ಭ್ರಷ್ಟಾಚಾರಿಗಳು, ಗೂಂಡಾಗಳಿಗೆ ಸರ್ಕಾರದ ರಕ್ಷಣೆಯಿಲ್ಲ: ಸಚಿವ ಕೆ. ಎಸ್. ಈಶ್ವರಪ್ಪ

Team Udayavani, Sep 7, 2019, 10:38 AM IST

ಹುಬ್ಬಳ್ಳಿ:  ಭ್ರಷ್ಟಾಚಾರಿಗಳು, ಗೂಂಡಾಗಳು ಹಾಗೂ ಕೊಲೆಗಡುಕರಿಗೆ ಕೇಂದ್ರ  ಹಾಗೂ ರಾಜ್ಯ ಸರ್ಕಾರ ರಕ್ಷಣೆ  ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಲಾಗಿದೆ ಎಂದು ಸಚಿವ  ಕೆ. ಎಸ್. ಈಶ್ವರಪ್ಪ ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಜಿಪಂ ಮಾಜಿ ಸದಸ್ಯಯೋಗೀಶ್ ಗೌಡ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ತನಿಖೆ ನಡೆಸಲಾಗುತ್ತಿದೆ. ತಪಿತಸ್ಥರಿಗೆ ಕಠಿಣ ಕ್ರಮ ಜರುಗಿಸಲು ಈ ಪ್ರಕರಣ ಸಿಬಿಐಗೆ ನೀಡಲಾಗಿದೆ ಎಂದು ಹೇಳಿದರು. ಯಾವುದೇ ಸಂದರ್ಭದಲ್ಲಿ ಭ್ರಷ್ಟಾಚಾರಿಗಳು, ಕೊಲೆಗಡುಕರು, ಗೂಂಡಾಗಳ ಬೆನ್ನಿಗೆ ನಮ್ಮ ಸರ್ಕಾರ ನಿಲ್ಲುವುದಿಲ್ಲ ಎಂದರು.

ಇದೇ ವೇಳೆಯಲ್ಲಿ  ನಾಳೆ ಮತ್ತು ನಾಡಿದ್ದು ಬೆಳಗಾವಿ ಸುವರ್ಣ ಸೌಧದಲ್ಲಿ ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿ ಅಧಿಕಾರಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸ್ಥಾಯಿ  ಸಮಿತಿ ಅಧ್ಯಕ್ಷ, ಉಪಾಧ್ಯಕ್ಷರ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಇಂದು ಬೆಳಗಾವಿ,  ಚಿಕ್ಕೋಡಿ ವಿಭಾಗದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ. ನೆರೆ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ  ಕೇಂದ್ರ ಸರ್ಕಾರ ಸಚಿವರು, ಅಧಿಕಾರಗಳನ್ನು ಕಳಿಸಿ ಸಮೀಕ್ಷೆ ಮಾಡಿಸಿದ್ದೇನೆ. ಆದಷ್ಟು ಬೇಗ ಕೇಂದ್ರ ಸರ್ಕಾರ ನೆರೆ ಪರಿಹಾರ ಹಣ ಬಿಡುಗಡೆ ಮಾಡುತ್ತದೆ ಎಂಬ ನಂಬಿಕೆ ಇದೆ. ನೆರೆ ಹಾವಳಿಗೆ ಸಂಬಂಧಿಸಿ ಈಗ ತಾತ್ಕಾಲಿಕವಾಗಿ ಸಮಸ್ಯೆಗಳನ್ನು ಬಗೆಹರಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ. ನೆರೆ ಪರಿಹಾರ ಶೇ. 99 ಭಾಗ ವಿತರಣೆಯಾಗಿದೆ. ಮುಂದಿನ ದಿನಗಳಲ್ಲಿ ಸಂತ್ರಸ್ತರಿಗೆ  ಶಾಶ್ವತ ಪರಿಹಾರ  ಕಲ್ಪಿಸಲಾಗುವುದು ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ