ಸಚಿವ ಖಾದರ್‌ ಎದುರು ಅಲ್ಪಸಂಖ್ಯಾತರ ಅಸಮಾಧಾನ

Team Udayavani, May 5, 2019, 10:53 AM IST

hub-2

ಕುಂದಗೋಳ: ಸ್ಥಳೀಯ ವಿಧಾನಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣಕ್ಕೆ ಶನಿವಾರ ಆಗಮಿಸಿದ್ದ ಸಚಿವ ಯು.ಟಿ. ಖಾದರ್‌ ಎದುರು ಅಲ್ಪಸಂಖ್ಯಾತರ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು.

ಪಟ್ಟಣದ ಅಜೀಜ್‌ ಕ್ಯಾಲಕೊಂಡ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಪಂ ಅಧ್ಯಕ್ಷ ಹಾಸಂಬಿ ಛಡ್ಡಿ ಅವರ ಪುತ್ರ ಯುಸೂಪ್‌ ಛಡ್ಡಿ ಮಾತನಾಡಿ, ಇಲ್ಲಿಯವರಿಗೂ ಪಕ್ಷದ ಯಾವ ಕೆಲಸ ಕಾರ್ಯಗಳಿಗೂ ಕರೆದಿಲ್ಲ. ನಮಗೆ ಯಾವ ಜವಾಬ್ದಾರಿ ವಹಿಸುತ್ತಿಲ್ಲ. ಪಪಂ ಸದಸ್ಯ ಹಾಗೂ ಅಧ್ಯಕ್ಷರನ್ನು ವೇದಿಕೆಗಾಗಲಿ, ಇನ್ನಿತರ ಚಟುವಟಿಕೆಗಳಾಗಲಿ ಆಹ್ವಾನಿಸುವುದಿಲ್ಲ. ಇಲ್ಲಿನ ಕಾಂಗ್ರೆಸ್‌ ಮುಖಂಡರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾದರೆ ನಾವು ಹೇಗೆ ಚುನಾವಣೆ ಮಾಡಬೇಕು. ಈಗ ಉಪ ಚುನಾವಣೆ ಬಂದಿದೆ ಎಂದು ನಮಗೆ ಮೊಬೈಲ್ ಕರೆ ಮಾಡಿ ಕರೆಯುತ್ತಿದ್ದಾರೆ. ಕಳೆದ ಚುನಾವಣೆಯಲ್ಲೂ ಹೀಗೇ ಆಯಿತು ಎಂದು ಅಸಮಾಧಾನ ಹೊರಹಾಕಿದರು.

ಆಗ ಸಮಾಧಾನಪಡಿಸಿದ ಸಚಿವರು, ನಾವು ಇರುತ್ತೇವೆ. ಮುಂದೆ ಹಾಗೆ ಆಗದಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗದುಕೊಂಡು ಹೋಗುತ್ತೇವೆ. ಒಗ್ಗಟ್ಟಾಗಿ ಚುನಾವಣೆ ಮಾಡಿ ಎಂದು ಸೂಚಿಸಿದರು.

ಬ್ಲಾಕ್‌ ಅಧ್ಯಕ್ಷರ ಹೊಣೆ: ಸಚಿವ ಖಾದರ್‌ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್‌ ಪಕ್ಷಕ್ಕಿಂತ ಬಿಜೆಪಿಗೆ ಹೆಚ್ಚು ಮತಗಳು ಬಿದ್ದಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರನ್ನು ಗೆಲ್ಲಿಸಬೇಕೆಂದು ಹೇಳಿದರು.

ಪಟ್ಟಣದಲ್ಲಿ 16 ವಾರ್ಡ್‌ ಗಳಿವೆ. ಪ್ರತಿ ವಾರ್ಡ್‌ಗೆ ಒಂದರಂತೆ ಕೋರ್‌ ಕಮಿಟಿ ರಚಿಸಿ ಆಯಾ ವಾರ್ಡ್‌ಗಳ ಮತದಾರರನ್ನು ಖುದ್ದಾಗಿ ಭೇಟಿ ಮಾಡಿ ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕಿಸಬೇಕು. ಗ್ರಾಮ ಬಿಟ್ಟು ಗುಳೇ ಹೋದವರ ಪಟ್ಟಿ ಮಾಡಿ ಮತದಾನಕ್ಕೆ ಕರೆಸುವ ಜವಾಬ್ದಾರಿ ಬ್ಲಾಕ್‌ ಅಧ್ಯಕ್ಷರು ಹೊರಬೇಕು ಎಂದರು.

ಅರವಿಂದ ಕಟಗಿ, ಶಂಕರಗೌಡ ದೊಡ್ಡಮನಿ, ಷಣ್ಮುಖ ಶಿವಳ್ಳಿ, ಸಕ್ರಪ್ಪ ಲಮಾಣಿ, ಅಜ್ಜಪ್ಪ ಕುಡವಕ್ಕಲ, ಅಜೀಜ್‌ ಕ್ಯಾಲಕೊಂಡ, ಖೈಯೀಮ ನಾಲಬಂದ್‌, ಇಲಿಯಾಸ್‌ ಕಿತ್ತೂರ, ಬಸವರಾಜ ದೊಡಮನಿ, ಸಲೀಮ ಕ್ಯಾಲಕೊಂಡ, ನಾಸೀರ ಭಾಣಿ, ಮಕ್ತುಮಸಾಬ್‌ ಹುಲಗೂರ ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.