ದೇಶದಲ್ಲಿ ಮತ್ತೆ ಲಾಕ್‌ಡೌನ್‌ ಅಗತ್ಯವಿಲ್ಲ: ಸಚಿವ ಜೋಶಿ

Team Udayavani, Jul 3, 2020, 1:58 PM IST

ದೇಶದಲ್ಲಿ ಮತ್ತೆ ಲಾಕ್‌ಡೌನ್‌ ಅಗತ್ಯವಿಲ್ಲ: ಸಚಿವ ಜೋಶಿ

ಹುಬ್ಬಳ್ಳಿ: ಇತರೆ ದೇಶಗಳಿಗೆ ಹೋಲಿಸಿದರೆ ಕೋವಿಡ್ ಸೋಂಕು ನಮ್ಮಲ್ಲಿ ನಿಯಂತ್ರಣದಲ್ಲಿದೆ. ಹೀಗಾಗಿ ಲಾಕ್‌ ಡೌನ್‌ ಮಾಡುವ ಅಗತ್ಯವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಸೋಂಕು ಹಬ್ಬುತ್ತಿರುವ ಸಂದರ್ಭದಲ್ಲಿ ಲಾಕ್‌ಡೌನ್‌ ಮಾಡುವುದು ಅನಿವಾರ್ಯವಾಗಿದ್ದು, ಅಂದಿನ ಸಂದರ್ಭದಲ್ಲಿ ಲಾಕ್‌ಡೌನ್‌ ಮಾಡದಿದ್ದರೆ ಆರೋಗ್ಯ ಸೌಲಭ್ಯದಿಂದ ಹಿಡಿದು ಪ್ರತಿಯೊಂದು ಸಮಸ್ಯೆ ಅನುಭವಿಸಬೇಕಾಗಿತ್ತು. ಲಾಕ್‌ಡೌನ್‌ ಅವಧಿಯಲ್ಲಿ ಆರೋಗ್ಯ ವ್ಯವಸ್ಥೆಯನ್ನು ಸಾಕಷ್ಟು ಮೇಲ್ದರ್ಜೆಗೇರಿಸಲಾಗಿದೆ. ಆದರೆ ಇದೀಗ ಲಾಕ್‌ಡೌನ್‌ ಅಗತ್ಯವಿಲ್ಲ ಎಂದರು.

ಲಾಕ್‌ಡೌನ್‌ ಇಲ್ಲ ಎಂದು ಜನರು ಮೈ ಮರೆಯುವಂತಿಲ್ಲ. ನಿರ್ಲಕ್ಷ್ಯ ವಹಿಸಿದರೆ ಸೋಂಕು ತಗಲುವ ಸಾಧ್ಯತೆಗಳಿದ್ದು, ಸರ್ಕಾರದ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಮುಂದಿನ 4-5 ತಿಂಗಳು ಎಚ್ಚರ ವಹಿಸುವುದು ಅತ್ಯಗತ್ಯವಾಗಿದೆ. ಆರೋಗ್ಯ ಸೇವೆ ಸಮರ್ಪಕವಾಗಿ ದೊರೆಯುವ ನಿಟ್ಟಿನಲ್ಲಿ ದೊಡ್ಡ ಮಟ್ಟದ ಆಸ್ಪತ್ರೆಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದರು.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆ ನೀಡಲು ಖಾಸಗಿ ಆಸ್ಪತ್ರೆಗಳು ಮುಂದೆ ಬರಬೇಕು. ಆರಂಭದಲ್ಲಿ ಪಿಪಿಇ ಕಿಟ್‌ ಸೇರಿದಂತೆ ಅಗತ್ಯ ಸುರಕ್ಷತಾ ಸಾಧನಗಳು ಇರಲಿಲ್ಲ. ಇದೀಗ ನಿತ್ಯ 4 ಲಕ್ಷ ಪಿಪಿಇ ಕಿಟ್‌ಗಳನ್ನು ಉತ್ಪಾದಿಸಲಾಗುತ್ತಿದೆ. ಕೆಲ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿಕೊಂಡು ಚಿಕಿತ್ಸೆ ನೀಡಲು ಮುಂದಾಗಬೇಕು. ಈ ಕುರಿತು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದು, ಅದರಂತೆ ರಾಜ್ಯ ಸರ್ಕಾರಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಚರ್ಚಿಸಿದ್ದು, ಸಕಾರಾತ್ಮಕ ಸ್ಪಂದನೆ ನೀಡಿರುವ ಮಾಹಿತಿಯಿದೆ ಎಂದರು.

ಚೀನಾ ವಿಚಾರದಲ್ಲಿ ಪ್ರತ್ಯುತ್ತರ ನೀಡಲು ಭಾರತೀಯ ಸೇನೆ ಸರ್ವಸನ್ನದ್ಧವಾಗಿದ್ದು, ತಕ್ಕ ಉತ್ತರವನ್ನೂ ನೀಡುತ್ತಿದೆ. ಈ ವಿಚಾರದಲ್ಲಿ ಸೇನೆಗೆ ಕೇಂದ್ರ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ದೇಶದ ನಾಯಕತ್ವ ಸದೃಢವಾಗಿದ್ದು, ಮಾನಸಿಕ ಹಾಗೂ ಭೌತಿಕ ಒತ್ತಡಗಳಿಗೆ ಮಣಿಯುವ ಪ್ರಶ್ನೆಯೇ ಇಲ್ಲ ಎಂದರು.

ಕಾಂಗ್ರೆಸ್‌ ಪುಟಿದೇಳುವ ಕೆಲಸ ಮಾಡುತ್ತಿದ್ದು, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ ಎಂಬುದನ್ನು ಅರ್ಥಮಾಡಿಕೊಳ್ಳು ವವರೆಗೂ ಅದು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮರೆತು ಆಡಳಿತ ಮಾಡಿದ ಪರಿಣಾಮ ಇಂದಿಗೂ ಕೆಲ ಕ್ಷೇತ್ರಗಳನ್ನು ಸುಧಾರಿಸಲು ಸಾಧ್ಯವಾಗುತ್ತಿಲ್ಲ. -ಪ್ರಹ್ಲಾದ ಜೋಶಿ, ಕೇಂದ್ರ ಸಚಿವ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.