ಬಾಲವಿಕಾಸ ಸಮಿತಿ ರಚನೆಗೆ ವಿರೋಧ


Team Udayavani, Apr 19, 2018, 5:36 PM IST

19-April-24.jpg

ರಾಮದುರ್ಗ: ಅಂಗನವಾಡಿ ಕೇಂದ್ರಗಳ ನಿರ್ವಹಣೆಗೆ ಇರುವ ಬಾಲ ವಿಕಾಸ ಸಮಿತಿಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಮಾದರಿಯಲ್ಲಿ ಮಾಡಲಾಗುತ್ತಿರುವ ಸರಕಾರದ ಆದೇಶವನ್ನು ವಾಪಸ್‌ ಪಡೆಯಬೇಕು ಹಾಗೂ ಅಂಗನವಾಡಿ ನೌಕರರಿಗೆ ಪ್ರತಿವರ್ಷ ನೀಡುತ್ತಿರುವ ಬೇಸಿಗೆ ರಜೆಯನ್ನು ಕಾರ್ಯಕರ್ತೆ ಹಾಗೂ ಸಹಾಯಕಿಗೆ ಏಕ ಕಾಲಕ್ಕೆ ನೀಡಬೇಕು ಎಂದು ಒತ್ತಾಯಿಸಿ ತಾಲೂಕಾ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮಾದರಿಯಲ್ಲಿ ಬಾಲ ವಿಕಾಸ ಸಮಿತಿ ರಚನೆಯಾದರೆ ನೌಕರರು ಆ ಸಮಿತಿಯ ಆದೇಶದಂತೆ ಕಾರ್ಯ ನಿರ್ವಹಿಸಬೇಕಾಗುತ್ತದೆ. ಪೂರಕ ಪೌಷ್ಟಿಕ ಆಹಾರ ನೀಡುವ ದಿನಗಳು 300 ಆಗಿಲ್ಲವೆಂಬ ಒಂದೇ ನೆಪ ಮಾಡಿ ಶಿಕ್ಷಕಿಗೆ 15 ದಿನ ಮೊದಲು ರಜೆ ಹಾಗೂ ನಂತರ 15 ದಿನ ಸಹಾಯಕಿಗೆ ರಜೆ ಎಂದು ಸರಕಾರ ಆದೇಶ ಮಾಡಿದ್ದು ಸರಿಯಲ್ಲ. ಕಾರಣ ಸರಕಾರ ಮಾಡಿದ ಆದೇಶವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಕಿಯ ಜೊತೆಗೆ ಸಹಾಯಕಿ ಒಟ್ಟಿಗೆ ಇದ್ದಲ್ಲಿ ಮಾತ್ರ ಎಲ್ಲ ಕೆಲಸಗಳು ಸುಗಮವಾಗಿ ನಡೆಯುತ್ತವೆ. ಈ ಮೊದಲಿನಂತೆ ಏಕಕಾಲಕ್ಕೆ ಶಿಕ್ಷಕಿ ಹಾಗೂ ಸಹಾಯಕಿಗೆ ಬೇಸಿಗೆ ರಜೆ ನೀಡಬೇಕು ಎಂದು ಅವರು ಮನವಿ ಮೂಲಕ ಒತ್ತಾಯಿಸಿದ್ದಾರೆ. ಮನವಿ ಸ್ವೀಕರಿಸಿದ ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಖಾದರಬಿ ಲಕ್ಷ್ಮೇಶ್ವರ ಮಾತನಾಡಿ, ಮನವಿಯನ್ನು ಮೇಲಧಿಕಾರಿಗಳಿಗೆ ಗಮನಕ್ಕೆ ತರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಗೈಬು ಜೈನೆಖಾನ, ಸಂಘದ ಅಧ್ಯಕ್ಷೆ ಸರಸ್ವತಿ ಮಾಳಶೆಟ್ಟಿ, ಮುಖಂಡರಾದ ರೇಖಾ ಪಟ್ಯಾಳ, ವಿಜಯಲಕ್ಷ್ಮೀ ಸಿದ್ಧಿಭಾಂವಿ, ಬೋರಮ್ಮ ತೆಕ್ಕಿ, ಸ್ವೇತಾ ಕೊಳ್ಳಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.