ತಾಂವಶಿ ಶಾಲೆಗೆ ಬೆಂಕಿಯಿಟ್ಟ  ಭಗ್ನ  ಪ್ರೇಮಿ ಕಂಬಿ ಹಿಂದೆ

Team Udayavani, Jul 10, 2018, 5:36 PM IST

10-july-24.jpg

ಬೆಳಗಾವಿ/ಅಥಣಿ: ಆತನಿಗೆ ಶಾಲಾ ದಿನಗಳಿಂದಲೂ ಬಾಲಕಿಯ ಮೇಲೆ ಪ್ರೇಮ. ಆದರೆ ಅದು ಏಕಮುಖೀ. ಈ ಪ್ರೇಮ ಜ್ವಾಲೆಯಿಂದ ಆತ ಓದಿದ ಶಾಲೆಗೇ ಬೆಂಕಿಯಿಟ್ಟ,. ಶಾಲೆಗೆ ಬೆದರಿಕೆಯ ಪತ್ರಗಳನ್ನೂ ಬರೆದ! ಅಥಣಿ ತಾಲೂಕಿನ ತಾಂವಶಿ ಗ್ರಾಮದ ಯುವಕ ಉಮೇಶ ಅಚಿತನಳ್ಳಿ (19) ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿವರೆಗೆ ಓದಿದ್ದು, ಪರೀಕ್ಷೆಯಲ್ಲಿ ಫೇಲಾಗಿದ್ದಾನೆ. ಆದರೆ ಪ್ರೀತಿಯಲ್ಲೂ ಫೇಲಾಗಿದ್ದರಿಂದ ಖನ್ನತೆಗೊಳಗಾಗಿ ಕಲಿತ ಶಾಲೆಗೆ ಬೆಂಕಿ ಇಟ್ಟಿದ್ದ. ಇದು ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್‌ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿತ್ತು. ಆದರೆ ಇದೀಗ ಈ ಯುವಕ ಪೊಲೀಸರ ಅತಿಥಿಯಾಗಿದ್ದು, ಸಮಸ್ಯೆಗೊಂದು ಅಂತ್ಯ ಕಂಡಂತಾಗಿದೆ.

ಖನ್ನತೆಗೊಳಗಾಗಿದ್ದ ಯುವಕ: ಶಾಲಾ ದಿನಗಳಿಂದಲೂ ಇದೇ ಶಾಲೆಯ ಬಾಲಕಿಯನ್ನು ಈತ ಇಷ್ಟಪಡುತ್ತಿದ್ದ. ಆದರೆ ಅದು ಒನ್‌ ಸೈಡೆಡ್‌ ಲವ್‌. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಆತ ಅನುತ್ತೀರ್ಣಗೊಂಡರೆ ಆಕೆ ಪಾಸಾಗಿ ಕಾಲೇಜು ಮೆಟ್ಟಿಲೇರಿದ್ದಳು. ಆದರೆ ಈತ ಶಾಲೆ ಬಿಟ್ಟು ಎರಡ್ಮೂರು ವರ್ಷ ಖಾಲಿ ಅಲೆಯುತ್ತಿದ್ದ. ಈ ಅವಧಿಯಲ್ಲಿ ಆತನಿಗೆ ಖನ್ನತೆ ಜೊತೆಯಾಗಿತ್ತು. 

ಅದೇ ಖನ್ನತೆಯಲ್ಲಿ ಕಲಿತ ಗ್ರಾಮದ ಪ್ರೌಢಶಾಲೆಗೆ ಬೆಂಕಿ ಕೂಡ ಇಟ್ಟಿದ್ದನು. ಇದರಿಂದ ಶಾಲಾ ಕೊಠಡಿಯಲ್ಲಿದ್ದ ಕೆಲ ಪ್ರಮುಖ ದಾಖಲೆಗಳು, ಪೀಠೊಪಕರಣಗಳು ಸುಟ್ಟು ಕರಕಲಾಗಿ ಗ್ರಾಮಸ್ಥರು ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಘಟನೆ ಕಗ್ಗಂಟಾಗಿತ್ತು. ಬೆಂಕಿ ಹಚ್ಚುವ ಮುನ್ನ ಶಾಲೆಯ ಗೋಡೆ ಮೇಲೆ ಯುವತಿಯ ಹೆಸರು ಬರೆದು ಆಕೆ ತನ್ನ ಸಂಬಂಧಿಕ ಯುವಕನನ್ನು ಪ್ರೀತಿಸುತ್ತಿದ್ದಾಳೆ. ಅವರಿಬ್ಬರ ವಿವಾಹ ಮಾಡಬೇಕು ಇಲ್ಲದಿದ್ದರೆ ಮುಂದೆ ಅನಾಹುತ ಆಗಲಿದೆ ಎಂದು ಯುವತಿಯ ಅಪಪ್ರಚಾರ ಮಾಡಿ ಬೆಂಕಿ ಹಚ್ಚಿದ ಪ್ರಕರಣದ ವಿಷಯಾಂತರಕ್ಕೆ ಯತ್ನಿಸಿದ್ದನು.

ಪೊಲೀಸರಿಗೇ ಸವಾಲು ಹಾಕಿದ್ದ: ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದನ್ನು ಗಮನಿಸಿದ ಉಮೇಶ ಮೂರ್‍ನಾಲ್ಕು ದಿನಗಳ ಹಿಂದೆ ಶಾಲೆಗೇ ಐದು ಪುಟಗಳ ಅನಾಮಧೇಯ ಪತ್ರ ಬರೆದು ಬೆದರಿಕೆ ಹಾಕಿದ್ದನು. ಬೆಂಕಿ ಹಚ್ಚಿದ್ದು ನಾನು, ಅಮಾಯಕರನ್ನು ಬಂಧಿಸಿ ಕಿರುಕುಳ ಕೊಡುವುದು ಬೇಡ. ಶಿಕ್ಷಣ ಇಲಾಖೆ ಹಾಗೂ ಪೊಲೀಸ್‌ ಇಲಾಖೆಗೆ ತಾಕತ್ತಿದ್ದರೆ ನನ್ನನ್ನು ಬಂಧಿಸಬೇಕು ಎನ್ನುವ ಸವಾಲು ಬೇರೆ.

ಉಮೇಶ ಪ್ರೀತಿಸುತ್ತಿದ್ದ ಯುವತಿಯ ನಿಶ್ಚಿತಾರ್ಥ ಆಗಿತ್ತು. ವಿವಾಹ ದಿನಾಂಕ ಕೂಡ ನಿಗದಿಯಾಗಿತ್ತು. ಇದರಿಂದ ಮತ್ತಷ್ಟುನೊಂದಿದ್ದ ಯುವಕ ಶಾಲಾ ದಿನಗಳನ್ನು ನೆನಪಿಸಿ ಶಾಲೆಯಲ್ಲಿ ಬಂದು ಕೂರುವುದನ್ನು ಮಾಡುತ್ತಿದ್ದನು ಎಂದು ಪೊಲೀಸರ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ.

ಭಗ್ನ ಪ್ರೇಮಿ ಸಿಕ್ಕಿದ್ದು ಹೇಗೆ?: ಶಾಲೆಗೆ ಬೆಂಕಿ ಹಚ್ಚಿದವನನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಿನ ವಿಷಯವಾಗಿತ್ತು. ತಾಂವಶಿ ಗ್ರಾಮದಲ್ಲಿ ಶೋಧ ನಡೆಸುತ್ತಿದ್ದಾಗ ಗ್ರಾಮದ ಚಿಕ್ಕ ಹುಡುಗನ ಎದುರು ತನ್ನ ಪ್ರೇಮ ಹಾಗೂ ಶಾಲೆಗೆ ಬೆಂಕಿ ಹಚ್ಚಿರುವ ಬಗ್ಗೆ ಹೇಳಿಕೊಂಡಿದ್ದನು. ಪೊಲೀಸರು ಗ್ರಾಮದಲ್ಲಿ ತನಿಖೆ ಮುಂದುವರಿಸಿದಾಗ ಆ ಬಾಲಕ ಪೊಲೀಸರ ಎದುರು ವಿಷಯ ತಿಳಿಸಿದಾಗ ಭಗ್ನ ಪ್ರೇಮಿಯ ಕೃತ್ಯ ಬಯಲಾಗಿದೆ. ಭಗ್ನ ಪ್ರೇಮಿಯ ಮನೆಯಲ್ಲಿ ಎರಡು ಪ್ರೇಮ ಪತ್ರಗಳು ಹಾಗೂ ಶಾಲೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದ ಪತ್ರಗಳು ಪತ್ತೆಯಾಗಿವೆ. ಬೆದರಿಕೆ ಪತ್ರದಲ್ಲಿನ ಕೈ ಬರಹ ಹೋಲಿಕೆ ಆಗುತ್ತಿದ್ದಂತೆ ಪೊಲೀಸರು ಉಮೇಶನನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.