ಪಂ| ನಿತ್ಯಾನಂದಗೆ ಮನಸೂರ ಪ್ರಶಸ್ತಿ  ಪ್ರದಾನ


Team Udayavani, Jan 2, 2022, 8:50 PM IST

ಜಹಗ್ದಸಅ

ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ| ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ವತಿಯಿಂದ ಡಾ| ಮಲ್ಲಿಕಾರ್ಜುನ ಮನಸೂರ 111ನೇ ಜನ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಹಾಗೂ ಸಂಗೀತೋತ್ಸವ ನಗರದ ಸೃಜನಾ ರಂಗಮಂದಿರದಲ್ಲಿ ಶನಿವಾರ ಜರುಗಿತು.

ಹಿಂದೂಸ್ತಾನಿ ಸಂಗೀತಗಾರರಾದ ಮುಂಬೈನ ಪಂ| ನಿತ್ಯಾನಂದ ಹಳದಿಪುರ ಅವರಿಗೆ 1 ಲಕ್ಷ ನಗದು ಒಳಗೊಂಡ ರಾಷ್ಟ್ರೀಯ ಪ್ರಶಸ್ತಿ ಹಾಗೂ 25 ಸಾವಿರ ನಗದು ಒಳಗೊಂಡ ಯುವ ಪ್ರಶಸ್ತಿಯನ್ನು ಧಾರವಾಡದ ಯುವ ಗಾಯಕಿ ಶಿವಾನಿ ಮಿರಜಕರ ಅವರಿಗೆ ಟ್ರಸ್ಟ್‌ ಅಧ್ಯಕ್ಷ ಡಿಸಿ ನಿತೇಶ ಪಾಟೀಲ ಅವರು ಪ್ರದಾನ ಮಾಡಿದರು. ಅತಿಥಿಯಾಗಿದ್ದ ಪದ್ಮಶ್ರೀ ಪುರಸ್ಕೃತ ಪಂ| ಎಂ.ವೆಂಕಟೇಶಕುಮಾರ ಮಾತನಾಡಿ, ಸಂಗೀತ ಕ್ಷೇತ್ರದಲ್ಲಿ ಡಾ| ಮನಸೂರರ ಕೊಡುಗೆ ಅಪಾರ. ಅವರ ಹೆಸರಿನಲ್ಲಿ ಟ್ರಸ್ಟ್‌ ಸ್ಥಾಪಿಸಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ.

ಈ ಪರಂಪರೆ ನಿರಂತರ ಸಾಗುವುದರ ಜತೆಗೆ ಯುವ ಪೀಳಿಗೆಗೆ ಮನಸೂರರನ್ನು ಪರಿಚಯಿಸುವ ಅಗತ್ಯವಿದೆ ಎಂದರು. ದೇಶ-ವಿದೇಶದಲ್ಲಿಯೇ ಧಾರವಾಡಕ್ಕೆ ವಿಶಿಷ್ಟ ಸ್ಥಾನವಿದ್ದು, ಸಾಹಿತ್ಯ, ಸಂಗೀತ ಹಾಗೂ ಲಲಿತಕಲೆಗಳಿಗೆ ಹೆಸರುವಾಸಿಯಾಗಿದೆ. ಇಲ್ಲಿರುವಷ್ಟು ಟ್ರಸ್ಟ್‌ ಯಾವ ಜಿಲ್ಲೆಯಲ್ಲೂ ಇಲ್ಲ. ಇದು ಈ ಕ್ಷೇತ್ರಗಳಲ್ಲಿ ಇಲ್ಲಿಯವರ ಸಾಧನೆಗೆ ಹಿಡಿದ ಕೈಗನ್ನಡಿ. ಕಲಾವಿದರು ಎಂದಿಗೂ ಪ್ರಶಸ್ತಿ ಬಯಸುವುದಿಲ್ಲ. ಅವರ ಸಾಧನೆ ಗುರುತಿಸಿ ಪ್ರಶಸ್ತಿ ಅರಸಿಕೊಂಡು ಬರುತ್ತದೆ ಎಂದು ಹೇಳಿದರು.

ಯುವ ಗಾಯಕಿ ಶಿವಾನಿ ಮಿರಜಕರ ಮಾತನಾಡಿ, ನನ್ನ ಸಂಗೀತ ಜೀವನ ಡಾ| ಮನಸೂರರ ಪ್ರಶಸ್ತಿಯಿಂದ ಆರಂಭಗೊಂಡಿದ್ದು ಸಂತಸ ತಂದಿದೆ. ಈ ಪ್ರಶಸ್ತಿಯು ಜವಾಬ್ದಾರಿ ಹೆಚ್ಚಿಸಿದೆ ಎಂದರು. ಬಾಬುರಾವ್‌ ಹಾನಗಲ್‌, ನೀಲಾ ಕೊಡ್ಲಿ, ಎಸಿ ಗೋಪಾಲಕೃಷ್ಣ ಬಿ., ಮಂಜುಳಾ ಯಲಿಗಾರ ಇನ್ನಿತರರಿದ್ದರು. ನಂತರ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಾದ ಪಂ| ನಿತ್ಯಾನಂದ ಹಳದಿಪುರ ಅವರಿಂದ ಕೊಳಲು ವಾದನ ಹಾಗೂ ಶಿವಾನಿ ಮಿರಜಕರ ಗಾಯನ ನಡೆಯಿತು.

 

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.