲ್ಲಾ ಸಂಚಾರಕ್ಕೆ ಅವಕಾಶ ನೀಡದೇ ಇರುವುದು ಹಾಗೂ ವಾಹನಗಳಸಂಚಾರಕ್ಕೆ ಆಸ್ಪದ ನೀಡದೇ ಇರುವುದು ನೆರೆಯ ಜಿಲ್ಲೆಗಳಿಂದ ಹಾಗೂ ಗ್ರಾಮೀಣ ಭಾಗದ ಕಾರ್ಮಿಕರ ಆಗಮನಕ್ಕೆ ತೊಂದರೆ ಕಂಡುಬರುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾವಿರಾರು ಕಟ್ಟಡ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಮತ್ತೆ ಆರಂಭದ ಲಕ್ಷಣಗಳು ಕಂಡುಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ