ಸೊಳ್ಳೆ ಕಾಟ ಉಲ್ಬಣ; ಸಾಂಕ್ರಾಮಿಕದ ತಲ್ಲಣ

ಪಾಲಿಕೆಯಿಂದ ಸಂತಾನೋತ್ಪತ್ತಿ ನಿಯಂತ್ರಣ ಕ್ರಮ ಉಪೇಕ್ಷೆ

Team Udayavani, Apr 19, 2022, 12:30 PM IST

9

ಧಾರವಾಡ: ಬೇಸಿಗೆ ಬಿಸಿಲಿನ ತಾಪದ ಜತೆಗೆ ಇದೀಗ ಆರಂಭಗೊಂಡಿರುವ ಮುಂಗಾರು ಪೂರ್ವ ಮಳೆ ಅಬ್ಬರದಿಂದ ಸೊಳ್ಳೆ ಕಾಟ ಶುರುವಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.

ಸಾಂಕ್ರಾಮಿಕ ರೋಗಗಳ ನಿಯಂತ್ರಿಸಲು ಆರೋಗ್ಯ ಇಲಾಖೆ ಶಿಫಾರಸುಗಳಿಗೆ ಮಹಾನಗರ ಪಾಲಿಕೆ ಮಣೆ ಹಾಕಿಲ್ಲ. ಅವಳಿನಗರದಲ್ಲಿ ಸೊಳ್ಳೆಯ ಸಂತಾನೋತ್ಪತ್ತಿ ನಿಯಂತ್ರಣಕ್ಕೆ ಫಾಗಿಂಗ್‌ ಕಾರ್ಯಕ್ಕೆ ಆದ್ಯತೆ ನೀಡಿಲ್ಲ. ಹೀಗಾಗಿ ಸೊಳ್ಳೆಗಳ ಉತ್ಪತ್ತಿ ನಿಯಂತ್ರಣ ತಪ್ಪಿದ್ದು, ಸೊಳ್ಳೆಯ ಕಾಟ ಅವಳಿನಗರದಲ್ಲಿ ಜೋರಾಗಿದೆ.

ಇದಲ್ಲದೇ ಗ್ರಾಮೀಣ ಭಾಗದಲ್ಲೂ ಗ್ರಾಪಂಗಳ ನಿರ್ಲಕ್ಷéದಿಂದ ಸೊಳ್ಳೆಯ ನಿಯಂತ್ರಣ ದಾರಿ ತಪ್ಪಿದ್ದು, ಸಾಂಕ್ರಾಮಿಕ ರೋಗಗಳ ಲಕ್ಷಣಗಳು ಕಂಡು ಬಂದಿವೆ. ಬೇಸಿಗೆಯಲ್ಲಿ ಸದ್ದಿಲ್ಲದೇ ಹೊಡೆತ ನೀಡಿರುವ ಕೀಟಜನ್ಯ ಸಾಂಕ್ರಾಮಿಕ ರೋಗಗಳು ಮಳೆಗಾಲದಲ್ಲಿ ತೀವ್ರ ಹೊಡೆತ ನೀಡುವ ಆತಂಕ ಶುರುವಾಗಿದೆ.

2021ರಲ್ಲಿ 123 ಜನರಲ್ಲಿ ಡೆಂಘೀ, 54 ಜನರಲ್ಲಿ ಚಿಕೂನ್‌ ಗುನ್ಯಾ, 6 ಜನರಲ್ಲಿ ಮಲೇರಿಯಾ, ಒಬ್ಬರಲ್ಲಿ ಮೆದುಳು ಜ್ವರ ಪತ್ತೆಯಾಗಿತ್ತು. ಇದೀಗ 2022ರ ಪ್ರಸಕ್ತ ಸಾಲಿನ ಮೂರು ತಿಂಗಳ ಅವಧಿಯಲ್ಲಿ 11 ಜನರಲ್ಲಿ ಡೆಂಘೀ, ಇಬ್ಬರಲ್ಲಿ ಚಿಕೂನ್‌ಗುನ್ಯಾ ಹಾಗೂ ಒಬ್ಬರಲ್ಲಿ ಮಲೇರಿಯಾ ಪತ್ತೆಯಾಗಿದೆ. ಆರೋಗ್ಯ ಇಲಾಖೆ ನೀಡಿರುವ ಈ ಅಂಕಿ-ಅಂಶಗಳ ಅನ್ವಯ ಸಾಂಕ್ರಾಮಿಕ ರೋಗಗಳ ಹಾವಳಿ ತಗ್ಗಿದಂತೆ ಮೇಲ್ನೋಟಕ್ಕೆ ಕಂಡು ಬಂದಿದ್ದರೂ ಒಳಹೊಡೆತ ನೀಡಿರುವುದು ಸತ್ಯ.

ಈಗಾಗಲೇ ಸೀಜನ್‌ ಜ್ವರ ದಾಳಿಯಿಟ್ಟು, ಮೈ-ಕೈ ನೋವಿನ ಬಾಧೆಯಿಂದ ಚೇತರಿಸಿಕೊಳ್ಳುತ್ತಿರುವ ಹಳ್ಳಿಗರಿಗೆ ಸಾಂಕ್ರಾಮಿಕ ರೋಗಗಳು ಸದ್ದಿಲ್ಲದೇ ಒಳಹೊಡೆತ ನೀಡಿವೆ. ಮಳೆಗಾಲದಲ್ಲಿ ಅಲ್ಲಲ್ಲಿ ಮಳೆ ನೀರು ನಿಂತು, ಚರಂಡಿ ನೀರು ಕುಡಿಯುವ ನೀರಿಗೆ ಮಿಶ್ರಣ ಹಾಗೂ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಳದಿಂದ ಸಾಂಕ್ರಾಮಿಕ ರೋಗ ಉಲ್ಬಣವಾಗಿ ಕಾಡುವ ಕಾರಣ ಕಟ್ಟೆಚ್ಚರ ವಹಿಸಬೇಕಿದೆ.

ಡೆಂಘೀ ಹಾವಳಿ:

2015ರಲ್ಲಿ 46, 2016ರಲ್ಲಿ 97, 2017ರಲ್ಲಿ 172, 2018ರಲ್ಲಿ 112, 2019ರಲ್ಲಿ 250, 2020ರಲ್ಲಿ 36 ಜನರಲ್ಲಿ ಡೆಂಘೀ ರೋಗ ದೃಢಪಟ್ಟಿತ್ತು. ಸದ್ಯ ಮೂರು ತಿಂಗಳಲ್ಲಿ 152 ಜನರಲ್ಲಿ ಡೆಂಘೀ ರೋಗ ಲಕ್ಷಣ ಕಂಡು ಬಂದಿದ್ದು, ಈ ಪೈಕಿ ತಪಾಸಣೆಗೆ ಒಳಪಡಿಸಿದಾಗ 11 ಜನರಲ್ಲಿ ದೃಢಪಟ್ಟಿದೆ. ಅದರಲ್ಲೂ ಮಾರ್ಚ್‌ ತಿಂಗಳಲ್ಲಿಯೇ ಐದು ಜನರಲ್ಲಿ ಡೆಂಘಿ ದೃಢಪಟ್ಟಿದೆ. ಇನ್ನು ಹುಬ್ಬಳ್ಳಿಯ ಶಹರ ವ್ಯಾಪ್ತಿಯಲ್ಲಿ ನಾಲ್ಕು, ಧಾರವಾಡ ಶಹರ ವ್ಯಾಪ್ತಿಯಲ್ಲಿ ಮೂರು, ಕುಂದಗೋಳ ತಾಲೂಕಿನಲ್ಲಿ ಎರಡು, ಕಲಘಟಗಿ ತಾಲೂಕಿನಲ್ಲಿ ಒಂದು ಡೆಂಘೀ ಪ್ರಕರಣಗಳು ಪತ್ತೆಯಾಗಿವೆ.

ಚಿಕೂನ್‌ಗುನ್ಯಾ ಗುನ್ನ:

2015ರಲ್ಲಿ 17, 2016ರಲ್ಲಿ 6, 2017ರಲ್ಲಿ 11, 2018ರಲ್ಲಿ 85, 2019ರಲ್ಲಿ 121, 2020ರಲ್ಲಿ 17 ಜನರಲ್ಲಿ ಚಿಕೂನ್‌ಗುನ್ಯಾ ಕಾಣಿಸಿಕೊಂಡು ತೊಂದರೆ ಉಂಟು ಮಾಡಿತ್ತು. ಇದೀಗ ಈ ಮೂರು ತಿಂಗಳಲ್ಲಿ ಚಿಕೂನ್‌ಗುನ್ಯಾ ರೋಗ ಲಕ್ಷಣವುಳ್ಳ 104 ಜನರನ್ನು ತಪಾಸಣೆಗೆ ಒಳಪಡಿಸಿದಾಗ ಇಬ್ಬರಲ್ಲಿ ದೃಢಪಟ್ಟಿದ್ದು, ಅದು ಮಾರ್ಚ್‌ ತಿಂಗಳಲ್ಲಿಯೇ ರೋಗ ಪತ್ತೆಯಾಗಿದೆ. ಧಾರವಾಡ ಗ್ರಾಮೀಣ ಹಾಗೂ ಶಹರ ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ಕಂಡು ಬಂದಿದ್ದು, ನಿಧಾನವಾಗಿಯೇ ಚಿಕೂನ್‌ಗುನ್ಯಾ ಗುನ್ನ ನೀಡಲು ಶುರು ಮಾಡಿಬಿಟ್ಟಿದೆ.

ಮಲೇರಿಯಾ-ಮೆದುಳು ಜ್ವರ ಬಾಧೆ:

2015ರಲ್ಲಿ 96, 2016ರಲ್ಲಿ 78, 2017ರಲ್ಲಿ 76, 2018ರಲ್ಲಿ 25, 2019ರಲ್ಲಿ 17, 2020ರಲ್ಲಿ 8 ಜನರಲ್ಲಿ ಕಾಣಿಸಿಕೊಂಡಿದ್ದ ಮಲೇರಿಯಾ ರೋಗವು, ಮೂರು ತಿಂಗಳಲ್ಲಿ ಕುಂದಗೋಳದಲ್ಲಿ ಒಬ್ಬರಲ್ಲಿ ಮಲೇರಿಯಾ ಪತ್ತೆಯಾಗಿದ್ದರೆ, ಮೆದುಳು ಜ್ವರ ಲಕ್ಷಣಗಳು ಕಂಡು ಬಂದರೂ ತಪಾಸಣೆಯಲ್ಲಿ ದೃಢಪಟ್ಟಿಲ್ಲ. ಕೋವಿಡ್‌ ಸೋಂಕಿನ ರೋಗಲಕ್ಷಣಗಳು ಹಾಗೂ ಕೀಟಜನ್ಯ ಸಾಂಕ್ರಾಮಿಕ ರೋಗಗಳ ಗುಣಲಕ್ಷಣಗಳಲ್ಲಿ ಸಾಮ್ಯತೆ ಇರುವ ಕಾರಣ ತಪಾಸಣೆಗೆ ಜನರಿಂದ ಹಿಂದೇಟು ಕಂಡುಬರುತ್ತಿದೆ.

ಜಿಲ್ಲೆಯಲ್ಲಿ ಕೀಟ ಜನ್ಯದಿಂದ (ಸೊಳ್ಳೆ) ಬರುವ ಡೆಂಘೀ, ಚಿಕೂನ್‌ ಗುನ್ಯಾ, ಮಲೇರಿಯಾದಂತಹ ರೋಗಗಳ ಹಾವಳಿಯು ಬೇಸಿಗೆಯ ಕಾಲದಲ್ಲಿ ಕಂಡು ಬಂದಿಲ್ಲ. ಈ ಸಮಯದಲ್ಲಿ ರೋಗಗಳ ಹಾವಳಿ ಮೇಲ್ನೋಟಕ್ಕೆ ತಗ್ಗಿದ್ದರೂ ಮಳೆಗಾಲದಲ್ಲಿ ಉಲ್ಬಣ ಆಗುವ ಆತಂಕ ಇರುವ ಕಾರಣ ಈ ಬಗ್ಗೆ ಅತೀ ಹೆಚ್ಚು ಕಾಳಜಿ ವಹಿಸುವುದು ಸೂಕ್ತ.  –ಡಾ| ಮಂಜುನಾಥ ಎಸ್‌,. ಜಿಲ್ಲಾ ಮಲೇರಿಯಾ ಅಧಿಕಾರಿಗಳು, ಧಾರವಾಡ  

-ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.