ಅನ್ನದಾತರ ಬೆನ್ನಿಗೆ ನಿಂತ ಮೋದಿ ಸರಕಾರ: ಜೋಶಿ

Team Udayavani, May 16, 2020, 9:08 AM IST

ಅನ್ನದಾತರ ಬೆನ್ನಿಗೆ ನಿಂತ ಮೋದಿ ಸರಕಾರ: ಜೋಶಿ

ಹುಬ್ಬಳ್ಳಿ: ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ 3ನೇ ಹಂತದ 11 ಸೂತ್ರಗಳ ಕ್ರಮಗಳಲ್ಲಿ ದೇಶದ ಕೃಷಿ ಹಾಗೂ ಕೃಷಿ ಆಧಾರಿತ ವೃತ್ತಿಗಳ ಪ್ರೋತ್ಸಾಹಕ್ಕೆ ಹಾಗೂ ಮೂಲ ಸೌಕರ್ಯ ನಿರ್ಮಾಣಕ್ಕೆ ಒಂದು ಲಕ್ಷ ಕೋಟಿ ರೂ.ಅನುದಾನ ಘೋಷಿಸಿ ಮೋದಿ ಸರ್ಕಾರ ದೇಶದ ಅನ್ನದಾತನ ಬೆನ್ನಿಗೆ ನಿಂತಿದೆಎನ್ನುವುದನ್ನು ಪುನರುತ್ಛರಿಸಿದ್ದಾರೆ ಸಚಿವ ಪ್ರಲ್ಹಾದ ಜೋಶಿ.

ದೇಶ ಅತ್ಯಂತ ವಿಷಮ ಪರಿಸ್ಥಿತಿಯಲ್ಲಿ ದಾಖಲೆ ಆಹಾರ ಧಾನ್ಯ ಉತ್ಪಾದನೆ ಮಾಡಿ ತೋರಿಸಿದೆ. ಹೀಗಾಗಿ ದೇಶದ ಕೃಷಿ ಚಟುವಟಿಕೆಗಳು ಮತ್ತು ಗ್ರಾಮೀಣಾಭಿವೃದ್ಧಿಗೆ ಭದ್ರ ಬುನಾದಿ ಹಾಕುವತ್ತ ಸಚಿವರು ಘೋಷಿಸಿದ ಹಲವಾರು ಕ್ರಮಗಳು ಸಹಕಾರಿಯಾಗಲಿವೆ.

ಒಂದು ಲಕ್ಷ ಕೋಟಿ ರೂ. ಅನುದಾನದಲ್ಲಿ ಆಹಾರ ಸಂಸ್ಕರಣಗಳ ಸಂಕೀರ್ಣಗಳ ವ್ಯವಸ್ಥೆಗೆ 10 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಇದರಿಂದ ಎರಡು ಲಕ್ಷ ಸಂಸ್ಕರಣ ಘಟಕಗಳಿಗೆ ಅನುಕೂಲವಾಗಲಿದೆ.

ರೈತರ ಉತ್ಪನ್ನ ಸಂರಕ್ಷಿಸಲು ಗೋದಾಮು, ಶೈತ್ಯಾಗಾರ ನಿರ್ಮಾಣ, ಟೊಮೆಟೋ, ಈರುಳ್ಳಿ, ಆಲೂಗಡ್ಡೆ ಬೆಳೆದ ರೈತರ ಉತ್ಪನ್ನ ಸಾಗಾಟದಲ್ಲಿ ಶೇ.50 ಸಬ್ಸಿಡಿಗಾಗಿ 500 ಕೋಟಿ ರೂ., ಔಷಧಿ  ಹಾಗೂ ಗಿಡಮೂಲಿಕೆ ಬೆಳೆಯುವ ರೈತರಿಗಾಗಿ ವಿಶೇಷ ಪ್ರೋತ್ಸಾಹಕ್ಕೆ ನಾಲ್ಕು ಸಾವಿರ ಕೋಟಿ ರೂ., ಗಂಗಾ ನದಿ ದಂಡೆಯಮೇಲೆ 800 ಹೆಕ್ಟೇರ್‌ ಔಷಧಿ ಗಿಡಮೂಲಿಕೆಗಳ ಕಾರಿಡಾರ್‌ ಯೋಜನೆ, ಇದರಿಂದ 25 ಲಕ್ಷ ಎಕರೆ ಪ್ರದೇಶದಲ್ಲಿ ಔಷಧಿ  ಸಸ್ಯ ಬೆಳೆಸಲು ರೈತರಿಗೆ ಪ್ರೋತ್ಸಾಹ, ಜಾನುವಾರುಗಳ ಸಂರಕ್ಷಣೆಗಾಗಿ ದೇಶದ ಎಲ್ಲ ಜಾನುವಾರುಗಳಿಗೆ ರೋಗನಿರೋಧಕ ಲಸಿಕೆ ಹಾಕುವ ಯೋಜನೆ, ಜೇನು ಕೃಷಿ ಮಾಡುವ ರೈತರಿಗೆ 500 ಕೋಟಿ ರೂ.ಗಳ ವಿಶೇಷ ಯೋಜನೆ. ಒಟ್ಟಾರೆ ದೇಶದ ಕೃಷಿ ಕ್ಷೇತ್ರಕ್ಕೆ ನೀಡಿದ ಅಭೂತಪೂರ್ವ ಕೊಡುಗೆಗಳಾಗಿವೆ. ಇವೆಲ್ಲ ಸ್ವಾವಲಂಬಿ ಕೃಷಿ ಭಾರತ ನಿರ್ಮಾಣಕ್ಕೆ ರಾಜಮಾರ್ಗದಂತಿದೆ ಎಂದು ತಿಳಿಸಿದ್ದಾರೆ.

ಅದೇ ರೀತಿ ದೇಶದ ಮೀನುಗಾರರಿಗೆ ಹಾಗೂ ಮತ್ಸೋದ್ಯಮ ಪ್ರೋತ್ಸಾಹಕ್ಕೆ 20 ಸಾವಿರ ಕೋಟಿ ರೂ. ವಿಶೇಷ ಅನುದಾನ ಮಹತ್ವದ್ದಾಗಿದೆ. ಇದರೊಂದಿಗೆ ದೇಶದ ಕೃಷಿಕರಿಗೆ ಕಾನೂನಾತ್ಮಕ ರಕ್ಷಾ ಕವಚ ನೀಡುವ ಉದ್ದೇಶದಿಂದ ಹಾಗೂ ಕೃಷಿ ಕ್ಷೇತ್ರದಲ್ಲಿ ರೈತರ ಆದಾಯ ಹೆಚ್ಚುಗೊಳಿಸುವಲ್ಲಿ ಅನುಕೂಲವಾಗಲು 1955ರ ಅಗತ್ಯ ವಸ್ತುಗಳ ಕಾನೂನಿಗೆ ತಿದ್ದುಪಡಿ ತರುವ ನಿರ್ಧಾರವೂ ಕೃಷಿ ಸ್ವಾವಲಂಬಿ ಭಾರತಕ್ಕೆ ಹೆಚ್ಚು ಅನುಕೂಲಕರವಾಗಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.