ಕೋವಿಡ್ ಸಂಕಷ್ಟಕ್ಕೆ ಪ್ರದೀಪ ಶೆಟ್ಟರ ಸ್ಪಂದನೆ

ಬಡ ಕುಟುಂಬಗಳ ಹಸಿವು ನೀಗಿಸಲು ಆಹಾರ ಕಿಟ್‌ ವಿತರಣೆ ; ಕೋವಿಡ್ ವಿರುದ್ಧ ಜಾಗೃತಿ

Team Udayavani, Jun 1, 2020, 7:12 AM IST

ಕೋವಿಡ್ ಸಂಕಷ್ಟಕ್ಕೆ ಪ್ರದೀಪ ಶೆಟ್ಟರ ಸ್ಪಂದನೆ

ಹುಬ್ಬಳ್ಳಿ: ಕೋವಿಡ್ ಲಾಕ್‌ಡೌನ್‌ನಿಂದಾಗಿ ಕೈಯಲ್ಲಿ ಉದ್ಯೋಗವಿಲ್ಲದೆ, ಜೀವನ ಹೇಗೆ ಎನ್ನುವ ಚಿಂತೆಯಲ್ಲಿದ್ದ ಕುಟುಂಬಗಳಿಗೆ ವಿಧಾನಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ ದಿನಸಿ ಸಾಮಗ್ರಿಗಳನ್ನು ಅವರ ಮನೆಗಳಿಗೆ ಮುಟ್ಟಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಅಲ್ಲದೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಪ್ರತಿಯೊಂದು ಕರೆಗೂ ಸ್ಪಂದಿಸುವ ಮೂಲಕ ಬಡ ಕುಟುಂಬಗಳ ಹಸಿವನ್ನು ನೀಗಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಕರೆ ಮಾಡಿ ತಿಳಿಸಿದ ಪ್ರತಿಯೊಂದು ಸ್ಥಳಗಳಿಗೆ ತಾವೇ ಖುದ್ದಾಗಿ ಹೋಗಿ ದಿನಸಿ ಕಿಟ್‌ಗಳನ್ನು ವಿತರಿಸಿ ತೊಂದರೆಯಲ್ಲಿದ್ದ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ತೆರಳಿ ಅಲ್ಲಿನ ಜನರಿಗೆ ನೆರವು ನೀಡಿದ್ದಾರೆ. ಮೂರು ಜಿಲ್ಲೆಗಳು ಸೇರಿ ಸುಮಾರು 6,000 ಸಾವಿರಕ್ಕೂ ಅಧಿಕ ದಿನಸಿ ಕಿಟ್‌ಗಳನ್ನು ನೀಡಿ ಸಂಕಷ್ಟದಲ್ಲಿದ್ದ ಕುಟುಂಬಗಳಿಗೆ ನೆರವಾಗಿದ್ದಾರೆ.

ಕೋವಿಡ್ ವಿರುದ್ಧ ಹೋರಾಟ ಮಾಡುತ್ತಿರುವ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾರ್ಮಿಕರಿಗೂ ದಿನಸಿ ಕಿಟ್‌ಗಳನ್ನು ತಲುಪಿಸಲಾಗಿದೆ. ದಿನಸಿ ಕಿಟ್‌ನಲ್ಲಿ 5 ಕೆಜಿ ಅಕ್ಕಿ, ಗೋಧಿ, ಬೇಳೆ, ಖಾರ, ಉಪ್ಪು, ಮಸಾಲೆ ಸಾಮಗ್ರಿ, ಅಡುಗೆ ಎಣ್ಣೆ, ಸಕ್ಕರೆ, ರವಾ, ಅವಲಕ್ಕಿ ಸೇರಿದಂತೆ ಇನ್ನಿತರೆ ವಸ್ತುಗಳಿದ್ದು, ತೊಂದರೆಗೀಡಾದ ಕುಟುಂಬಗಳನ್ನು ಗುರುತಿಸಿ ಅವರಿಗೆ ತಲುಪಿಸುವ ಕೆಲಸ ಮಾಡಿದ್ದಾರೆ. ಇನ್ನು ಇವರ ನಿವಾಸಕ್ಕೆ ಆಗಮಿಸಿದ ಬಡ ಕುಟುಂಬಗಳಿಗೆ ಕಿಟ್‌ ನೀಡುವ ಮೂಲಕ ಅವರ ಹಸಿವು ನೀಗಿಸುವ ಕೆಲಸ ಮಾಡಿದ್ದಾರೆ.

ಆಹಾರ ಸಾಮಗ್ರಿಗಳ ವಿತರಣೆ ಒಂದಡೆಯಾದರೆ ಅಗತ್ಯವಿರುವ ಗ್ರಾಪಂಗಳಿಗೆ ಔಷಧಿ ಸಿಂಪರಣೆ ಸ್ಪ್ರೇಯರ್‌ಗಳನ್ನು ನೀಡಿದ್ದು, ವಿವಿಧ ಕಡೆಗೆ ಸ್ಯಾನಿಟೈಸರ್‌ಗಳನ್ನು ನೀಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಸ್ವಚ್ಛತೆ ಹಾಗೂ ಕೋವಿಡ್ ಹರಡದಂತೆ ನಿರ್ವಹಿಸುವ ಕಾರ್ಯಗಳಿಗೆ ಪ್ರದೀಪ ಶೆಟ್ಟರ ಬೆಂಬಲವಾಗಿ ನಿಂತಿದ್ದಾರೆ. ಇನ್ನುಹೋದ ಕಡೆಯಲ್ಲೆಲ್ಲಾ ಕೋವಿಡ್ ಸೋಂಕಿನಿಂದ ದೂರವಿರುವ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದಾರೆ.

ಲಾಕ್‌ಡೌನ್‌ ಎಷ್ಟೇ ದಿನ ಮುಂದುವರೆದರೂ ಚಿಂತೆಯಿಲ್ಲ. ಅಲ್ಲಿಯವರೆಗೂ ದಿನಸಿ ಕಿಟ್‌ಗಳ ವಿತರಣೆ, ಅಗತ್ಯ ಸಹಾಯಕ್ಕೆ ತಾವು ಸಿದ್ಧ ಇರುವುದಾಗಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕಾರ್ಮಿಕ ಇಲಾಖೆ ನೀಡಿದ ಕಿಟ್‌ಗಳನ್ನು ಸಹ ಅರ್ಹರನ್ನು ಗುರುತಿಸಿ ಅವರಿಗೆ ನೇರವಾಗಿ ಮುಟ್ಟಿಸುವ ಕೆಲಸ ಮಾಡಿದ್ದಾರೆ. ಸಂದಿಗ್ಧ ಪರಿಸ್ಥಿತಿಯಲ್ಲಿ ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ ಅವರ ನೆರವನ್ನು ಜನ ಮುಕ್ತ ಕಂಠದಿಂದ ಶ್ಲಾಘಿಸುತ್ತಿದ್ದಾರೆ.

ಎಸ್‌.ಎಸ್‌.ಶೆಟ್ಟರ್‌ ಫೌಂಡೇಶನ್‌ನಿಂದ ದೊಡ್ಡ ನೆರವು
ವಿಧಾನಪರಿಷತ್‌ ಸದಸ್ಯರಾಗಿ ಮೂರು ಜಿಲ್ಲೆಯ ಕೆಲ ಗ್ರಾ.ಪಂ. ಹಾಗೂ ಮಹಾನಗರದಲ್ಲಿ ಸಂಕಷ್ಟದಲ್ಲಿದ್ದ ಜನರಿಗೆ ನೆರವು ನೀಡಿರುವುದು ಒಂದಡೆಯಾದರೆ, ಎಸ್‌.ಎಸ್‌. ಶೆಟ್ಟರ ಫೌಂಡೇಶನ್‌ ಮೂಲಕ ಕೈಗೊಂಡ ಕಾರ್ಯ ಬಹು ದೊಡ್ಡದು. ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯೊಂದರಲ್ಲೇ ಬರೋಬ್ಬರಿ 30 ಸಾವಿರ ದಿನಸಿ ಕಿಟ್‌ಗಳನ್ನು ಬಡ ಕುಟುಂಬಗಳಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರದೀಪ ಶೆಟ್ಟರ ಕಾರ್ಯ ಅನನ್ಯ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಯಾರೂ ಹಸಿವಿನಿಂದ ಬಳಲಬಾರದು ಎಂದು ದಿನಸಿ ಖರೀದಿ, ಪ್ಯಾಕಿಂಗ್‌ ಹಾಗೂ ವಿತರಣೆ ಮಾಡುವ ಎಲ್ಲಾ ಕಾರ್ಯಗಳಲ್ಲಿ ಖುದ್ದಾಗಿ ನಿಂತು ಹಗಲಿರುಳು ಶ್ರಮಿಸಿದ್ದಾರೆ. ಪಕ್ಷದ ಕಾರ್ಯಕರ್ತರು, ಮುಖಂಡರು, ಜನರಿಂದ ಬಂದ ಕರೆ ಆಧರಿಸಿ ಕಷ್ಟದಲ್ಲಿದ್ದ ಕುಟುಂಬಗಳಿಗೆ ನೆರವಾಗಿದ್ದಾರೆ.

ಶಾಸಕರ ನಿಧಿಯಿಂದ 50 ಲಕ್ಷ ರೂ.

ಕೋವಿಡ್ ವಿರುದ್ಧದ ಹೋರಾಟಕ್ಕೆ ಸರಕಾರ ಮತ್ತಷ್ಟು ಸದೃಢಗೊಳ್ಳಲಿ ಎನ್ನುವ ಕಾರಣಕ್ಕೆ ತಮ್ಮ ಶಾಸಕರ ನಿಧಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ್ದಾರೆ. ಅಲ್ಲದೆ ವೈಯಕ್ತಿಕವಾಗಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಲಕ್ಷ ರೂ. ನೀಡಿ ರಾಜ್ಯದ ಜನರ ಕಲ್ಯಾಣಕ್ಕೆ ಕೈ ಜೋಡಿಸಿದ್ದಾರೆ.

ಲಾಕ್‌ಡೌನ್‌ ಸಂದರ್ಭದಲ್ಲಿ ಯಾರೂ ಹಸಿವಿನಿಂದ ತೊಂದರೆ ಅನುಭವಿಸಬಾರದು. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಸರೆಯಾಗಬೇಕು ಎಂದು ಈ ಸೇವೆ ಮಾಡುತ್ತಿದ್ದೇವೆ. ಕಷ್ಟದಲ್ಲಿರುವ ಜನರೊಂದಿಗಿದ್ದು ನೆರವಿನ ಸೇವೆಯ ಜೊತೆಗೆ ಅವರ ನೋವಿನಲ್ಲಿ ಭಾಗಿಯಾಗಿರುವುದು ತೃಪ್ತಿ ತಂದಿದೆ.

– ಪ್ರದೀಪ ಶೆಟ್ಟರ, ವಿಧಾನಪರಿಷತ್‌ ಸದಸ್ಯರು

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.