ತೋಟಗಾರಿಕಾ ಬೆಳೆಗಾರರಿಗೆ ಗರಿಷ್ಠ 15 ಸಾವಿರ ಪರಿಹಾರ

Team Udayavani, Jun 10, 2020, 11:00 AM IST

ತೋಟಗಾರಿಕಾ ಬೆಳೆಗಾರರಿಗೆ ಗರಿಷ್ಠ 15 ಸಾವಿರ ಪರಿಹಾರ

ಹುಬ್ಬಳ್ಳಿ: ಲಾಕ್‌ಡೌನ್‌ದಿಂದ ಹಣ್ಣು ಮತ್ತು ತರಕಾರಿಗಳನ್ನು ಬೆಳೆದು ನಷ್ಟ ಹೊಂದಿದ ರೈತರಿಗೆ ತೋಟಗಾರಿಕೆ ಇಲಾಖೆ ವತಿಯಿಂದ ಪರಿಹಾರ ಧನ ನೀಡಲಾಗುತ್ತಿದೆ. ಪ್ರತಿ ಹೆಕ್ಟೇರ್‌ ಗೆ 15,000ರೂ. ನಿಗದಿಪಡಿಸಲಾಗಿದ್ದು, ಗರಿಷ್ಠ 1 ಹೆಕ್ಟೇರ್‌ಗೆ ಪರಿಹಾರ ನೀಡಲಾಗುವುದು.

ಬಾಳೆ, ಪಪ್ಪಾಯ, ಅಂಜೂರ, ಕಲ್ಲಂಗಡಿ ಮತ್ತು ಕರಬೂಜ, ತರಕಾರಿ ಬೆಳೆಗಳಾದ ಟೊಮೆಟೊ, ಹಸಿ ಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಗುಂಬಳ, ಬೂದುಗುಂಬಳ, ಗಜ್ಜರಿ, ಈರುಳ್ಳಿ ಮತ್ತು ಡೊಣ್ಣಮೆಣಸಿನಕಾಯಿ ಬೆಳೆದ ರೈತರು ಇದರ ಸದುಪಯೋಗ ಪಡೆಯಬಹುದು. 2019-20ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಬೆಳೆ ಸಮೀಕ್ಷೆ ಆಧಾರದ ಮೇಲೆ ಫಲಾನುಭವಿಯ ಆಯ್ಕೆ ಮಾಡಲಾಗುವುದು. ಬಾಳೆ ಹಾಗೂ ಈರುಳ್ಳಿ ಬೆಳೆಗೆ ಸಂಬಂಧಿಸಿದಂತೆ ಮಾರ್ಚ್‌ 2ನೇ ವಾರದ ನಂತರ ಕಟಾವಿಗೆ ಖರೀದಿಸುವ ಫಸಲಿಗೆ ಮಾತ್ರ ಪರಿಹಾರ ನೀಡಲಾಗುವುದು. ಕಲ್ಲಂಗಡಿ ಮತ್ತು ಕರಬೂಜಗಳು ಬೇಸಿಗೆ ಬೆಳೆಯಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ಇವು ನಮೂದು ಆಗಿರದಿದ್ದರೆ, ನಿಗದಿತ ಅರ್ಜಿ ಜತೆಗೆ 2 ಫೋಟೋ, ಹೊಲದ ಉತಾರ, ಬ್ಯಾಂಕ್‌ ಪಾಸ್‌ ಪುಸ್ತಕ, ಆಧಾರ ಕಾರ್ಡ್‌ ಪ್ರತಿ ಹಾಗೂ ಜಂಟಿ ಖಾತೆ ಇದ್ದಲ್ಲಿ ಮಾತ್ರ 20 ರೂ. ಬಾಂಡ್‌ ಪೇಪರ್‌ ನಲ್ಲಿ ನೋಟರಿ ಅವರಿಂದ ದೃಢೀಕರಿಸಿದ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಜೂನ್‌ 20 ಅಂತಿಮ ದಿನವಾಗಿದೆ. ಹೀಗೆ ಸಲ್ಲಿಸಿದ ಅರ್ಜಿಗಳನ್ನು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆ ಕಚೇರಿ ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ವಿಜಯ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.